Girl in a jacket

Author kendhooli_editor

ಕೆ‌.ಎಸ್.ಆರ್.ಟಿ.ಸಿ – ಅಪಘಾತದಲ್ಲಿ ಮೃತರಾದವರಿಗೆ ಒಂದು ಕೋಟಿ ಪರಿಹಾರ ವಿತರಣೆ

ಬೆಂಗಳೂರು, ಏ, 26-ಇದೇ ಪ್ರಪ್ರಥಮ ಬಾರಿಗೆ ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದು ಕೊಂಡ ಸಿಬ್ಬಂದಿಗೆ ರೂ. 25.00 ಲಕ್ಷ ಹಾಗೂ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ತಲಾ ರೂ.1.00 ಕೋಟಿಯಂತೆ ಇಬ್ಬರಿಗೆ ರೂ.2.00 ಕೋಟಿ ಹಾಗೂ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ (31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ) ರೂ.3.10 ಕೋಟಿ ಪರಿಹಾರ ವಿತರಣೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿತರಣೆ ಮಾಡಿದರು. ಇಂದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ…

ಯೆಮೆನ್ ದೇಶದ ಮಹಿಳೆಗೆ ಯಶಸ್ವಿ ಬೈಲಾಟರಲ್‌ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್‌ ಆಸ್ಪತ್ರೆ

ಬೆಂಗಳೂರು,ಏ,26- ವಿಶ್ವದಲ್ಲೇ ಅತ್ಯಾಧುನಿಕ ವೈದ್ಯಕೀಯ ನವೀನ ತಂತ್ರಜ್ಞಾನವಾದ “ವೆಲಿಸ್‌ ರೊಬೋಟ್‌” ಬಳಸಿಕೊಂಡು ಯೆಮೆನ್‌ ದೇಶದ 63 ವರ್ಷದ ಮಹಿಳೆಗೆ ಯಶಸ್ವಿಯಾಗಿ ಬೈಲಾಟರಲ್‌ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರು ನಡೆಸಿದ್ದು, ದೇಶದಲ್ಲೇ “ವೆಲಿಸ್‌ ರೊಬೋಟ್‌” ತಂತ್ರಜ್ಞಾನ ಬಳಸುತ್ತಿರುವ ಏಕೈಕ ಆಸ್ಪತ್ರೆಯೂ ಆಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಪ್ರಧಾನ ನಿರ್ದೇಶಕರಾದ ಡಾ. ನಾರಾಯಣ್‌ ಹುಲ್ಸೆ, ಇಂದು ಸಾಕಷ್ಟು ಜನರು ಅದರಲ್ಲೂ ವಯಸ್ಸಾದವರು ಮೊಣಕಾಲು ಹಾಗೂ ಕೀಲು ನೋವಿಗೆ ತುತ್ತಾಗುತ್ತಾರೆ. ತೆರೆದ ಶಸ್ತ್ರಚಿಕಿತ್ಸೆಗೆ ಹೆದರಿ ಯಾರೂ…

ನಾಯಕನಹಟ್ಟಿ;1,45 ಲಕ್ಷ ರೂ ಕ್ರಿಯಾ ಯೋಜನೆ ಗೆ ಅನುಮೋದನೆ

ವರದಿ :- ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಏ26- :2025-26 ನೇ ಸಾಲಿನ ಸರ್ಕಾರದಿಂದ ಬಿಡುಗಡೆಯಾಗುವ 145:00 ಲಕ್ಷಗಳ ಅನುದಾನದಲ್ಲಿ ವಿವಿಧ ಯೋಜನೆಗಳ ಅನುದಾನಕ್ಕೆ ಕ್ರಿಯಾಯೋಜನೆ ತಯಾರಿಸಿ ಅನುಮೋದಿಸಲಾಯಿತು. ನಾಯಕನಹಟ್ಟಿ ಪಟ್ಟಣ ಪಂಚಾಯತಿಯ ಸಭಾಂಗಣದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಟಿ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2025-26 ನೇ ಸಾಲಿನ ಎಸ್‌,ಎಫ್‌,ಸಿ, ಮುಕ್ತ ನಿಧಿ ಯೋಜನೆಯಲ್ಲಿ ಬಂಡವಾಳ ಆಸ್ತಿಗಳ ಸೃಜನಗಾಗಿ 6:00 ಲಕ್ಷಗಳು, ಎಸ್, ಸಿ,ಎಫ್, ಸಿ ಯೋಜನೆಗೆ 9:00 ಲಕ್ಷಗಳು ಟಿ ಎಸ್ ಪಿ ಯೋಜನೆಗೆ 4:00…

ಕಣ್ಣಿಗಳ ತೊಂದರೆ ನಿವಾರಣೆಗೆ ಮದರ್ ತೆರಿಸಾ ಸಂಸ್ಥೆ ಸದಾ ಮುಂದು

ವರದಿ :ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಏ,26- ಮಾನವನ ದೇಹದಲ್ಲಿ ಯಾವುದಾದರೂ ಒಂದು ಅಂಗ ಕಡಿಮೆಯಾದರೂ ಜೀವಿಸಬಹುದು ಆದರೆ ಮನುಷ್ಯನಿಗೆ ಕಣ್ಣುಗಳು ಇಲ್ಲ ಎಂದರೆ ಜೀವಿಸುವುದು ಕಷ್ಟ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಟಿ ಮಂಜುಳಾ ರವರು ಅಭಿಪ್ರಾಯಸಿದರು ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮದರ್ ತೆರೇಸಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ರಿ ) ನಾಯಕನಹಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಸೇನೆ, ಸಂಘಟನೆಗಳ ವತಿಯಿಂದ ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್ ಶಂಕರ್ ಕಣ್ಣಿನ ಆಸ್ಪತ್ರೆ ಶಿವಮೊಗ್ಗ…

ಸಿಎಂ ಸಿದ್ದರಾಮಯ್ಯನವರ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಲಿ: ಆರ್.ಅಶೋಕ

ಬೆಂಗಳೂರು, ಏಪ್ರಿಲ್‌ 26-ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ. ಈ ಕುರಿತು ಸಿಎಂ ಸಿದ್ದರಾಮಯ್ಯ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ ನಾಗರಿಕರು ಸಂಭ್ರಮಿಸುತ್ತಿರುವಾಗ ಅವರನ್ನು ಕೊಂದಂತೆಯೇ, ಜಮ್ಮು ಕಾಶ್ಮೀರದಲ್ಲೂ ಭಯೋತ್ಪಾದಕರು ಹಿಂದೂಗಳ ಹತ್ಯೆ ಮಾಡಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಕ್ಷಮಿಸಬಹುದು. ದೇಶಕ್ಕೇನಾದರೂ…

ಅಭಿವೃದ್ಧಿಗೆ ನಾವು ಹಣ ಕೊಡ್ತಿದ್ದೀವಿ. ಜನ ಖುಷಿಯಾಗಿದ್ದಾರೆ. ಬಿಜೆಪಿ ಗೆ ಹೊಟ್ಟೆಯುರಿ: ಸಿ.ಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ ಏ 27-ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆಯುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟೀಕಿಸಿದರು. ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ‌ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300 ಕ್ಕೂ ಹೆಚ್ಚು ರೈತರಿಗೆ 100 ಕೋಟಿಗೂ…

ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿದ ಪಕ್ಷ ಕಾಂಗ್ರೆಸ್: ಸಿ.ಎಂ

ಮೈಸೂರು ಏ 26- ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು ಗೋಲ್ವಾಲ್ಕರ್ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ಧ ಇದ್ದವರು ಎನ್ನುವ ಸ್ಪಷ್ಟ ತಿಳಿವಳಿಕೆ ಕಾರ್ಯಕರ್ತರಿಗೆ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ವಿಶೇಷ ಉಪನ್ಯಾಸ ನೀಡಿದರು.ಸ್ವಾತಂತ್ರ್ಯ ಹೋರಾಟ ಮತ್ತು‌ ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ ಪಾತ್ರ ನಿರ್ವಹಿಸಿದೆ. ದೇಶಕ್ಕೆ…

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು- ಸಿಎಂ ಸಿದ್ದರಾಮಯ್ಯ

ಮೈಸೂರು, ಏ, 26: ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು. *ಕಾಶ್ಮೀರದಲ್ಲಿ ಭದ್ರತೆ ಹೆಚ್ಚಿಸಬೇಕಿತ್ತು* ಕಾಶ್ಮೀರದ ಉಗ್ರರ ದಾಳಿ ಘಟನೆಯಲ್ಲಿ ಭದ್ರತಾ ವೈಫಲ್ಯವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವ ಬಗ್ಗೆ…

ಕನ್ನಡ ಸಾಹಿತ್ಯ ಪರಿಷತ್ತಿಗೆ ಆಡಳಿತಾಧಿಕಾರಿ ನೇಮಿಸಲು ಸಾಹಿತಿಗಳು, ಕನ್ನಡಪರ ಸಂಘಟನೆಗಳ ನಿರ್ಣಯ

ಆರ್ ಜಿ ಹಳ್ಳಿ ನಾಗರಾಜ್, ಸಾಹಿತಿ,ಪತ್ರಕರ್ತರು ಬೆಂಗಳೂರು,ಏ,25-ಕನ್ನಡ ಸಾಹಿತ್ಯ ಪರಿಷತ್ತು ಲಂಗೂ ಲಗಾಮಿಲ್ಲದೆ ಓಡುವ ಹುಚ್ಚು ಕುದುರೆಯಂತಾಗಿದೆ. ಅಲ್ಲಿ ಕೂತ ರಾಜ್ಯಾಧ್ಯಕ್ಷರು ಸಾಹಿತ್ಯ ಚಟುವಟಿಕೆ ಬಿಟ್ಟು ಆಜೀವ ಸದಸ್ಯರು ಹಾಗೂ ಅವರಿಂದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರ ಮೇಲೆ ಕ್ರಮ ಜರುಗಿಸುತ್ತ, ಅವರ ಪ್ರಾಥಮಿಕ ಸದಸ್ಯತ್ವ ರದ್ದುಪಡಿಸುವ ಹುಚ್ಚು ನಿರ್ಧಾರ ಕೈಗೊಂಡು; 3 ನೇ ಬಾರಿಗೆ ಬೈಲಾ ತಿದ್ದುಪಡಿಗೆ ಕೈ ಹಾಕಿದ್ದು ಭಾರಿ ಕೋಲಾಹಲ ಉಂಟು ಮಾಡಿದೆ. ತಮಗೆ ಪರಮಾಧಿಕಾರ ಬೇಕೆಂದು ಹಲವು ತಿದ್ದುಪಡಿ ಮಾಡಲು ಹೊರಟ ಜೋಶಿ…

ಲಂಚ ಪಡೆಯುವ ವೇಳೆ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಲೋಕಾಯುಕ್ತ ದಾಳಿ

ಬೆಂಗಳೂರು ಏ.24 -ಪಾನ್ ಮಸಾಲ ಅಕ್ರಮ ಸಾಗಣಿಗೆ ಅನುಕೂಲ ಮಾಡಿಕೊಡಲು 20 ಲಕ್ಷ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್.ಅವರನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಇಂದು ಸಂಜೆ ನಾಗರಭಾವಿ ನಮ್ಮೀರ ತಿಂಡಿ ಹೊಟೇಲ್ ಹತ್ತಿರ ಆರೋಪಿ ವಾಣಿಜ್ಯ ತೆರಿಗೆ ಪರಿವೀಕ್ಷಕ ನಿಜಾನಂದಮೂರ್ತಿ ಎಂ.ಆರ್. ಅವರು ಖಾಸಗಿ ವ್ಯಕ್ತಿಯಾದ ಮನೋಜ್ ಎಂ ಎಂಬುವವರ ಕಡೆಯಿಂದ 20 ಲಕ್ಷ ರೂ. ಲಂಚದ ಹಣವನ್ನು ಪಡೆದುಕೊಳ್ಳುತ್ತಿರುವಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸರು ದಾಳಿ…

ಸಾರ್ವಜನಿಕರಿಂದ ದೂರುಗಳು ಬಾರದಂತೆ ಘನತ್ಯಾಜ್ಯ ನಿರ್ವಹಣೆ ಮಾಡಿ – ಲೋಕಾಯುಕ್ತ ನ್ಯಾ. ಬಿ.ಎಸ್.ಪಾಟೀಲ್

ಬೆಂಗಳೂರು, ಏ, 24- ಸಾರ್ವಜನಿಕರಿಮದ ದೂರುಗಳು ಬಾರದ ರೀತಿಯಲ್ಲಿ ಘನತ್ಯಾಜ್ಯದ ಸೂಕ್ತ ನಿರ್ವಹಣೆ ಮಾಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಕೆಲಸ ನಿರ್ವಹಿಸಬೇಕೆಂದು ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್. ಪಾಟೀಲ್ ಸೂಚಿಸಿದರು. ಕಸ ವಿಲೇವಾರಿ, ಬೀದಿ ನಾಯಿಗಳ ಹಾವಳಿ, ಕೆರೆ ನೈರ್ಮಲೀಕರಣ ಹಾಗೂ ಇನ್ನಿತರ ವಿಷಯಗಳ ಕುರಿತು ಸ್ವಯಂ ಪ್ರೇರಿತ ದೂರು ದಾಖಲಿಸಿ ಬಿ.ಬಿ.ಎಂಪಿ ವಲಯದ ಅಧಿಕಾರಿಗಳನ್ನು ಪ್ರಕರಣ ಸಂಬಂಧ ಇಂದು ತಮ್ಮ ಕಚೇರಿಯಲ್ಲಿ ವಿಚಾರಣೆ ನಡೆಸಿದರು. ನಗರದಲ್ಲಿ ಬೀದಿ ನಾಯಿಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಇವುಗಳಿಗೆ ಸಂತಾನಹರಣ…

ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ  ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

ಚಾಮರಾಜನಗರ, ಏ.24-ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ತಮ್ಮ ಇಲಾಖೆ ವತಿಯಿಂದ ಕೈಗೊಂಡಿರುವ…

ಮೈಸೂರು ವಿಭಾಗದ 3647 ಕೋಟಿ42 ಲಕ್ಷದ ಕಾಮಗಾರಿಗೆ ಸಂಪುಟ ಸಭೆ ಅನುಮೋದನೆ

ಮಲೇಮಹಾದೇಶ್ವರ ಬೆಟ್ಟ,(ಮೈಸೂರು)ಏ,23-ಮೈಸೂರು ವಿಭಾಗದಲ್ಲಿ 3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ  ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗಿದೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಮೈಸೂರು   ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ…

ಶ್ರೀನಗರದಲ್ಲಿ ಉಗ್ರರ ಅಟ್ಟಹಾಸ,ಹಲವು ಪ್ರವಾಸಿಗರ ಸಾವು

ಶ್ರೀನಗರ ಏ,22: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿಭಯೋತ್ಪಾದಕ ದಾಳಿ ನಡೆದಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಮಾಡಲಾಗಿದೆ. ಭಯೋತ್ಪಾದಕರ ಈ ಗುಂಡಿನ ದಾಳಿಯಲ್ಲಿ 26ಪ್ರವಾಸಿಗರು ಸಾವನ್ನಪ್ಪಿದ್ದಸರೆ ಇನ್ನು ಎಂದು ವರದಿಯಾಗಿದೆ. ಗಾಯಗೊಂಡ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಮೂಲಗಳು ಹೇಳುವಂತೆ ಭಯೋತ್ಪಾದಕರು ಮೊದಲು ಪ್ರವಾಸಿಗರಿಂದ ಹೆಸರುಗಳನ್ನು ಕೇಳಿದರು. ಆಗ ಪ್ರವಾಸಿಗರು ತಮ್ಮ ಹಿಂದೂ ಹೆಸರುಗಳನ್ನು ಹೇಳಿದಾಗ ಪ್ರವಾಸಿಗರ ಮೇಲೆ ಅವರು ಗುಂಡು ಹಾರಿಸಿದ್ದಾರೆ…

ನಾಗಮಂಗಲದ ಅಭಿವೃದ್ಧಿ ಮಾಡಿದ್ದು ಚೆಲುವರಾಯಸ್ವಾಮಿ: ಕ್ರೆಡಿಟ್ ತಗೊಂಡಿದ್ದು ಬೇರೆ ಯಾರೋ: ಸಿಎಂ

ಮಂಡ್ಯ (ನಾಗಮಂಗಲ) ಏ 22-ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ.…

ರಾಷ್ಟ್ರೀಯ ಮಾಧ್ಯಮಗಳ ವಿರುದ್ಧ ಕಿಡಿಕಾರಿದ ಸಿ ಸಿದ್ದರಾಮಯ್ಯ

ಬೆಂಗಳೂರು, ಏ,22-ಕನರ್ನಾಟಕ ಮತ್ತು ಕನ್ನಡಿಗರ ಬಗ್ಗೆ ರಾಷ್ಟ್ರೀಯ ಮಾಧ್ಯಮಗಳು ಮಾಡಿದ ಅಪಪ್ರಾಚರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳು ಜವಾಬ್ದಾರಿಯುತವಾಗಿ ಕೆಲಸ ಮಾಡುವಂತೆ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ  ಪ್ರಸ್ತಾಪಿಸಿದ್ದಾರೆ.ಬೆಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ…

ಎನ್ ರವಿಕುಮಾರ್ ಟೆಲೆಕ್ಸ್ ಅವರಿಗೆ  “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ”

ಕಾಸರಗೋಡು,ಏ,22- ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ ಪ್ರಸಕ್ತ ಸಾಲಿನ ರಾಜ್ಯಮಟ್ಟದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ”ಗೆ ಶಿವಮೊಗ್ಗದ ಹಿರಿಯ ಪತ್ರಕರ್ತ, ಶಿವಮೊಗ್ಗ ಟೆಲೆಕ್ಸ್ ಕನ್ನಡ ದಿನಪತ್ರಿಕೆ ಸಂಪಾದಕರಾದ ಎನ್. ರವಿಕುಮಾರ್ (ಟೆಲೆಕ್ಸ್ )ಅವರನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಪತ್ರಿಕೋದ್ಯಮದಲ್ಲಿ ಎನ್ .ರವಿಕುಮಾರ್ ಅವರ ವೃತ್ತಿಪರತೆ, ಸಾಮಾಜಿಕ ಸೌಹಾರ್ದತೆ ಮತ್ತು ವೈಚಾರಿಕತೆಯ ಪ್ರತಿಪಾದನೆಯನ್ನು ಗುರುತಿಸಿ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘವು, ಈ ವರ್ಷದ “ಹವ್ವಾ ಹಸನ್ ಫೌಂಡೇಶನ್ ಅಬ್ದುಲ್ಲ…

ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆ

*ಡಾ.ಬಿ.ಆರ್.ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆ* ಚಿತ್ರದುರ್ಗ,ಏ,21-ಡಾ.ಬಾಬಾಸಾಹೇಬ್ ಅಂಬೇಡ್ಕರ್ ರವರು ಸಂವಿಧಾನದ ಮೂಲಕ ಸಮಾನತೆಯನ್ನು ಕಲ್ಪಿಸಿಕೊಟ್ಟಿದ್ದಾರೆಂದು ಕರ್ನಾಟಕ ಶಾಂತಿ & ಸೌಹಾರ್ದ ವೇದಿಕೆ ಅಧ್ಯಕ್ಷರಾದ ನರೇನಹಳ್ಳಿ ಅರುಣ್ ಕುಮಾರ್ ಹೇಳಿದರು. ಮಠದ ಕುರುಬರಹಟ್ಟಿ ಗ್ರಾಮದ ಶ್ರೀ ದುರುಗಮ್ಮ ದೇವಸ್ಥಾನದ ಬಳಿ ವಿಮುಕ್ತಿ ವಿದ್ಯಾ ಸಂಸ್ಥೆ ,ಧಮ್ಮ ಕೇಂದ್ರ ಮತ್ತು ಶಾಂತಿ ಮತ್ತು ಸೌಹಾರ್ದ ವೇದಿಕೆವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಮತ್ತು ಸೌಹಾರ್ದ ಯಾತ್ರೆ ಕಾರ್ಯಕ್ರಮದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ,ಕಾರ್ಯಕ್ರಮದಲ್ಲಿ…

ಗ್ರಾಮೀಣ ಭಾಗದ ಯುವಕರಿಗೆ ತಂತ್ರಜ್ಞಾನದ ಶಿಕ್ಷಣ ನೀಡಿ ಉದ್ಯೋಗ ಸೃಷ್ಟಿಸಿದ ಕಿಯೋನಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್ ಶ್ಲಾಘನೆ

ಬೆಂಗಳೂರು, ಏ.21-“ತಂತ್ರಜ್ಞಾನದಿಂದಲೇ ಅಭಿವೃದ್ಧಿ, ಸಂಪತ್ತು, ಶಿಕ್ಷಣ ಎನ್ನುವಂತಾಗಿದೆ. ಪ್ರತಿಯೊಂದು ಏಳಿಗೆಯೂ ಸಹ ತಂತ್ರಜ್ಞಾನದ ಮೂಲಕ ನೋಡುವಂತಾಗಿದೆ. ಗ್ರಾಮೀಣ ಭಾಗದ ಯುವಕರಿಗೆ ಹೊಸ ತಂತ್ರಜ್ಞಾನದ ಶಿಕ್ಷಣ ನೀಡಿರುವ ಕಿಯೋನಿಕ್ಸ್ ಉದ್ಯೋಗ ಸೃಷ್ಟಿ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶ್ಲಾಘಿಸಿದರು. ಬೆಂಗಳೂರಿನಲ್ಲಿ ಕಿಯೋನಿಕ್ಸ್ ಸಂಸ್ಥೆಯ ಇ-ಕಾಮರ್ಸ್ ಪೋರ್ಟಲ್ ಅನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು. “ನೂತನ ತಂತ್ರಜ್ಞಾನದ ವಿಚಾರದಲ್ಲಿ ಕಿಯೋನಿಕ್ಸ್ ಸಂಸ್ಥೆ ದೇಶಕ್ಕೆ ಮಾದರಿ. ಅನೇಕ ರಾಜ್ಯಗಳಿಗೆ ತನ್ನ ಸೇವೆಯನ್ನು ನೀಡುತ್ತಿದೆ. ಇಂತಹ ಉತ್ತಮವಾದ…

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ

ಬೆಂಗಳೂರು ಏ 21-ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ಸೂಚಿಸಿದರು. ಸಿಬ್ಬಂದಿ ಮತ್ತು ಆಡಳಿತಾ ಸುಧಾರಣಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಉದ್ಘಾಟಿಸಿ, 2023 ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ…

1 2 3 103
Girl in a jacket