ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿ.ಎಂ ಪುನರುಚ್ಚಾರ
ಬೆಳಗಾವಿ ಏ 20- ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು , ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ…