ಮುಸಲ್ಮಾನರನ್ನು ಓಲೈಸುವ, ರಾಜ್ಯದ ಹಿಂದೂಗಳಿಗೆ ಅವಮಾನಿಸುವ ರಾಜಕೀಯ: ವಿಜಯೇಂದ್ರ ಟೀಕೆ
ಶಿವಮೊಗ್ಗ,ಏ,12-: ಸುಮಾರು 50ರಷ್ಟು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯದ ಕಾಂಗ್ರೆಸ್ ಸರಕಾರವು ಸರಕಾರಿ ನೌಕರರಿಗೆ ಸಂಬಳ ಕೊಡಲು ದುಡ್ಡಿಲ್ಲದ ಪರಿಸ್ಥಿತಿಗೆ ಬಂದು ತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದ್ದಾರೆ. ತೀವ್ರ ಮಳೆಯ ನಡುವೆ ಇಲ್ಲಿ ಇಂದು ಜನಾಕ್ರೋಶ ಯಾತ್ರೆಯ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಸಲ್ಮಾನರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಸರಕಾರಿ ಕಾಮಗಾರಿಗಳಲ್ಲಿ ಶೇ 4 ರಷ್ಟು ಮೀಸಲಾತಿ ನೀಡಿದ್ದಾರೆ. ಇದು ಹಿಂದೂಗಳಿಗೆ ಅವಮಾನ…