Girl in a jacket

Author kendhooli_editor

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ದಿಂದ ವಿಶೇಷ ಕೊಡುಗೆ ಘೋಷಣೆ!*

ಬೆಂಗಳೂರು,ಏ,18:ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ವಂಡರ್‌ಲಾ ಹಾಲಿಡೇಸ್‌ ವಿಶೇಷ ರಿಯಾಯಿತಿ ಘೋಷಿಸಿದೆ. ಹೌದು, 2021-22 ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಮೊದಲ ಹಾಗೂ ದ್ವೀತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ನನ್ನು ತೋರಿಸುವ ಮೂಲಕ ಶೇ.35ರಷ್ಟು ರಿಯಾಯಿಯನ್ನು ಪಡೆಯಬಹುದು. ವಿದ್ಯಾರ್ಥಿಗಳು ಪರೀಕ್ಷೆ ಬರೆದು ತಮ್ಮ ಬೇಸಿಗೆ ರಜೆಯನ್ನು ಆನಂದಿಸಲು ಪ್ರಾರಂಭಿಸಿದ್ದಾರೆ. ಅವರ ಬೇಸಿಗೆ ರಜೆಯ ಮನರಂಜನೆಯನ್ನು ಇನ್ನಷ್ಟು ದ್ವಿಗುಣಗೊಳಿಸಲು ಈ ಆಫರ್‌ ನೀಡಲಾಗಿದೆ. ವಂಡರ್‌ಲಾದಲಿ ಸಾಮಾಜಿಕ ಅಂತರದ ನಿಯಮವನ್ನು ಪಾಲಿಸಲಾಗುತ್ತಿದೆ. ಆಸಕ್ತ ವಿದ್ಯಾರ್ಥಿಗಳು…

21ರಂದು ಬೃಹತ್ ರೈತಸಮಾವೇಶಕ್ಕೆ ಕೇಜ್ರಿವಾಲ್

ಬೆಂಗಳೂರು, ಏ18:ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ. ದೆಹಲಿ ಮಾದರಿಯಿಂದ ಪ್ರೇರಣೆ ಹೊಂದಿರುವ ರಾಜ್ಯ ರೈತ ಸಂಘವು ಸಿಎಂ ಕೇಜ್ರಿವಾಲ್‌ರವರಿಗೆ ವಿಶೇಷ ಆಹ್ವಾನ ನೀಡಿದ್ದು, ಅವರು ಆಗಮಿಸಿ ರೈತರನ್ನು…

ದೆಹಲಿ ಸಭೆನಂತರ ಸಚಿವ ಸಂಪುಟ ವಿಸ್ತರಣೆ ನಿರ್ಧಾರ; ಸಿಎಂ ಬೊಮ್ಮಾಯಿ

ಬೆಂಗಳೂರು, ಏ, 18: ಸಂಪುಟ ವಿಸ್ತರಣೆ ಬಗ್ಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕದ ಬಗ್ಗೆ ದೆಹಲಿಯಲ್ಲಿ ಸಭೆ‌ ನಡೆಸುತ್ತೇವೆ. ಸಭೆಯ ನಂತರ ಮಾಹಿತಿ ನೀಡುತ್ತೇನೆ. ಆ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ಹೇಳಿದ್ದಾಗಿ…

ಎಸ್‌ಪಿ ಶೋಭಾ ಕಟಾವ್ಕರ್ ಮನೆಯಲ್ಲಿ ಶವವಾಗಿ ಪತ್ತೆ

ಬೆಂಗಳೂರು,ಏ,15: ಇತ್ತೀಚೆಗೆ ಎಸ್‌ಪಿಯಾಗಿ ಮುಂಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಶೋಭಾ ಕಟಾವ್ಕರ್(53) ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆಯ ಸದಸ್ಯರೆಲ್ಲರೂ ಹಾಸನಕ್ಕೆ ತೆರಳಿದ್ದರು. ಸದಸ್ಯರು ತೆರಳಿದ್ದರೂ ಪುಟ್ಟೇನಹಳ್ಳಿಯ ನಿವಾಸದಲ್ಲಿ ಶೋಭಾ ಇಂದು ಒಬ್ಬರೇ ಇದ್ದರು. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮನೆಯ ಸದಸ್ಯರು ಶುಕ್ಸಂರವಾ ಸಂಜೆ ಕಟಾವ್ಕರ್‌ಗೆ ಕರೆ ಮಾಡಿದ್ದಾಗ ಅವರು ಫೋನ್ ರಿಸೀವ್ ಮಾಡಿರಲಿಲ್ಲ. ಹೀಗಾಗಿ ಮನೆಯ ಸೆಕ್ಯುರಿಟಿಗೆ ಪರಿಶೀಲಿಸಲು ಸೂಚಿಸಿದ್ದರು. ರಾತ್ರಿ 8 ಗಂಟೆಯ ವೇಳೆ ಮನೆಯನ್ನು ಸೆಕ್ಯೂರಿಟಿ ಮನೆಯನ್ನು ಪರಿಶೀಲಿಸಿದಾಗ ಕಟಾವ್ಕರ್ ಸಾವನ್ನಪ್ಪಿರುವುದು…

ಕೊನೆಗೂ ಈಶ್ವರಪ್ಪ ರಾಜೀನಾಮೆ ನೀಡುವುದಾಗಿ ಘೋಷಣೆ

ಶಿವಮೊಗ್ಗ, ಏ,14: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ ವಿಪಕ್ಷಗಳ ತೀವ್ರ ಪ್ರತಿಭಟನೆ, ಬಿಜೆಪಿ ಹೈಕಮಾಂಡ್ ಬೇಸರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಗುತ್ತಿಗೆದಾರ ಸಂತೋಷ್‌ ಪಾಟೀಲ್ ಯಾರೆಂದು ನನಗೆ ಗೊತ್ತಿಲ್ಲ. ಸುಖಾಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗಿದೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು…

ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏ, 14: ಸಚಿವ ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು, ಸ್ವಪ್ರೇರಣೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.ಕೆ.ಎಸ್.ಈಶ್ವರಪ್ಪ ಅವರು ನನ್ನ ಬಳಿ ಮಾತನಾಡಿದರು. ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಹಾಗೂ ತಪ್ಪಿಲ್ಲ ಎನ್ನುವ ಸಂಪೂರ್ಣ ವಿಶ್ವಾಸವಿದೆ. ಹೀಗಾಗಿ ನನಗೆ ನೈತಿಕತೆ ಇದೆ. ಈಗ ಅದನ್ನಿಟ್ಟು ಕೊಂಡು ಮಾತನಾಡಿದರೆ ಬಹಳಷ್ಟು ಜನರಿಗೆ ಇರಿಸುಮುರುಸಾಗುತ್ತದೆ. ಅದಾಗುವುದು ಬೇಡ. ಇದರ ತನಿಖೆ ಮುಗಿಸಿ, ಸತ್ಯ ಹೊರಬಂದು, ನನ್ನ ಮೇಲೆ…

ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ: ಗಂಭೀರವಾಗಿ ಪರಿಗಣಿಸಲು ಪೋಲಿಸರಿಗೆ ಸಿಎಂ ಸೂಚನೆ

ಬೆಂಗಳೂರು, ಏ, 08: ರಾಜ್ಯದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ. ಕರ್ನಾಟಕ ಪ್ರಗತಿಪರವಾದ ರಾಜ್ಯವಾಗಿದ್ದು, ಇದಕ್ಕೆ ಕೆಟ್ಟ ಹೆಸರು ತರಲು ಕೆಲವರು ಪದೇ ಪದೇ ಹೀಗೆ ಮಾಡುತ್ತಿದ್ದಾರೆ. ಪೋಲಿಸ್ ಅಧಿಕಾರಿಗಳಿಗೆ ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಬಗ್ಗೆ ಸುದ್ದಿಗಾರರಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಅವರು ಪ್ರತಿಕ್ರಿಯೆ ನೀಡಿದರು. ಈ ಕುರಿತು ಎಲ್ಲಾ ಕಡೆ ತಪಾಸಣೆ ಮಾಡಲು ತಿಳಿಸಿದ್ದು, ಕರೆ ಮಾಡಿದವರ…

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿಯಲ್ಲಿ ದಿಡೀರ್ ಬದಲಾವಣೆ

ಬೆಂಗಳೂರು ,ಏ.7: ದ್ವಿತೀಯ ಪಿಯುಸಿ  ಅಂತಿಮ ಪರೀಕ್ಷಾ ವೇಳಾಪಟ್ಟಿಯಲ್ಲಿ  ಬದಲಾವಣೆಯಾಗಿದೆ.  ವಿವಿಧ ವಿಷಯಗಳ ಪರೀಕ್ಷೆ ದಿನಾಂಕ ಮಾತ್ರ ಅದಲು ಬದಲು. ಕೆಲ‌ ತಾಂತ್ರಿಕ ಕಾರಣಗಳಿಂದ ಪರೀಕ್ಷೆ ದಿನಾಂಕ ಮಾತ್ರ ಬದಲಾವಣೆಯಾಗಿದೆ. ಈ ಮೊದಲು ತಿಳಿಸಿದಂತೆ ಏ. 22ರಿಂದ‌ ಮೇ 18ರವರೆಗೆ ಪರೀಕ್ಷೆ ನಡೆಯಲಿದೆ ವಿಷಯಗಳ ದಿನಾಂಕವಷ್ಟೆ ಬದಲಾಗಿದೆ ಎಂದು ಪಿಯು ಬೋರ್ಡ್  ಮಾಹಿತಿ ನೀಡಿದೆ. ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಈ ಬದಲಾವಣೆಯನ್ನು ವಿದ್ಯಾರ್ಥಿಗಳ ಗಮನಕ್ಕೆ ತರುವಂತೆ ಸೂಚನೆ ನೀಡಲಾಗಿದೆ. ತಮ್ಮೆಲ್ಲರ ಗಮನಕ್ಕೆ ಈ ಹಿಂದೆ…

ವರ್ಷದಲ್ಲಿ 2.50 ಲಕ್ಷ ಜನರಿಗೆ ಕೌಶಲ್ಯ ತರಬೇತಿ: ಅಶ್ವತ್ಥನಾರಾಯಣ

ಮೈಸೂರು,ಏ,07: ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಈ ವರ್ಷ 2.50 ಲಕ್ಷ ಜನರಿಗೆ ಕೌಶಲ್ಯ ತರಬೇತಿ ಕೊಟ್ಟು, ಎಲ್ಲರನ್ನೂ ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡಲಾಗುವುದು. ಜತೆಗೆ, ವಿದ್ಯಾರ್ಥಿಗಳಿಗೆ ಪ್ರೌಢಶಾಲೆಯ ಮಟ್ಟದಿಂದಲೇ ಉದ್ಯೋಗಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಹೇಳಿದ್ದಾರೆ. ನಿಗಮದ ವತಿಯಿಂದ ಇಲ್ಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆವರಣದಲ್ಲಿ ಏರ್ಪಡಿಸಿದ್ದ `ಉದ್ಯೋಗ ಮೇಳ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, `ರಾಜ್ಯದಲ್ಲಿ ಉದ್ಯೋಗಗಳಿಗೇನೂ ಕೊರತೆ ಇಲ್ಲ. ಆದರೆ, ಈ ಉದ್ಯೋಗಗಳಿಗೆ ಬೇಕಾದ…

ಉಕ್ರೇನಿಂದ ಸ್ವದೇಶಕ್ಕೆ ಆಗಮಿಸಿರುವ ವಿದ್ಯಾರ್ಥಿಗಳಿಗೆ ಬಿಎಲ್ ಡಿಇ ವಿ.ವಿ.ಯಿಂದ ಉಚಿತ ಶಿಕ್ಷಣ

ವಿಜಯಪುರ ,ಏ,7: ಯುದ್ಧಪೀಡಿತ ಉಕ್ರೇನಿನಿಂದ ವೈದ್ಯಕೀಯ ವಿದ್ಯಾಭ್ಯಾಸ ಮೊಟಕುಗೊಳಿಸಿ, ದೇಶಕ್ಕೆ ಆಗಮಿಸಿರುವ ವಿದ್ಯಾರ್ಥಿಗಳ ನೆರವಿಗೆ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮುಂದಾಗಿದೆ. ಸರ್ಕಾರದ ಮುಂದಿನ ಆದೇಶದವರೆಗೆ ಈ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಮೂಲಕ ಅತಂತ್ರದಲ್ಲಿದ್ದ ವಿದ್ಯಾರ್ಥಿಗಳ ಪಾಲಿಗೆ ಆಧಾರ ಹಸ್ತ ಚಾಚುವ ಮೂಲಕ ದೇಶದ ಪ್ರಥಮ ವೈದ್ಯಕೀಯ ಶಿಕ್ಷಣ ಸಂಸ್ಥೆಯಾಗಿದೆ. ಈ ಕುರಿತು ವಿಜಯಪುರದಲ್ಲಿ ಇಂದು ಪ್ರಕಟಿಸಿದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಎಂ.ಬಿ.ಪಾಟೀಲ್‍ರವರು, ವಿಜಯಪುರದಲ್ಲಿ…

ದೆಹಲಿ ಭೇಟಿ ಫಲಪ್ರದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನವದೆಹಲಿ, ಏ, 07: ಈ ಬಾರಿ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಜಲಶಕ್ತಿ, ಇಂಧನ, ಪರಿಸರ , ಹಣಕಾಸು, ರಕ್ಷಣಾ ಸಚಿವರನ್ನು ಭೇಟಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಭಾ.ಜ.ಪ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲು ನನಗೆ ಅವಕಾಶ ದೊರೆತಿದ್ದು ಸಂತೋಷ ತಂದಿದೆ ಎಂದರು. ಏಪ್ರಿಲ್ 16 ಮತ್ತು 17 ಭಾ.ಜ.ಪ ರಾಜ್ಯ ಕಾರ್ಯಕಾರಿಣಿ ಸಭೆ ಏಪ್ರಿಲ್ 16 ಮತ್ತು 17 ರಂದು ಭಾ.ಜ.ಪ…

ಓ ಮೈ ಲವ್‌ಗೆ ಉಪೇಂದ್ರ ಸಾಥ್

ಜಿಸಿಬಿ ಪ್ರೊಡಕ್ಷನ್ ಲಾಂಛನದಲ್ಲಿ ಸಿದ್ದಗೊಂಡಿರುವ ಹೊಸ ಥರದ ನಿರೂಪಣೆ ಒಳಗೊಂಡ ’ಓ ಮೈ ಲವ್’ ಚಿತ್ರದ ’ಏನಾಯ್ತೋ ನಾ ಕಾಣೆ’ ಲಿರಿಕಲ್ ಹಾಡನ್ನು ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ದೇಶಕ ಸ್ಮೈಲ್‌ಶ್ರೀನು ಚಿತ್ರೀಕರಣ ನಡೆಯುತ್ತಿರುವ ಸಂದರ್ಭದಲ್ಲಿ ಸಂಗೀತ ನಿರ್ದೇಶಕರು ಹಾಡಿನ ಟ್ಯೂನ್ ಕಳುಹಿಸಿಕೊಟ್ಟರು. ಅದನ್ನು ಕೇಳುತ್ತಿದ್ದ ಹಾಗೆ ರೋಮಾಂಚನವಾಯಿತು. ಪಲ್ಲವಿ ಚೆನ್ನಾಗಿದೆ. ಚರಣ ಬದಲಾವಣೆ ಮಾಡೋಣವೆಂದು ಹೇಳಲಾಯಿತು. ನಂತರ ಎರಡು ದಿವಸದಲ್ಲೆ ಸಾಹಿತಿ ಡಾ.ವಿ.ನಾಗೇಂದ್ರಪ್ರಸಾದ್ ಚರಣ ಕೊಟ್ಟರು.…

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಬಿಜೆಪಿ ಮೌನ: ಹೆಚ್.ಡಿ.ಕೆ ಆಕ್ರೋಶ

ಬೆಂಗಳೂರು,ಏ,3: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಮೌನವಾಗಿರುವ ಬಿಜೆಪಿ, ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು; “ಮೌನಕ್ಕೆ ಶರಣಾಗಿರುವ ಬಿಜೆಪಿಯನ್ನು ಮೌನಿ ಪಕ್ಷ, ಸರಕಾರವನ್ನು ಮೌನಿ ಸರಕಾರ ಹಾಗೂ ಮುಖ್ಯಮಂತ್ರಿಯನ್ನು ಮೌನಿ ಮುಖ್ಯಮಂತ್ರಿ” ಎಂದು  ಛೇಡಿಸಿದ್ದಾರೆ ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ…

ನೈಸ್ ರಸ್ತೆ ಟೋಲ್ ಹೆಚ್ಚಳದ ವಿರುದ್ಧ ದೇವೇಗೌಡ ಗುಡುಗು

ಬೆಂಗಳೂರು,ಏ.3-  ನೈಸ್ ಸಂಸ್ಥೆ ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಟೋಲ್ ಹಣವನ್ನು ಹೆಚ್ಚಿಸಿದೆ. ಸರ್ಕಾರಿ ಭೂಮಿಯನ್ನು ಮೆಟ್ರೋಗೆ ಮಾರಿ ದುಡ್ಡು ಮಾಡಲು ಹೊರಟಿದೆ. ಈ ಬಗ್ಗೆ ಸರ್ಕಾರಕ್ಕೆ ಅನೇಕ ಪತ್ರ ಬರೆದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು  ಮಾಜಿ ಪ್ರಧಾನಿ‌ಎಚ್ ಡಿ ದೇವೇಗೌಡ ನೈಸ್ ವಿರುದ್ಧ ಮತ್ತೆ ಗುಡುಗಿದ್ದಾರೆ. ಜೆಡಿಎಸ್ ಪಕ್ಷದ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಂಬಾ ಆಸೆಯಿಟ್ಟುಕೊಂಡು ಈ ನೈಸ್ ಪ್ರಾಜೆಕ್ಟ್‌ಗೆ ಒಪ್ಪಿಗೆ ನೀಡಿದ್ದೆ. ಇದು ನನ್ನ ಕನಸಿನ ಪ್ರಾಜೆಕ್ಟ್ ಆಗಿತ್ತು. ಆದರೆ ನೈಸ್…

ಯುಗಾದಿ ಇತಿಹಾಸದ ಹಿನ್ನೆಲೆ ಏನು?

ಬರಹ; ನಾಗರಾಜ.ಕೆ.ಟಿ. ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ. ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ. – ದ.ರಾ.ಬೇಂದ್ರೆಯವರ ಈ ಕವನದ ಸಾಲುಗಳು ಇಂದಿಗೂ ಪ್ರಸ್ತುತ ಎನಿಸುತ್ತದೆ. ಚೈತ್ರ ಮಾಸದ ಶುಕ್ಲಪಕ್ಷದ ಪಾಡ್ಯದಂದು ನಾವು ಈ ಹಬ್ಬವನ್ನು ಆಚರಿಸುತ್ತೇವೆ. ಆಗ ಪ್ರಕೃತಿಯಲ್ಲಿ ನವ ಚೈತನ್ಯ ಕಾಣುತ್ತೇವೆ. ಮರ-ಗಿಡಗಳಲ್ಲಿ ಹೊಸ ಚಿಗುರು ಬಿಡುವ ಕಾಲ ಮರಗಳಲ್ಲಿ ಹೂವಿನಿಂದ ಮೈ ತುಂಬಿ ನಿಂತಿರುವುದನ್ನು ಕಾಣುತ್ತೇವೆ. ಯುಗಾದಿಯನ್ನು ಸಂಭ್ರಮದಿಂದ ಆಚರಿಸಿ ನಾವು ಪ್ರಕೃತಿಯ ಸಡಗರದೊಂದಿಗೆ ಯುಗದ ಆದಿಗೆ…

ಹಾಲು ಉತ್ಪಾದಕರಿಗೆ ಹೆಚ್ಚಿನ ಆರ್ಥಿಕ ನೆರವು ;ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏ, 01: ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಒಂದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಇದರಿಂದ ಹಾಲು ಉತ್ಪಾದಿಸುವ ರೈತರಿಗೆ ಹೆಚ್ಚಿನ ಆರ್ಥಿಕ ನೆರವು ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕಿನ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಇಲಾಖೆ ಸಚಿವ ಅಮಿತ್ ಷಾ ಅವರೊಂದಿಗೆ ಪಾಲ್ಗೊಂಡು ಮಾತನಾಡುತ್ತಿದ್ದರು. ಸಹಕಾರಿ ರಂಗದ ಹಾಲು ಉತ್ಪಾದಕರ ಶಕ್ತಿ ಏನು ಎನ್ನುವುದು ಎಲ್ಲರಿಗೂ ಗೊತ್ತಿದೆ. ಸುಮಾರು…

ಭಾರತದಲ್ಲಿ ಧಾರ್ಮಿಕ ಪರಂಪರೆಗೆ ವಿಶೇಷ ಸ್ಥಾನವಿದೆ; ರಘುಮೂರ್ತಿ

ನಾಯಕನಹಟ್ಟಿ,ಏ,01:ನಮ್ಮ ರಾಷ್ಟ್ರದ ಧಾರ್ಮಿಕ ಪರಂಪರೆಗೆ ವಿಶೇಷವಾದ ಸ್ಥಾನಮಾನವಿದೆ ಋಗ್ವೇದದಪಲ್ಲಿ ಆರ್ಯನರು ಧಾರ್ಮಿಕ ನೆಲೆಘಟ್ಟನ್ನು ಗಟ್ಟಿಗೊಳಿಸಿದರು ಸಿಂಧೂ ನಾಗರೀಕತೆ ಯಿಂದಲು ಧಾರ್ಮಿಕ ಭಾವನೆ ಶ್ರೀಮಂತ ಗೊಂಡಿತು ಎಂದು ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದರು ಕರ್ನಾಟಕ ರಾಜ್ಯ ಸರ್ಕಾರದಿಂದ ಧಾರ್ಮಿಕ ದಿನಾಚರಣೆಯನ್ನು ಗೌರಸಮುದ್ರದ ಅಧಿದೇವತೆ ಮಾರಮ್ಮನ ದೇವಸ್ಥಾನದಲ್ಲಿಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ ತಾಲೂಕಿನಲ್ಲಿ ಎರಡು ಮೇಜರ್ ಮುಜರಾಯಿ ದೇವಸ್ಥಾನಗಳಿದ್ದು ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನ ಹಾಗೂ ಗೌರಸಮುದ್ರದ ಮಾರಮ್ಮ ದೇವಸ್ಥಾನದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಬರು ಭಕ್ತಾಧಿಗಳಿಗೆ ವಿಶೇಷವಾಗಿ ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನದಲ್ಲಿ…

ಜನರ ವಿಭಜಿಸುವ ಪ್ರಯತ್ನಸರ್ಕಾರದ  ವಿರುದ್ಧ ಸಿದ್ದು ವಾಗ್ದಾಳಿ

ಬೆಂಗಳೂರು, ಏ.೧: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಎಲ್ಲಾ ವರ್ಗದವರು ತೊಂದರೆಯಲ್ಲಿದ್ದು, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿದ್ದರೂ ಇದನ್ನು ಬಿಟ್ಟು ಜನರನ್ನು ವಿಭಜಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ನೂತನ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಮಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೋಮುವಾದವನ್ನು ಹೆಚ್ಚು ಮಾಡುತ್ತಿಲ್ಲಾರೆ. ಬಿಜೆಪಿ, ಸಂಘ ಪರಿಹಾರ ಸಂವಿಧಾನದ ವಿರುದ್ಧವಾಗಿ ಜನರ ಮನಸ್ಸನ್ನು ಕೋಮುವಾದದ ಆಧಾರದ ಮೇಲೆ…

ಬಹುರೂಪಿಯ ಅಕ್ಕಯ್ ಕೃತಿಗೆ ಎರಡು ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು,ಮಾ,30 :ಬಹುರೂಪಿ ಪ್ರಕಾಶನದ ಹೆಮ್ಮೆಯ ‘ಅಕ್ಕಯ್’ ಕೃತಿಗೆ ‘ಪ್ರಕಟಣೆಯ ಉತ್ಕೃಷ್ಟತೆ’ಗಾಗಿ ಎರಡು ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪ್ರಕಟಣೆಪ್ರಪಂಚದ ಮಹತ್ವದ ಸಂಸ್ಥೆಯಾದ ‘ಪಬ್ಲಿಷಿಂಗ್ ನೆಕ್ಸ್ಟ್’ ಆಯೋಜಿಸಿದ್ದ ವಾರ್ಷಿಕ ಸ್ಪರ್ಧೆಯಲ್ಲಿ ‘ಬಹುರೂಪಿ ಪ್ರಕಾಶನ’ದ ‘ಅಕ್ಕಯ್’ ಕೃತಿ ಪ್ರಕಟಣೆಯ ಉತ್ಕೃಷ್ಟತೆಗೆ ಹಾಗೂ ‘ಕುಪ್ಪಳಿ ಡೈರಿ’ ಮುಖಪುಟ ವಿನ್ಯಾಸಕ್ಕಾಗಿ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದವು. ದೇಶ ವಿದೇಶದ ಪ್ರತಿಷ್ಠಿತ ಪ್ರಕಟಣಾ ಸಂಸ್ಥೆಗಳು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಅಂತಿಮವಾಗಿ ‘ಅಕ್ಕಯ್’ ಕೃತಿ ಪ್ರಕಟಣೆಯ ಉತ್ಕೃಷ್ಟತೆ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನವನ್ನು ಗಳಿಸಿತು. ದೇಶ ಸಾರ್ವಜನಿಕ…

1 21 22 23 24 25 98
Girl in a jacket