ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ
ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ ಬೆಂಗಳೂರು ಜ.13-ಕೃಷಿ ಸಚಿವರ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ ಭತ್ತ ಬೆಳೆಯುವ ರಾಜ್ಯಗಳಲ್ಲಿ ಒಂದಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಅಕ್ಕಿ ಉತ್ಪಾದಿಸುತ್ತಿದೆ. ಹಾಲಿ ರಾಜ್ಯದಲ್ಲಿ 48.91…