Girl in a jacket

Author kendhooli_editor

ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧೆ: ಡಿ.ಕೆ. ಸುರೇಶ್

ಬೆಂಗಳೂರು, ಮೇ 17-“ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕನಕಪುರ ನಿರ್ದೇಶಕ ಸ್ಥಾ‌ನಕ್ಕೆ ಸ್ಪರ್ಧಿಸಿದ್ದೇನೆ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಬಮೂಲ್ ಕಚೇರಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಕೆ ನಂತರ ಹಾಗೂ ಅದಕ್ಕೂ ಮುನ್ನ ತಮ್ಮ ಸದಾಶಿವನಗರ ನಿವಾಸದಲ್ಲಿ ಡಿ.ಕೆ. ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. “ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಚುನಾವಣೆಯಲ್ಲಿ ಎಲ್ಲಾ ಹಿರಿಯ ನಾಯಕರು, ಶಾಸಕರು ಹಾಗೂ ಹಾಲು ಉತ್ಪಾದಕರ ಸಲಹೆ ಹಾಗೂ ಪಕ್ಷದ…

ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ- ಸಿಎಂ ಶ್ಲಾಘನೆ

ಬೆಂಗಳೂರು, ಮೇ, 17- ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ…

ಆಶಾಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು, ಮೇ ೧೭-ಕಳೆದ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಶಾಕಾರ್ಯಕರ್ತೆಯರಿಗೆ ನೀಡಲಾಗಿದ್ದ ಭರವಸೆಯನ್ನು ಗೌರವಧನವನ್ನು ಹೆಚ್ಚಳ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ೨೦೨೫-೨೬ ನೇ ಸಾಲಿನ ಆಯವ್ಯಯ ಭಾಷಣದ ಖಂಡಿಕೆ ೧೪೮ ರಲ್ಲಿ ” ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು ೧೦೦೦ ರೂ. ಹೆಚ್ಚಿಸಲಾಗುವುದು ಎಂದು ಘೋಷಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಇವರಿಂದ ಸ್ವೀಕೃತವಾದ ಏಕಕಡತದಲ್ಲಿ ಆಶಾ…

ಭಾರತ-ಪಾಕ್ ಸಂಘರ್ಷ-ವಿದೇಶಗಳಿಗೆ ಮಾಹಿತಿ ನೀಡುವ ಸಂಸದರಲ್ಲಿ ಶಶಿತರೂರು

ನವದೆಹಲಿ,ಮೇ೧೭೦- ಭಾರತ-ಪಾಕಿಸ್ತಾನ ಸಂಘರ್ಷದ ಹಿನ್ನೆಲೆಯಲ್ಲಿ ವಿದೇಶಿ ಸರ್ಕಾರಗಳಿಗೆ ಮಾಹಿತಿ ನೀಡುವ ಕುರಿತು ಕೇಂದ್ರ ಸರ್ಕಾರ ರಚಿಸಿರುವ ಸರ್ವಪಕ್ಷ ನಿಯೋಗದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ್ ಶಶಿ ತರೂರ್ ಪ್ರಮುಖ ಪಾತ್ರ ವಹಿಸಲಿದ್ದಾರೆ. ಪಹಲ್ಗಾಮ ದಾಳಿ ನಂತರ ನಡೆದ ಬೆಳವಣಿಗೆಗು ಆಪರೇಷನ್‌ಸಿಂಧೂರ ಹೆಸರಿಲ್ಲಿ ನಡೆಸಿದ ದಾಳಿ ನಂತರ ತನ್ನ ರಾಜತಾಂತ್ರಿಕ ಸಂಪರ್ಕದಲ್ಲಿ ಭಾರತವನ್ನು ಪ್ರತಿನಿಧಿಸುವ ಸಂಸದರ ಹೆಸರುಗಳನ್ನು ಸಂಸದೀಯ ವ್ಯವಹಾರಗಳ ಸಚಿವಾಲಯ ಪ್ರಕರಟಿಸಿದೆ. ಇದಲರಲಿ ಪ್ರಮುಖವಾಗಿ ಕಾಂಗ್ರೆಸ್‌ನ ಶಶಿ ತರೂರು ಪ್ರಮುಖವಾಗಿದ್ದಾರೆ.. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು…

ಭಾರತದ ಕ್ಷಿಪಣಿಗಳಿಂದ ಹಾನಿಯಾಗಿರುವುದನ್ನು ಒಪ್ಪಿಕೊಂಡ ಪಾಕ್ ಪ್ರಧಾನಿ

ಇಸ್ಲಾಮಾಬಾದ್,ಮೇ,೧೭- ಕೊನೆಗೂ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಷರೀಪ್ ಆಪರೇಷನ್ ಸಿಂಧೂರದಿಂದ ಪಾಕಿಸ್ತಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ನಿರಾಕರಿಸಿದ್ದ ಅವರು ಈಗ ಭಾರತದ ಕ್ಷಿಪಣಿಗಳಿಂದ ಹಾನಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಮೇ ೯ ಮತ್ತು ೧೦ರ ನಡುವಿನ ರಾತ್ರಿ ೨.೩೦ಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ಮಾಡಿ ಈ ಮಾಹಿತಿ ನೀಡಿದ್ದಾಗಿ ಷರೀಫ್ ಬಹಿರಂಗಪಡಿಸಿದ್ದಾರೆ.ಇದುವರೆಗೂ ಭಾರತದ ಮಿಲಿಟರಿ ಕಾರ್ಯಾಚರಣೆಯನ್ನು ಪಾಕಿಸ್ತಾನ ನಿರಾಕರಿಸುತ್ತಾ ಬಂದಿತ್ತು. ಪಾಕ್ ಪ್ರಧಾನಿ ಈ ಹೇಳಿಕೆ ನೀಡಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.…

ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ: ಸಿ.ಟಿ.ರವಿ

ಬೆಂಗಳೂರು,ಮೇ,16 ‘ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ ಕಾಣಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕೆಲವು ನಾಯಕರು, ಸಚಿವರು ‘ಆಪರೇಷನ್ ಸಿಂದೂರ’ದ ಕುರಿತು ಅಪಸ್ವರ ಎತ್ತಿದ್ದಾರೆ. ಇನ್ನೂ ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ಭಯೋತ್ಪಾದನೆಯನ್ನು ಕಿತ್ತು ಹಾಕಬೇಕು. ಯಾಕೆ ಯುದ್ಧ ನಿಲ್ಲಿಸಿದಿರಿ ಎಂದು ಪ್ರಶ್ನಿಸುತ್ತಿದ್ದಾರೆ. ಇನ್ನು ಕೆಲವರು ನಾಲ್ಕು ವಿಮಾನ ಹಾರಿ ಹೋಗಿದೆ;…

ಬೆಂಬಲ ಬೆಲೆಯಲ್ಲಿ ಶೀಘ್ರ ಹಿಂಗಾರು ಸೂರ್ಯಕಾಂತಿ ಖರೀದಿ: ಶಿವಾನಂದ ಪಾಟೀಲ

ಬೆಂಗಳೂರು,ಮೇ,16-ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಶೀಘ್ರದಲ್ಲಿ ಖರೀದಿ ಆರಂಭ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಎಫ್‌ಎಕ್ಯು ಗುಣಮಟ್ಟದ ಸೂರ್ಯಕಾಂತಿಗೆ ಪ್ರತಿ ಕ್ವಿಂಟಾಲ್‌ಗೆ 7,280 ರೂ. ನಿಗದಿಪಡಿಸಲಾಗಿದ್ದು, ಬಾಗಲಕೋಟ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಕೇಂದ್ರ ಸರ್ಕಾರ ನಾಫೆಡ್‌ ಹಾಗೂ ಎನ್‌ ಸಿ ಸಿ ಎಫ್‌…

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು, ಮೇ 16,-“ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, “ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾಗುವುದು. ಯಾವ ರೀತಿ ವಿಭಾಗಗಳನ್ನು ಮಾಡಬೇಕು ಎಂದು ಅವರ ಬಳಿಯೂ…

ಕೊಪ್ಪಳ ಬಲ್ಡೋಟ ಉಕ್ಕು ಕಾರ್ಖಾನೆ : ಜಿಲ್ಲಾಧಿಕಾರಿಗಳ ವರದಿ ಪರಿಶೀಲಿಸಿ ಸೂಕ್ತ ತೀರ್ಮಾನ- ಸಿಎಂ

ವಿಜಯನಗರ(ಹೊಸಪೇಟೆ) ಮೇ 16- ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯನಗರದ ಹೊಸಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಕೆಲಸವನ್ನು ಸ್ಥಗಿತಗೊಳಿಸುವಂತೆ ಮುಖ್ಯಮಂತ್ರಿಗಳ ಆದೇಶ ಹೊರತಾಗಿಯೂ , ಕೆಲಸ ಮುಂದುವರೆದಿರುವ ಬಗ್ಗೆ ತಮ್ಮ ಪ್ರತಿಕ್ರಿಯೆ ನೀಡಿದರು. ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂದು ಜನರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ…

ಮನುಷ್ಯ ಮಾಡಲೇ ಬೇಕಾದ ಅಪರಾಧ ಪ್ರೇಮ; ಬೋದಿಲೇರ್

“ ಮನುಷ್ಯ ಸದಾ ಕುಡಿದ ಸ್ಥಿತಿಯಲ್ಲಿರಬೇಕು ಅದೊಂದೇ.. ಒಂದೇ ಪರಿಹಾರ ಸಮಸ್ಯೆಗೆ ಏನನ್ನು ಕುಡಿಯುವುದು? ವೈನ್‌,ಕಾವ್ಯ,ಋಜುತ್ವ.. ಯಾವುದನ್ನಾದರೂ ಕುಡಿಯುತ್ತಿರಬೇಕು…” ಲಂಕೇಶ್‌ ಎಂಬ ವಿಸ್ಮಯದ ಬೆರಳಿಡಿದು ಕನ್ನಡಿಗರ ಮನದ ಅಂಗಳಕ್ಕೆ ಮೊದಲು ಇಳಿದ ಲೇಖಕ ಬೋದಿಲೇರ್.‌ ಇಂಗ್ಲೀಷ್‌ ಸಾಹಿತ್ಯದಲ್ಲಿ ವಿಕ್ಷಿಪ್ತ ಬರಹಗಾರರ ಒಂದು ಪರಂಪರೆಯೇ ಇದೆ. ಅಂತಹ ಗಂಡು ಹೆಣ್ಣೆನ್ನದ ಕಪ್ಪು ಮುಖದ ಅನೇಕ ಸಾಹಿತಿಗಳನ್ನು ಯೋಗಪ್ಪನವರ್‌ ಅವರು ರೂಪಕ ಎಂಬ ಪುಸ್ತಕದಲ್ಲಿ ಪರಿಚಯಿಸಿದ್ದಾರೆ. ಈ ಸಾಲಿನಲ್ಲಿ ಜಡಗೊಂಡ ಓದುಗನನ್ನು ಬೆಚ್ಚಿಬೀಳಿಸಲೆಂದೇ ಬರೆದ ಲೇಖಕ ಬೋದಿಲೇರ್.‌ “ ಮನುಷ್ಯ…

ಚಂದನವನ ಫಿಲ್ಮ್ ಕ್ರಿಕೆಟ್ ಅವಾರ್ಡ್ ,ಶಿವರಾಜ್ ಕುಮಾರ್ ಗೆ ಜೀವಮಾನ ಪ್ರಶಸ್ತಿ

ಕನ್ನಡದ ಸೂಪರ್‌ಸ್ಟಾರ್ ಶಿವ ರಾಜಕುಮಾರ್ ಅವರಿಗೆ ಕಳೆದ ಭಾನುವಾರ  ಬೆಂಗಳೂರಿನಲ್ಲಿ ನಡೆದ ಅದ್ದೂರಿ ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ 2025 ರಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರಿಗೆ ಟ್ರೋಫಿ, ಹಂಸಲೇಖ ಅವರ ಐದನಿ ಸಂಸ್ಥೆಯಿಂದ ಚಿನ್ನದ ಪದಕ ಮತ್ತು ಸನ್ಮಾನ ಪತ್ರವನ್ನು ನೀಡಲಾಯಿತು. ಪ್ರಶಸ್ತಿಗಳ ಆರನೇ ಆವೃತ್ತಿಯಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ಮೊದಲ ಬಾರಿಗೆ ಕೊಡಲಾಗಿದೆ. 2024 ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳ ಇತರ ಪ್ರಮುಖ ವಿಜೇತರಲ್ಲಿ ಆಕ್ಷನ್ ಸ್ಟಾರ್…

ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿಕೆಶಿ

ರಾಮನಗರ, ಮೇ 14-“ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಬಾಲಕಿಯ ಶವ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಬುಧವಾರ ಸಾಂತ್ವನ ಹೇಳಿ, ಜಿಲ್ಲಾಡಳಿತ ಪರವಾಗಿ ₹4,12,500 ಹಾಗೂ ಪಂಚಾಯ್ತಿ ವತಿಯಿಂದ ₹50,000 ಪರಿಹಾರ…

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ : ಇಂದಿನಿಂದ ಜಾರಿ

ಬೆಂಗಳೂರು,ಮೇ 15- ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. *ಮಳೆ ಅನಾಹುತಕ್ಕೆ…

ಭ್ರಷ್ಟರಾಜ್ಯದ ವಿವಿದೆಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು, ಮೇ,15-ಭ್ರಷ್ಟ ಅಧಿಕಾರಿಗಳ ವಿರುದ್ಧ ಬೇಟೆ ಮುಂದುವರಿಸಿರುವ ಲೋಕಾಯುಕ್ತರು ಇಂದು ಬೆಳಂಬೆಳಿಗ್ಗೆರಾಜ್ಯದ ವಿವಿದೆಡೆ ಭ್ರಷ್ಟ ಅಧಿಕಾರಿಗಳ ಮನೆ ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಕಲುಬುರುಗಿ,ತುಮಕೂರು, ಯಾದಗಿರಿ ಸೇರಿದಂತೆ ವಿವಿದೆಡೆ ದಾಳಿ ನಡೆಸಿದ್ದು,ನಗ- ನಗದು,ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿ ತಹಶೀಲ್ದಾರ್ ಮನೆ ಹಾಗೂ ಯಾದಗಿರಿ ಜಿಲ್ಲೆಯ ಲೋಕಾಯುಕ್ತ ಶಹಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ,ತುಮಕೂರಿನಲ್ಲಿ ನಿರ್ಮಿತ ಕೇಂದ್ರದ ಎಂಡಿ ರಾಜಶೇಖರ್ ಹಾಗೂ ಸಹೋದರರ ಮನೆ ಮೇಲೆ ಕೂಡ ಅಧಿಕಾರಿಗಳು ದಾಳಿ ನಡಸಿದ್ದಾರೆ.…

ವಿಭಿನ್ನ ಪ್ರೇಮಕಥೆಯ ‘ ಮಾತೊಂದು ಹೇಳುವೆ’ ಚಿತ್ರ ಜೂನ್ 13 ಕ್ಕೆ ಬಿಡುಗಡೆ

ಹಲವು ಹೊಸತುಗಳಿಗೆ ಹೆಸರಾಗಿರುವ ಸ್ಯಾಂಡಲ್ ವುಡ್ ಈಗ ಮತ್ತೊಂದು ಹೊಸತನಕ್ಕೆ ಸಾಕ್ಷಿಯಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಮನೆಮಾತಾಗಿರುವ ‘ಮಾತೊಂದ ಹೇಳುವೆ’ ಚಿತ್ರವನ್ನು ಇದೇ ಮೊದಲ ಬಾರಿಗೆ ಕರ್ನಾಟಕ ಜನತೆ ಅರ್ಪಿಸುತ್ತಿದ್ದಾರೆ‌. ಹೊಸತನದ ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಆರ್ ಜೆ ಆಗಿ ಹೆಸರು ಮಾಡಿರುವ ಮಯೂರ್ ಕಡಿ ನಿರ್ದೇಶಿಸಿದ್ದಾರೆ ಜೊತೆಗೆ ನಾಯಕನಾಗೂ ನಟಿಸಿದ್ದಾರೆ. ಈಗಾಗಲೇ ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ವಿಶೇಷ ವಿಡಿಯೋ ತುಣುಕು ಬಿಡುಗಡೆ ಮಾಡುವ ಮೂಲಕ…

ಜವಾಬ್ದಾರಿಯಿಂದ ಕೆಲಸ ಮಾಡಿ: ಅಧಿಕಾರಿಗಳಿಗೆ ಎನ್ .ಚಲುವರಾಯಸ್ವಾಮಿ ಸೂಚನೆ

ಧಾರವಾಡ, ಮೇ, 14-ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಹಾಗೂ ಜವಾಬ್ದಾರಿಯುತವಾಗಿ ಕೆಲಸಮಾಡಿ ಎಂದು ಕೃಷಿ ಸಚಿವರು ಸೂಚಿಸಿದ್ದಾರೆ. ರೈತರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನಗ ಬಗ್ಗಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೆಳಗಾವಿ ವಿಭಾಗದ 7 ಜಿಲ್ಲೆಗಳ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನೆ ನಡೆಸಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸೂಚನೆ ನೀಡಿದರು ಹೈಟೆಕ್ ಹಾರ್ವೆಸ್ಟ್‌ ಹಬ್ ,ಕೃಷಿ ಭಾಗ್ಯ ಯೋಜನೆಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.ಇದರಿಂದಾಗುವ ಪರಿಣಾಮಕಾರಿ ಬದಲಾವಣೆಗಳ ಬಗ್ಗೆ…

ಖಾಸಗಿ ಹಿಡಿತದಿಂದ 108 ಅಂಬ್ಯುಲೆನ್ಸ್ ಮುಕ್ತ – ರಾಜ್ಯ ಸರ್ಕಾರದಿಂದಲೇ ಅಂಬ್ಯುಲೆನ್ಸ್ ಸೇವೆ – ದಿನೇಶ್ ಗುಂಡೂರಾವ್

ಬೆಂಗಳೂರು, ಮೇ14-108 ಅಂಬ್ಯುಲೆನ್ಸ್ ಗಳ ನಿರ್ವಹಣೆಯನ್ನ ಖಾಸಗಿ ಏಜನ್ಸಿಗಳ ಹಿಡಿತದಿಂದ ತಪ್ಪಿಸಿ ರಾಜ್ಯ ಸರ್ಕಾರ ತನ್ನ ಹಿಡಿತಕ್ಕೆ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಚಿವರು 108 ಅಂಬ್ಯುಲೆನ್ಸ್ ಗಳನ್ನು ಇಲ್ಲಿಯ ವರೆಗೆ ಖಾಸಗಿ ಏಜನ್ಸಿಗಳು ನಿರ್ವಹಿಸುತ್ತಿದ್ದವು. ಈ ವ್ಯವಸ್ಥೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಹೀಗಾಗಿ ಇನ್ಮುಂದೆ ರಾಜ್ಯ ಸರ್ಕಾರವೇ 108 ಅಂಬ್ಯುಲೆನ್ಸ್ ಗಳ ನಿರ್ವಹಣೆಗೆ ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದು, ಈಗಾಗಲೇ ಚಾಮರಾಜ ನಗರ ಜಿಲ್ಲೆಯಲ್ಲಿ ಪ್ರಾಯೋಗಿಕ ಕಾರ್ಯಾಚರಣೆ ಯಶಸ್ವಿಯಾಗಿ…

ನರೇಗ ಯೋಜನೆಯಲ್ಲಿ ಅಕ್ರಮವೆಸಗಿದವರ ವಿರುದ್ದ ಕ್ರಮಕ್ಕೆ ಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು ಮೇ 14-ರಾಜ್ಯದಲ್ಲಿ ನರೇಗಾ ಯೋಜನೆ ಮಾಡಿ ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಮುಖ್ಯಮಂತ್ರಿ  ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ  ಈ ಸೂಚನೆ ನೀಡಿದರು. ಹಲವಾರು ಯೋಜನೆಗಳು ಜಾರಿಯಲ್ಲಿವೆ  ಅದರಂತೆ ನರೇಗ ಯೋಜನೆಯ ಮುಖಾಂತರ ಹಲವರು ಅಕ್ರಮ ಎಸಗಿದ್ದಾರೆ ಅಂತವರ ವಿರುದ್ಶ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ…

ಅಪರೂಪದ 8 ಸೆಂ.ಮೀ. ಅಂಡಾಶಯ ಚೀಲ ಹೊಂದಿದ್ದ 16 ವರ್ಷದ ವಿದ್ಯಾರ್ಥಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು,ಮೇ14-ಅತಿ ಅಪರೂಪದಲ್ಲಿ 8 ಸೆಂ.ಮೀಟರ್‌ನ ಅತಿದೊಡ್ಡ ಅಂಡಾಶಯ ಚೀಲ ಹೊಂದಿದ್ದ 16 ವರ್ಷದ ಶಾಲಾ ವಿದ್ಯಾರ್ಥಿಗೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ರೋಬೋಟ್ ಸಹಾಯದಿಂದ ಎಡ ಅಂಡಾಶಯದ ಸಿಸ್ಟಕ್ಟಮಿ ಶಸ್ತ್ರಚಿಕಿತ್ಸೆ ನಡೆಸಿದೆ. ಫೋರ್ಟಿಸ್‌ ಆಸ್ಪತ್ರೆ ಯುರೊಗೈನೆಕಾಲಜಿ, ಗೈನೆ-ಆಂಕೊಲಾಜಿ ಮತ್ತು ರೊಬೊಟಿಕ್ ಶಸ್ತ್ರಚಿಕಿತ್ಸೆ ಕನ್ಸಲ್ಟೆಂಟ್‌ ಡಾ. ರೂಬಿನಾ ಶಾನಾವಾಜ್ ಅವರ ತಂಡ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. 10ನೇ ತರಗತಿ ಓದುತ್ತಿದ್ದರುವ 16 ವರ್ಷದ ಬಾಲಕಿಯು ಎರಡೂ ಅಂಡಾಶಯಗಳನ್ನು ಸಂರಕ್ಷಿಸುವಲ್ಲಿ ಯಶಸ್ವಿಯಾಗಿದ್ದು, ಶಸ್ತ್ರಚಿಕಿತ್ಸೆಯಾದ ದಿನವೇ ಬಿಡುಗಡೆ ಮಾಡಲಾಯಿತು.…

ಅಮೆರಿಕಾ ಅಧ್ಯಕ್ಷ ಟ್ರಂಪ್ ಪಾಕ್-ಭಾರತ ಮಧ್ಯಸ್ಥಿಕೆ ಭಾರತ ತಿರಸ್ಕರಿಸಿದೆ

ನವದೆಹಲಿ, ಮೇ,14- ಭಾರತ- ಪಾಕಿಸ್ತಾನದ ಸಂಘರ್ಷಕ್ಕೆ ಸಂಬಂಧಿಸಿದಂತೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆಯನ್ನು ಭಾರತ ತಿರಸ್ಕರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ “ಪರಮಾಣು ಯುದ್ಧ”ವನ್ನು ತಡೆಯಲು ವ್ಯಾಪಾರ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ಕೊಟ್ಟಿದ್ದೆ ಎನ್ನುವ ಟ್ರಂಪ್ ಹೇಳಿಕೆ ಕೂಡ ಸುಳ್ಳು ಎಂದು ಕೂಡ ಇದೇ ವೇಳೆ ತಿಳಿಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಆಪರೇಷನ್ ಸಿಂಧೂರ ಮಿಲಿಟರಿ ಕಾರ್ಯಾಚರಣೆಯು ನ್ಯಾಯಯುತವಾಗಿದೆ…

1 16 17 18 19 20 124
Girl in a jacket