Girl in a jacket

Author kendhooli_editor

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಪ್ರಿಯಾಂಕ ಖರ್ಗೆ ಸಭೆ

ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗದ ಅಧ್ಯಕ್ಷರೊಂದಿಗೆ ಪ್ರಿಯಾಂಕ ಖರ್ಗೆ ಸಭೆ By ಕೆಂಧೂಳಿ ಬೆಂಗಳೂರು, ಜ,22-ಸಮಗ್ರ ದತ್ತಾಂಶ ಸಂಗ್ರಹದೊಂದಿಗೆ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸುವ ಅವಶ್ಯಕತೆಯಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಪ್ರೊ.ಗೋವಿಂದರಾವ್‌ ಅವರ ಅಧ್ಯಕ್ತತೆಯಲ್ಲಿ ಸರ್ಕಾರ ರಚಿಸಿರುವ ಪ್ರಾದೇಶಿಕ ಅಸಮತೋಲನ ನಿವಾರಣಾ ಆಯೋಗಕ್ಕೆ ಸಲಹೆ…

ಮಂಡ್ಯದಲ್ಲಿ ಕೃಷಿ ವಿವಿ ಅನುಮೋದನೆ ನೀಡಿದ ಸಿಎಂ ಗೆ ಅಭಿನಂದನೆ

ಮಂಡ್ಯದಲ್ಲಿ ಕೃಷಿ ವಿವಿ ಅನುಮೋದನೆ ನೀಡಿದ ಸಿಎಂ ಗೆ ಅಭಿನಂದನೆ By ಕೆಂಧೂಳಿ ಬೆಂಗಳೂರು, ಜ,22-ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ಹಾಗೂ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ ಮನ್ನ ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಂಡ್ಯ ಜಿಲ್ಲೆಯ ಶಾಸಕರು ಅಭಿನಂದನೆ ಸಲ್ಲಿಸಿದರು. ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ…

ಅಧಿಕಾರ ಹುಡುಕಿಕೊಂಡು ಹೋಗಿವುದಿಲ್ಲ; ಡಿ.ಕೆ.ಶಿ

ಅಧಿಕಾರ ಹುಡುಕಿಕೊಂಡು ಹೋಗಿವುದಿಲ್ಲ; ಡಿ.ಕೆ.ಶಿ ಬೆಂಗಳೂರು, ಜ,22- ಅಧಿಕಾರ ಹಸ್ತಾಂತರ ಕುರಿತಂತೆ ಚರ್ಚೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಸದ್ಯ ಯಾವುದು ತುರ್ತು ಇಲ್ಲ ಪಕ್ಷ ತೀರ್ಮಾನ ಮಾಡುತ್ತದೆ ನಾನು ಅಧಿಕಾರ ಹುಡುಕಿಕೊಂಡು ಹೋಗುವುದಿಲ್ಲ ಎಂದು ಉಒ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರದ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದ್ದು, ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಪಟ್ಟ ನೀಡುವಂತೆ ಅವರ ಅಭಿಮಾನಿಗಳು, ಅವರ ಬೆಂಬಲಿಗರು ಆಗ್ರಹಿಸುತ್ತಲೇ ಇದ್ದಾರೆ. ಬಿಜೆಪಿ ಎಂಎಲ್ ಸಿ…

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ:ಸಿಎಂ ಎಚ್ಚರಿಕೆ

ಸಮಾಜಘಾತಕ ಶಕ್ತಿಗಳು ವಿರುದ್ಧ ಗಂಭೀರ ಕ್ರಮ:ಸಿಎಂ ಎಚ್ಚರಿಕೆ ಬೆಳಗಾವಿ, ಜರ, 21-ಮಹಿಳೆಯರಿಗೆ ರಕ್ಷಣೆ ದೊರಕಬೇಕು. ಬಲಾತ್ಕಾರದಂತಹ ಹೀನ ಕೃತ್ಯಗಳು ನಡೆಯಬಾರದು. ಸಮಾಜದಲ್ಲಿ ಸಮಾಜಘಾತಕ ಶಕ್ತಿಗಳು ಇಂಥ ಕೆಲಸ ಮಾಡುತ್ತವೆ. ಅವರ ವಿರುದ್ಧ ಗಂಭೀರ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಗಾಂಧೀಜಿಯವರ ತತ್ವಾದರ್ಶಗಳನ್ನು ಪುನಸ್ಥಾಪಿಸಲು ವರ್ಷವಿಡೀ ಅಭಿಯಾನ ಇಡೀ ವರ್ಷ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಅಭಿಯಾನವನ್ನು ಮಾಡುತ್ತಿದ್ದೇವೆ. ಗಾಂಧೀಜಿಯವರ ತತ್ವಾದರ್ಶಗಳನ್ನು ಮತ್ತೆ ಪುನಸ್ಥಾಪಿಸಲು…

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ

ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆ ಬಿಡುಗಡೆಗೆ ಎಂ.ಬಿ.ಪಾಟೀಲ್ ಸೂಚನೆ By ಕೆಂಧೂಳಿ ಬೆಂಗಳೂರು,ಜ,20-ವಿಜಯಪುರ ಜಿಲ್ಲೆಯ ತುಬಚಿ- ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಮುಗಿದು, ಕಾಲುವೆಗಳಲ್ಲಿ ನೀರು ಹರಿಯುತ್ತಿದೆ. ಆದರೂ ತಾಂತ್ರಿಕ ಕಾರಣಗಳಿಂದಾಗಿ 3,048 ಎಕರೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿಲ್ಲ. ಈ ಸಂಬಂಧ ಕೂಡಲೇ ಅಗತ್ಯ ಕ್ರಮವಹಿಸಿ, 457 ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.…

ಕೋರೆ ಅವರನ್ನು ಪಕ್ಷಕ್ಕೆ ಕರೆದಿಲ್ಲ, ಸೌಹಾರ್ದ ಭೇಟಿ ಅಷ್ಟೇ:ಡಿ.ಕೆ.ಶಿ.

ಕೋರೆ ಅವರನ್ನು ಪಕ್ಷಕ್ಕೆ ಕರೆದಿಲ್ಲ, ಸೌಹಾರ್ದ ಭೇಟಿ ಅಷ್ಟೇ:ಡಿ.ಕೆ.ಶಿ. By ಕೆಂಧೂಳಿ ಬೆಳಗಾವಿ, ಜ.20-ಪ್ರಭಾಕರ್ ಕೋರೆ ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆದೂ ಇಲ್ಲ, ಅವರು ಬರುವುದೂ ಇಲ್ಲ. ಇದೊಂದು ಸೌಹರ್ದಯುತ ಭೇಟಿ ಅಷ್ಟೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಜ್ಯಸಭಾ ಮಾಜಿ ಸದಸ್ಯ ಪ್ರಭಾಕರ್ ಕೋರೆ ಅವರ ಮನೆಗೆ ಸೋಮವಾರ ಭೇಟಿ ನೀಡಿದ ನಂತರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, “ಪ್ರಭಾಕರ್ ಕೋರೆ ಅವರು ನಮಗೆ ಶಾಶ್ವತ ಗೆಳೆಯರು. ಯಾವುದೇ ಸರ್ಕಾರವಿದ್ದರೂ ಅವರ ಸಂಸ್ಥೆಗಳಿಂದ…

ರಾಜ್ಯದ ಪೊಲೀಸ್ ವ್ಯವಸ್ಥೆ ವಿಫಲ: ವಿಜಯೇಂದ್ರ

ರಾಜ್ಯದ ಪೊಲೀಸ್ ವ್ಯವಸ್ಥೆ ವಿಫಲ: ವಿಜಯೇಂದ್ರ ಬೆಂಗಳೂರು: ರಾಜ್ಯದ ಕಾನೂನು- ಸುವ್ಯವಸ್ಥೆ ಕುಸಿತದಿಂದ ಪೊಲೀಸ್ ವ್ಯವಸ್ಥೆ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಹೊನ್ನಾವರದಲ್ಲಿ ಗೋವಿನ ರುಂಡ ಕತ್ತರಿಸಿ, ಅಮಾನುಷ- ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಅದರ ಜೊತೆಗೇ ಬಿಜಾಪುರದಲ್ಲಿ ಹಾಡಹಗಲಲ್ಲೇ ವ್ಯಕ್ತಿಯನ್ನು ಥಳಿಸಿದ ಘಟನೆ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು. ಈಚೆಗೆ ಚಾಮರಾಜಪೇಟೆಯಲ್ಲೂ ಹಸುವಿನ ಕೆಚ್ಚಲು ಕತ್ತರಿಸಿದ ಘಟನೆ ನಡೆದಿತ್ತು. ಅದು…

ನಾಳೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ: ವಿಜಯೇಂದ್ರ

ನಾಳೆ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆ: ವಿಜಯೇಂದ್ರ By ಕೆಂಧೂಳಿ ಬೆಂಗಳೂರು,ಜ,20-ನಾಳೆ (ಜ.21) ಸಂಜೆ 7 ಗಂಟೆಗೆ ಬಿಜೆಪಿ ರಾಜ್ಯದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನ್ ದಾಸ್ ಅಗರವಾಲ್, ತಮಿಳುನಾಡಿನಿಂದ ಪೊನ್ನು ರಾಧಾಕೃಷ್ಣನ್, ರಾಜ್ಯದ ಸಹ ಉಸ್ತುವಾರಿ ಸುಧಾಕರ ರೆಡ್ಡಿ ಅವರು ನಾಳೆ ಬೆಂಗಳೂರಿಗೆ ಬರಲಿದ್ದಾರೆ.…

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಅಂಡ್ ಮರ್ಡರ್ ಅರೋಪಿಗೆ ಜೀವಾಧಿ ಶಿಕ್ಷೆ

ಕೋಲ್ಕತ್ತಾ ಟ್ರೈನಿ ವೈದ್ಯೆ ರೇಪ್ ಅಂಡ್ ಮರ್ಡರ್ ಅರೋಪಿಗೆ ಜೀವಾಧಿ ಶಿಕ್ಷೆ by ಕೆಂಧೂಳಿ ಕೋಲ್ಕತ್ತಾ,ಜ.೨೦- ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಉತ್ತರ ಪ್ರದೇಶದ ಕೋಲ್ಕತ್ತಾದ ಆಸ್ಪತ್ರೆಯ ಟ್ರೈನಿ ವೈದ್ಯ ಮೇಲೆ ರೇಪ್ ಅಂಡ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಂಜಯ್ ರಾಯ್‌ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ೫೦ ಸಾವಿರ ರೂ ದಂಢ ವಿದಿಸಿ ತೀರ್ಪು ನೀಡಿದೆ. ಕೋಲ್ಕತ್ತಾದ ಸೀಲ್ಡಾ ಸಿಬಿಐ ಕೋರ್ಟ್ ಸೋಮವಾರ ತನ್ನ ತೀರ್ಪು ಪ್ರಕಟ ಮಾಡಿದೆ. ೨೦೨೪ ರ ಆಗಸ್ಟ್‌ನಲ್ಲಿ ಕೋಲ್ಕತ್ತಾದ ಆರ್‌ಜಿ…

ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ- ಡಿಕೆಶಿ

ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ತ್ಯಾಗ ಮಾಡಿಕೊಂಡೇ ಬಂದಿದ್ದೇನೆ- ಡಿಕೆಶಿ ಬೆಳಗಾವಿ, ಜ.20-“ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ.…

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ-ಸಿಎಂ

ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ-ಸಿಎಂ ಬೆಂಗಳೂರು, ಜ,20 -ಮುಡಾ ಕುರಿತು ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಮುಡಾ ಹಗರಣದ ಬಗ್ಗೆ ಇಡಿಯವರು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಗ್ಗೆ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಾ, ಇಡಿಯವರ ಪತ್ರಿಕಾ ಪ್ರಕಟಣೆಗೂ ನನಗೂ ಸಂಬಂಧವಿಲ್ಲ. ಬಿಜೆಪಿಯವರು ಈ ಪತ್ರಿಕಾ ಪ್ರಕಟಣೆಯನ್ನು ಅನಗತ್ಯವಾಗಿ ಇಡಿಯವರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಎಂದರು. ಹಣ ದುರುಪಯೋಗದ ಪ್ರಶ್ನೆ ಇಲ್ಲ ಮುಡಾ…

ಕೋಲಾರ- ಪಂಪ್ ಹೌಸ್ ಗೆ ಬೈರತಿ ಬಸವರಾಜ್ ಚಾಲನೆ

ಕೋಲಾರ- ಪಂಪ್ ಹೌಸ್ ಗೆ ಬೈರತಿ ಬಸವರಾಜ್ ಚಾಲನೆ ಕೋಲಾರ,ಜ20-ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟಮಕ ಬಳಿ ನಿರ್ಮಾಣ ಮಾಡಿರುವ ಡಿ.ದೇವರಾಜ್ ಅರಸ್ ಬಡಾವಣೆಯಲ್ಲಿ ರೂ.98 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ .ಎಸ್. ಸುರೇಶ(ಬೈರತಿ) ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು ಬಡಾವಣೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡಲು ನೂತನವಾಗಿ ನಿರ್ಮಿಸಿದ ಪಂಪ್ ಹೌಸ್ ಗೆ ಚಾಲನೆ ನೀಡಿದರು ಕೋಲಾರ…

ಮಹಾಕುಂಬಮೇಳದಲ್ಲಿ ಗ್ಯಾಸ್‌ಸಿಲಿಂಡರ್‌ಗಳ ಸ್ಪೋಟದಿಂದ ಹೊತ್ತಿ ಉರಿದ ಟೆಂಟ್‌ಗಳು

ಮಹಾಕುಂಬಮೇಳದಲ್ಲಿ ಗ್ಯಾಸ್‌ಸಿಲಿಂಡರ್‌ಗಳ ಸ್ಪೋಟದಿಂದ ಹೊತ್ತಿ ಉರಿದ ಟೆಂಟ್‌ಗಳು by ಕೆಂಧೂಳಿ ಉತ್ತರಪ್ರದೇಶ,ಜ,೨೦-ಮಹಾಕುಂಬ ಮೇಳದ ಪ್ರದೇಶವೊಮದರಲ್ಲಿ ೧೯ ಕ್ಯಾಂಪ್‌ಸೈಟ್‌ನಲ್ಲಿ ಗ್ಯಾಸ್‌ಸಿಲಿಂಡರ್‌ಗಳು ಸ್ಪೋಟಗೊಂಡ ಕಾರಣ ಬಾರಿ ಬೆಂಕಿಹೊತ್ತಿಕೊಂಡು ಸುಟ್ಟು ಬಸ್ಮವಾಗಿವೆ ಆದರೆ ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ವರದಿಯಾದ ತಕ್ಷಣ ಸುರಕ್ಷತಾ ವ್ಯವಸ್ಥೆಗಳ ಭಾಗವಾಗಿ ಸ್ಥಳದಲ್ಲಿ ನಿಂತಿದ್ದ ಹಲವಾರು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದವು. ಸ್ಥಳೀಯ ಅಧಿಕಾರಿಗಳು, ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆಗಳ ಸಮನ್ವಯದೊಂದಿಗೆ ಬೆಂಕಿ ನಂದಿಸುವ ಕಾರ್ಯವನ್ನು ಪ್ರಾರಂಭಿಸಲಾಗಿತ್ತು ಮತ್ತು ಶೀಘ್ರದಲ್ಲೇ…

ಖೋ ಖೋ ದೇಸಿ ಆಟಕ್ಕೆ ಈಗ ವಿಶ್ವಕಿರೀಟದ ಮೆರಗು!

ಖೋ ಖೋ ದೇಸಿ ಆಟಕ್ಕೆ ಈಗ ವಿಶ್ವಕಿರೀಟದ ಮೆರಗು! ನವದೆಹಲಿ,ಜ,೨೦-ದೇಸಿಯ ಆಟದ ಮೊದಲ ವಿಶ್ವಕಪ್‌ನಲ್ಲೇ ಭಾರತದ ಮಹಿಳೆಯರು ಜಯಸುವ ಮೂಲಕ ವಿಶ್ವದಾಖಲೆ ಬರೆದು ಭಾರತೀಯ ಆಟದ ಸೊಬಗನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಅಜೇಯವಾಗಿ ಫೈನಲ್ ಪ್ರವೇಶಿಸಿದ್ದ ಭಾರತದ ಮಹಿಳಾ ತಂಡ ಫೈನಲ್ ಪಂದ್ಯದಲ್ಲಿ ನೇಪಾಳ ವಿರುದ್ಧ ೭೮-೪೦ ಅಂಕಗಳ ಭರ್ಜರಿ ಗೆಲುವು ಕಂಡಿದೆ. ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಖೋ ಖೋ ವಿಶ್ವಕಪ್ ಉದ್ಘಾಟನಾ ಟೂರ್ನಿಯಲ್ಲಿ ಆತಿಥೇಯ ಭಾರತ ಪ್ರಶಸ್ತಿ ಗೆಲ್ಲುವ ಮೂಲಕ ಇತಿಹಾಸ ರಚಿಸಿದೆ. ವೇಗ,…

ಬಿಬಿಎಂಪಿಯಿಂದ  ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ

ಬಿಬಿಎಂಪಿಯಿಂದ  ಪ್ರಾಣಿಗಳ ಕುರಿತು ಜಾಗೃತಿ ಅಭಿಯಾನ ಬೆಂಗಳೂರು: ಜ. 19-ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮುದಾಯ ಪ್ರಾಣಿಗಳ ಕುರಿತು ನಾಗರೀಕರಲ್ಲಿ ಅರಿವು ಮೂಡಿಸಲು ಜಾಗೃತಿ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇಂದು 4 ವಲಯಗಳಲ್ಲಿ ಅಭಿಯಾನ ನಡೆಸಲಾಯಿತು. ಬಿಬಿಎಂಪಿ ಪಶುಪಾಲನೆ ವಿಭಾಗದಿಂದ “ಪ್ರಾಣಿಗಳ ಆರೋಗ್ಯದ ಮೂಲಕ ಸಾರ್ವಜನಿಕ ಆರೋಗ್ಯ”ದ ಶೀರ್ಷಿಕೆಯಡಿ ಸಮುದಾಯ ಪ್ರಾಣಿಗಳ ಸಹಬಾಳ್ವೆ ಮೂಡಿಸುವ ನಿಟ್ಟಿನಲ್ಲಿ ಎಲ್ಲಾ ವಲಯಗಳಲ್ಲೂ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ. ಸಮುದಾಯ ಪ್ರಾಣಿಗಳಿಗಾಗಿ ಪಾಲಿಕೆಯ ಪಶುಪಾಲನಾ ವಿಭಾಗದಿಂದ ಏನೆಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ, ಪ್ರಾಣಿಗಳ ಕುರಿತು ಯಾವೆಲ್ಲಾ ಕಾಯ್ದೆಗಳಿವೆ, ನಾಗರೀಕರು…

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆ  ಪೂವನಹಳ್ಳಿ ಆಯ್ಕೆ; ಹೆಚ್.ಡಿ.ಕೆ. ಘೋಷಣೆ

ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಜಿಲ್ಲೆ  ಪೂವನಹಳ್ಳಿ ಆಯ್ಕೆ; ಹೆಚ್.ಡಿ.ಕೆ. ಘೋಷಣೆ ನವದೆಹಲಿ,ಜ,19- ಬುಡಕಟ್ಟು ಸಮುದಾಯದ ಜನರನ್ನು ಮುಖ್ಯವಾಹಿನಿಗೆ ತಂದು, ಅವರನ್ನು ಆರ್ಥಿಕ ಮತ್ತು ಸಾಮಾಜಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆದಿವಾಸಿ ಜನಜಾತಿ ನ್ಯಾಯ ಅಭಿಯಾನ (ಪಿಎಂ ಜನ್ ಮನ್‌ ಯೋಜನೆ) ಕಾರ್ಯಕ್ರಮಕ್ಕೆ ಮಂಡ್ಯ ಲೋಕಸಭೆ ಕ್ಷೇತ್ರದ ಕೆ.ಆರ್.ಪೇಟೆ ತಾಲ್ಲೂಕಿನ ಪೂವನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ಮಂಡ್ಯ ಲೋಕಸಭೆ ಸದಸ್ಯರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು…

ಬಸವಾದಿ ಶರಣರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೆ ನಿರ್ಣಯ

ಬಸವಾದಿ ಶರಣರ ಅಭಿವೃದ್ಧಿಗೆ 500 ಕೋಟಿ ರೂ.ಬಿಡುಗಡೆಗೆ ನಿರ್ಣಯ ವರದಿ;ರುದ್ರಮೂರ್ತಿ.  ಎಂ.ಜೆ. ಚಿತ್ರದುರ್ಗ,ಜ,19-  ಇಲ್ಲಿ  ಎರಡು ದಿನಗಳ ಕಾಲ ನಡೆದ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ  ಶರಣ ಸಾಹಿತ್ಯ ಮತ್ತು ಬಸವಾದಿ ಶರಣರ ಜೀವನ ಮೌಲ್ಯಗಳ ಕುರಿತಿ ಚರ್ಚಿಸಲಾಯಿತು.. ಕೊನೆಗೆ ಸಮ್ಮೇಳನದಲ್ಲಿ ಐದು ನಿರ್ಣಯಗಳನ್ನು ತಗೆದುಕೊಳ್ಳಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣ ಎಂದು ಘೋಷಿದ ಸರ್ಕಾರ 500 ಕೋಟೆಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುವುದು ಸೇರಿದಂತೆ ಐದು ನಿರ್ಣಯಗಳನ್ನು ತಗೆದುಕೊಂಡಿದೆ. ನಿರ್ಣಯಗಳು; 1) ಸಾಂಸ್ಕೃತಿಕ ನಾಯಕ ಬಸವಣ್ಣ ಘೋಷಣೆ…

ಕಲ್ಯಾಣ ಕರ್ನಾಟಕದ ಸರ್ವಾಂಗೀಣ  ಅಭಿವೃದ್ಧಿಗೆ ಶ್ರಮ- ವಿಜಯೇಂದ್ರ

ಕಲ್ಯಾಣ ಕರ್ನಾಟಕದ ಸರ್ವಾಂಗೀಣ  ಅಭಿವೃದ್ಧಿಗೆ ಶ್ರಮ- ವಿಜಯೇಂದ್ರ ಮಾನ್ವಿ,ಜ,19- ಭಗವಂತನ ಕೃಪೆಯಿಂದ, ಪರಮಪೂಜ್ಯರ ಆಶೀರ್ವಾದದಿಂದ ಮುಂದೆ ಭಗವಂತ ಶಕ್ತಿ ಕೊಟ್ಟ ದಿನಗಳಲ್ಲಿ ಈ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ಕೊಡುತ್ತೇನೆ. ಯುವಕರಿಗೆ ಉದ್ಯೋಗ ಕೊಡಲು ಕೈಗಾರಿಕೆಗಳನ್ನು ಆರಂಭಿಸಲು ಶ್ರಮಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ನುಡಿದರು. ಕೆಎಸ್ ಎನ್ ಸಾಮಾಜಿಕ ಸೇವಾ ಸಮಿತಿ ಮಾನ್ವಿ ಸಿರಿವಾರ ವತಿಯಿಂದ ಮಾಜಿ ಸಚಿವ ಶಿವನಗೌಡ ನಾಯಕ್ ಅವರ ಸಾರಥ್ಯದಲ್ಲಿ ಅದ್ದೂರಿಯಾಗಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ…

ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ: ಡಿಸಿಎಂ

ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ: ಡಿಸಿಎಂ ಬೆಳಗಾವಿ, ಜ.19-“ಗಾಂಧಿ ಭಾರತದ ಅಂಗವಾಗಿ ಜ.21ರಂದು ನಡೆಯಲಿರುವ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ತಯಾರಿ ನಡೆಯುತ್ತಿದ್ದು, ಸಚಿವರುಗಳು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್, ಕಪಿಲೇಶ್ವರ ದೇವಾಲಯ ಹಾಗೂ ಫಿರೋಜ್ ಸೇಠ್ ಅವರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. “ಜ.21ರ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳು…

ಸಿಎಂ, ಕೆಪಿಸಿಸಿ ಅಧ್ಯಕ್ಷ ಎರಡೂ ಕುರ್ಚಿ ಖಾಲಿಯಿಲ್ಲ – ಜಮೀರ್ 

ಸಿಎಂ, ಕೆಪಿಸಿಸಿ ಅಧ್ಯಕ್ಷ ಎರಡೂ ಕುರ್ಚಿ ಖಾಲಿಯಿಲ್ಲ – ಜಮೀರ್  ಹುಬ್ಬಳ್ಳಿ ,ಜ,19- ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಯೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷ ಕುರ್ಚಿಯೂ ಖಾಲಿ ಇಲ್ಲ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಹುಬ್ಬಳ್ಳಿ ಯಲ್ಲಿ ಸುದ್ಧಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸ್ಥಾನ ದಲ್ಲಿ ಸಿದ್ದರಾಮಯ್ಯ ಅವರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿಕೆ ಶಿವಕುಮಾರ್ ಕುಳಿತಿದ್ದಾರೆ. ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹಾಕಿದ ಗೆರೆ ನಾವು ದಾಟುವುದಿಲ್ಲ.…

1 17 18 19 20 21 98
Girl in a jacket