ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ- ಡಿಕೆಶಿ
ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ- ಡಿಕೆಶಿ ಬೆಳಗಾವಿ, ಜ.20-“ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ.…