Girl in a jacket

Author kendhooli_editor

ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ.1-“ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಜಾತಿ ಗಣತಿ ನಡೆಸುವುದು ಕೇಂದ್ರದ ಜವಾಬ್ದಾರಿ ಎಂದು ಹೇಳುತ್ತಿದ್ದರು. ರಾಹುಲ್ ಗಾಂಧಿಯವರ ಒತ್ತಾಯಕ್ಕೆ ಮಣಿದು ಕೇಂದ್ರ ಸರ್ಕಾರ ಜಾತಿಗಣತಿಗೆ ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು.ಕೇಂದ್ರ ಸರ್ಕಾರ ಜಾತಿಗಣತಿ ನಡೆಸಲು ನಿರ್ಧರಿಸಿರುವ ಬಗ್ಗೆ ಕೇಳಿದಾಗ, “ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ…

ಬುದ್ಧ, ಬಸವ, ಅಂಬೇಡ್ಕರ್ ರವರ ತತ್ವ-ಸಿದ್ಧಾಂತ ಎಲ್ಲ ಕಾಲಕ್ಕೂ ಶ್ರೇಷ್ಠ: ಛಲವಾದಿ ನಾರಾಯಣಸ್ವಾಮಿ

ಎರಡರಬೆಂಗಳೂರುಏ,30- ಬುದ್ಧ, ಬಸವ, ಅಂಬೇಡ್ಕರ್ ರವರ ತತ್ವ-ಸಿದ್ಧಾಂತಗಳು ಎಲ್ಲ ಕಾಲ್ಲಕ್ಕೂ ಶ್ರೇಷ್ಠ. ಅವರ ತತ್ವ-ಸಿದ್ಧಾಂತಗಳು ಸಾರ್ವಕಾಲಿಕ ಮತ್ತು ಸದಾ ಜನರಿಗೆ ಒಳ್ಳೆಯದನ್ನೆ ಬಯಸುವ ಸಿದ್ಧಾಂತಗಳು ಎಂದು ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಜಗಜ್ಯೋತಿ ಬಸವಣ್ಣನವರ ಜಯಂತಿ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿದರು. ತುಳಿತಕ್ಕೆ ಒಳಗಾದವರು, ಅಂಧಕಾರದಲ್ಲಿದ್ದ ಜನರಿಗೆ ಬಸವಣ್ಣನವರು ಬೆಳಕಾದವರು. ಜಾತ್ಯತೀತವಾದ ಸಮಾಜ ನಿರ್ಮಾಣ ಮಾಡಬೇಕು, ಮಾನವ ಧರ್ಮ ಕಟ್ಟಬೇಕು…

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ; ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏ, 30-ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ…

ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚ ಪಡೆಯದೇ ಮಾಡಲಾಗಿದೆ- ಸಿಎಂ

ಬೆಂಗಳೂರು, ಏ, 29-ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್ ವಿತರಣೆ ಹಾಗೂ ಸಾಧನೆಯ ಹಾದಿಯಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು. ಹಿಂದೆ 94-95 ರಲ್ಲಿ ಗೋವಿಂದೇಗೌಡರು ಇದ್ದ ಸಂದರ್ಭದಲ್ಲಿ ಒಂದು ಲಕ್ಷ ಉಪಾಧ್ಯಾಯರನ್ನು ಲಂಚವಿಲ್ಲದೇ, ಮಧ್ಯವರ್ತಿಗಳಿಲ್ಲದೇ ನೇಮಕಾತಿ ಮಾಡಲಾಗಿತ್ತು.…

ವೈಭವ್ ಅಬ್ಬರದ ಆಟ-ಗುಜರಾತ್ ಟೈಟಾನ್ ವಿರುದ್ಧ ರಾಜಾಸ್ಥಾನ ರಾಯಲ್ಸ್ ಗೆ ಭರ್ಜರಿ ಗೆಲುವು

ಜೈಪುರ,ಏ,29-ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಮೂಲಕ ಗುಜರಾತ್ ಟೈಟಾನ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದರು. ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ ನೀಡಿದ್ದ 210 ರನ್ ಗಳ ಗುರಿಯನ್ನು ರಾಜಸ್ತಾನ ರಾಯಲ್ಸ್ ತಂಡ ಕೇವಲ 15.5 ಓವರ್ ನಲ್ಲೇ 212 ರನ್ ಗಳಿಸಿ 8 ವಿಕೆಟ್ ಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿತು. ರಾಜಸ್ತಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಮತ್ತು ವೈಭವ್ ಸೂರ್ಯವಂಶಿ ಸ್ಫೋಟಕ…

ಅಮೆರಿಕಾದ ಅತ್ಯುನ್ನತ ಗೌರವಕ್ಕೆ ಪಾತ್ರರಾದ ಖ್ಯಾತ ಗಾಯಕ ರಾಜೇಶ್ ಕೃಷ್ಣನ್

ಇತ್ತೀಚೆಗೆ ಅಮೇರಿಕಾದಲ್ಲಿ  ಖ್ಯಾತ ಗಾಯಕ ರಾಜೇಶ್ ಕೃಷ್ಣನ್.  ಅವರು ಕನ್ನಡಿಗರಿಗಾಗಿ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಕಂಠಸಿರಿಯಿಂದ ಮನಸೂರೆಗೊಳಿಸಿದ್ದರು. ಈ ಹಿನ್ನೆಲೆ ಅಮೆರಿಕದ ವಿಸ್ಕಾನ್ಸಿನ್‌ನ ಬ್ರೂಕ್‌ಫೀಲ್ಡ್ ನಗರವು ಏಪ್ರಿಲ್ 25ರ ದಿನವನ್ನು “ರಾಜೇಶ್ ಕೃಷ್ಣನ್ ಸಂಗೀತ ದಿನ” ಎಂದು ಘೋಷಿಸಿದೆ. ಸ್ಯಾಂಡಲ್‌ವುಡ್‌ನ ಮೆಲೋಡಿ ಕಿಂಗ್‌ ಹಾಗೂ ಖ್ಯಾತ ಗಾಯಕ ರಾಜೇಶ್‌ ಕೃಷ್ಣನ್‌ ಅವರು ಜಾಗತಿಕ ಗೌರವಕ್ಕೆ ಪಾತ್ರರಾಗಿದ್ದಾರೆ. ತಮ್ಮ ಇಂಪು ಧ್ವನಿಯಿಂದ ಕನ್ನಡದ ಸಂಗೀತ ಪ್ರಿಯರನ್ನು ರಂಜಿಸಿರುವ ಅವರ ಪ್ರತಿಭೆಯನ್ನು ಅಮೆರಿಕದ ವಿಸ್ಕಾನ್ಸಿನ್‌ನ ಬ್ರೂಕ್‌ಫೀಲ್ಡ್ ನಗರ ಗುರುತಿಸಿದೆ…

ರೈಲ್ವೆ ಪರೀಕ್ಷೆಗಳಲ್ಲಿ ಮಂಗಳ ಸೂತ್ರ,,ಜನಿವಾರ ಧರಿಸದಂತೆ ವಿಧಿಸಿದ್ದ ಆದೇಶ ವಾಪಾಸ್

ಬೆಂಗಳೂರು,ಏ,28- ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ಧರಿಸಿದಂತೆ ವಿಧಿಸಿದ್ದ ನಿರ್ಬಂಧದ ಆದೇಶವನ್ನ ರೈಲ್ವೆಇಲಾಖೆ ವಾಪಸ್ ಪಡೆದಿದೆ . ಈ ಕುರಿತು ರೈಲ್ವೆ ಸಚಿವಾಲಯ ಇದೀಗ ಆದೇಶ ಹೊರಡಿಸಿದೆ. ನೇಮಕಾತಿ ಮಂಡಳಿಗಳಿಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ. ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ಧರಿಸಲು ನಿರ್ಬಂಧಿಸಿದ ಬಳಿಕ ಭಾರಿ ವಿವಾದ ಉಂಟಾಗಿತ್ತು. ನಂತರ  ರೈಲ್ವೆ ರಾಜ್ಯ ಸಚಿವ ವಿ ಸೋಮಣ್ಣ ಅವರು ಮಂಗಳಸೂತ್ರ, ಜನಿವಾರ ನಿರ್ಬಂಧದ ಆದೇಶ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಇದೀಗ ಕೇಂದ್ರ ಸಚಿವ ವಿ.ಸೋಮಣ್ಣ …

ಮಂಗಳಸೂತ್ರ, ಜನಿವಾರ ನಿಷೇಧ ಕೇಂದ್ರ ಹಿಂಪಡೆಯಲಿ: ಡಿ.ಕೆ.ಶಿ

ಬೆಂಗಳೂರು, ಏ.28-ಈ ಬಿಜೆಪಿಯವರು ಹೇಳುವುದು ಒಂದು ಮಾಡುವುದು ಇನ್ನೊಂದು. ಇದೇ ಅವರ ಮುಖವಾಡ. ರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು. ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದರು‌.ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, “ಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು…

ಅಖಿಲ ಭಾರತ ವೀರಶೈವ ಮಹಾಸಭಾ ಮಹಿಳಾ ಅಧ್ಯಕ್ಷರಾಗಿ ವೀಣಾ ಕಾಶಪ್ಪನವರ್ ನೇಮಕ

ಬೆಂಗಳೂರು, ಏ,28-ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾಗಿ ವೀಣಾ ಕಾಶಪ್ಪನವರ್ ನೇಮಕಗೊಂಡಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಈ ಆದೇಶ ಪ್ರತಿಯನ್ನು ವೀಣಾ ಕಾಶಪ್ಪನವರ್ ಅವರಿಗೆ ನೀಡಿ ಶುಭ ಹಾರೈಸಿದರ.

ನೌಕಾಪಡೆಗೆ ರೆಫೆಲ್ ಫೈಟರ್ ಜೆಟ್ಗಳ ಖರೀದಿಗೆ ಭಾರತ ಫ್ರಾನ್ಸ್ ಸಹಿ

ನವದೆಹಲಿ, ಏ,28-ನೌಕಾ ರೂಪಾಂತರದ ರಫೆಲ್ ಫೈಟರ್ ಜೆಟ್ಗಳನ್ನು ಭಾರತೀಯ ನೌಕಾಪಡೆಗೆ ಸುಮಾರು 64,000 ಕೋಟಿ ರೂ.ಗಳ ವೆಚ್ಚದಲ್ಲಿ ಖರೀದಿಸಲು ಭಾರತ ಮತ್ತು ಫ್ರಾನ್ಸ್ ಇಂದು ಅಂತರ್ ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದವು. ವಿಮಾನವಾಹಕ ನೌಕೆ ಐಎನ್‌ಎಸ್ ವಿಕ್ರಾಂತ್ನಲ್ಲಿ ನಿಯೋಜಿಸಲು ಭಾರತವು ಫ್ರೆಂಚ್ ರಕ್ಷಣಾ ಪ್ರಮುಖ ಡಸಾಲ್ಟ್ ಏವಿಯೇಷನ್ನಿಂದ ಜೆಟ್ಗಳನ್ನು ಖರೀದಿಸುತ್ತಿದೆ. ಸಹಿ ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಖರೀದಿಗೆ ಅನುಮತಿ ನೀಡಿದ ಮೂರು…

ಮೇ 9 ಕ್ಕೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ‘ಸೂತ್ರದಾರಿ’

ಈಗಲ್  ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರದ ಟ್ರೇಲರ್ ಅನ್ನು ಇತ್ತೀಚೆಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಬಿಡುಗಡೆ ಮಾಡಿದರು. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಕುತೂಹಲ ಮೂಡಿಸಿದೆ‌. ಬಹು ನಿರೀಕ್ಷಿತ ಈ ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ. ಟ್ರೇಲರ್ ಚೆನ್ನಾಗಿದೆ. ತಂತ್ರಜ್ಞರ ಕೆಲಸ ಹಾಗೂ ಕಲಾವಿದರ ಅಭಿನಯ ಸೊಗಸಾಗಿದೆ. ನಾನು ಇಲ್ಲಿಗೆ ಬರಲು…

‘ಗ್ರೀನ್’ ಮನೋವೈಜ್ಞಾನಿಕ ಥ್ರಿಲರ್ ಚಿತ್ರ

ಕನ್ನಡದಲ್ಲಿ ಪ್ರಯೋಗಾತ್ಮಕ ಚಿತ್ರಗಳಿಗೆ ನೋಡಗರ ಬೆಂಬಲ ಮೊದಲಿನಿಂದಲೂ ಸಿಗುತ್ತಿದೆ. ಅಂತಹ ವಿಭಿನ್ನ ಪ್ರಯೋಗಾತ್ಮಕ ಎನ್ನಬಹುದಾದ “ಗ್ರೀನ್” ಚಿತ್ರ ಕನ್ನಡದಲ್ಲಿ ನಿರ್ಮಾಣವಾಗಿದೆ. ರಾಜ್ ವಿಜಯ್ ಹಾಗೂ ಬಿ.ಎನ್ ಸ್ವಾಮಿ ನಿರ್ಮಾಣದ ಹಾಗೂ ರಾಜ್ ವಿಜಯ್ ನಿರ್ದೇಶನದ ಹಾಗೂ ಬಾಲಾಜಿ ಮನೋಹರ್, ಗೋಪಾಲಕೃಷ್ಣ ದೇಶಪಾಂಡೆ, ಆರ್.ಜೆ.ವಿಕ್ಕಿ ಮುಂತಾದವರು ಪ್ರಮುಖಪಾತ್ರದಲ್ಲಿ ನಟಿಸಿರುವ “ಗ್ರೀನ್” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಟೀಸರ್ ನೋಡಿದಾಗ “ಗ್ರೀನ್” ಒಂದು ತಾಂತ್ರಿಕ ಶ್ರೀಮಂತಿಕೆಯಿಂದ ಕೂಡಿರುವ ಚಿತ್ರ ಎನ್ನುವುದು ತಿಳಿಯುತ್ತದೆ ಹಾಗೂ ಚಿತ್ರ ನೋಡುವ ಕಾತುರವನ್ನು ಹೆಚ್ಚಿಸುತ್ತದೆ. ಚಿಕ್ಕ…

ಶಾಸಕರ ಅಮಾನತು, ರಾಜ್ಯಪಾಲರೊಂದಿಗೆ ಚರ್ಚೆ, ಇದು ಪ್ರಜಾಪ್ರಭುತ್ವ ವಿರೋಧಿ ನಡೆ: ಆರ್‌.ಅಶೋಕ

ಬೆಂಗಳೂರು, ಏ, 28-ಬಿಜೆಪಿಯ 18 ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ರಾಜ್ಯಪಾಲರ ಜೊತೆ ಚರ್ಚಿಸಲಾಗಿದೆ. ರಾಜ್ಯಪಾಲರು ಈ ಕುರಿತು ಸರ್ಕಾರ ಹಾಗೂ ಸ್ಪೀಕರ್‌ ಜೊತೆ ಚರ್ಚಿಸಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಲಾಗಿದೆ. ಕಳೆದ ಅಧಿವೇಶನದಲ್ಲಿ ಸಚಿವ ರಾಜಣ್ಣ ಅವರ ಹನಿಟ್ರ್ಯಾಪ್‌ ಕುರಿತು ಹಾಗೂ ಮುಸ್ಲಿಂ ಮೀಸಲಾತಿ ವಿರುದ್ಧ ಬಿಜೆಪಿಯಿಂದ ಪ್ರತಿಭಟಿಸಲಾಗಿತ್ತು. ಈ ವೇಳೆ ಸ್ಪೀಕರ್‌ ಯು.ಟಿ.ಖಾದರ್‌ ಬಿಜೆಪಿಯ…

ಕೇಂದ್ರ ಸರ್ಕಾರ ಭಾರತೀಯರನ್ನು ಸುಳ್ಳಿನ ಪ್ರವಾಹದಲ್ಲಿ ಮುಳುಗಿಸಿ ಬೆಲೆ ಏರಿಕೆಯ ಬರೆ ಹಾಕುತ್ತಿದೆ: ಸಿ.ಎಂ ಸಿದ್ದರಾಮಯ್ಯ

ಬೆಳಗಾವಿ ,ಏ ,28-ನಾವು ಬಿಜೆಪಿ-RSS ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗಲ್ಲ-ಬಗ್ಗಲ್ಲ. ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. AICC ಆಯೋಜಿಸಿದ್ದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿಯ ದೇಶ ವಿರೋಧಿ ಆಡಳಿತ, ಜನ ವಿರೋಧಿ ಕ್ರಮಗಳನ್ನು ಖಂಡಿಸಿ ಭಾಷಣ ಮಾಡುವ ವೇಳೆ ಮುಖ್ಯಮಂತ್ರಿಗಳ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಿಡಿಗೇಡಿ ವಿರುದ್ಧ ತೀವ್ರ…

ಡೆಲ್ಲಿ ತಂಡದ ವಿರುದ್ಧ ಗೆದ್ದು ಬೀಗಿದ ಆರ್‌ಸಿಬಿ

ನವದೆಹಲಿ,ಏ,೨೭-ಇಲ್ಲಿನ ಅರುಣ್‌ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ ನೀಡಿದ ೧೬೩ ರನ್‌ಗಳ ಗುರಿಯನ್ನು ಬೆನ್ನು ಹತ್ತಿದ ಆರ್‌ಸಿಬಿ ಇನ್ನೂ ಒಂಬತ್ತು ಎಸೆತಗಳ ಬಾಕಿ ಇರುವಾಗಲೇ ೬ ವಿಕಟ್ ಅಂತರದಿಂದ ಭರ್ಜರಿ ಜಯ ಸಾಧಿಸಿ ಸೇಡು ತೀರಿಸಿಕೊಂಡಿದೆ. ಹೌದು..ವಿರಾಟ್ ಕೊಹ್ಲಿ ಯಾರು ಏನೇ ಕೊಟ್ಟರೂ ಅದನ್ನು ತಿರುಗಿಸಿ ಕೊಡುವುದರಲ್ಲಿ ನಿಸ್ಸೀಮರು.. ಡೆಲ್ಲಿ ಕ್ಯಾಪಿಟಲ್ಸ್ ನೀಡಿದ ೧೬೩ರನ್ ಗಳ ಗುರಿಯನ್ನು ಬೆನ್ನು ಹತ್ತಿದ ಆರ್ ಸಿಬಿ ಕೃನಾಲ್ ಪಾಂಡ್ಯಾ ಮತ್ತು ವಿರಾಟ್ ಕೊಹ್ಲಿ ಅವರ ಅರ್ಧಶತಕಗಳ ನೆರವಿನಿಂದ…

ಕೆ‌.ಎಸ್.ಆರ್.ಟಿ.ಸಿ – ಅಪಘಾತದಲ್ಲಿ ಮೃತರಾದವರಿಗೆ ಒಂದು ಕೋಟಿ ಪರಿಹಾರ ವಿತರಣೆ

ಬೆಂಗಳೂರು, ಏ, 26-ಇದೇ ಪ್ರಪ್ರಥಮ ಬಾರಿಗೆ ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದು ಕೊಂಡ ಸಿಬ್ಬಂದಿಗೆ ರೂ. 25.00 ಲಕ್ಷ ಹಾಗೂ ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬಕ್ಕೆ ತಲಾ ರೂ.1.00 ಕೋಟಿಯಂತೆ ಇಬ್ಬರಿಗೆ ರೂ.2.00 ಕೋಟಿ ಹಾಗೂ ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ (31 ಸಿಬ್ಬಂದಿಗಳ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ) ರೂ.3.10 ಕೋಟಿ ಪರಿಹಾರ ವಿತರಣೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿತರಣೆ ಮಾಡಿದರು. ಇಂದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ…

ಯೆಮೆನ್ ದೇಶದ ಮಹಿಳೆಗೆ ಯಶಸ್ವಿ ಬೈಲಾಟರಲ್‌ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಿದ ಫೋರ್ಟಿಸ್‌ ಆಸ್ಪತ್ರೆ

ಬೆಂಗಳೂರು,ಏ,26- ವಿಶ್ವದಲ್ಲೇ ಅತ್ಯಾಧುನಿಕ ವೈದ್ಯಕೀಯ ನವೀನ ತಂತ್ರಜ್ಞಾನವಾದ “ವೆಲಿಸ್‌ ರೊಬೋಟ್‌” ಬಳಸಿಕೊಂಡು ಯೆಮೆನ್‌ ದೇಶದ 63 ವರ್ಷದ ಮಹಿಳೆಗೆ ಯಶಸ್ವಿಯಾಗಿ ಬೈಲಾಟರಲ್‌ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಫೋರ್ಟಿಸ್‌ ಆಸ್ಪತ್ರೆ ವೈದ್ಯರು ನಡೆಸಿದ್ದು, ದೇಶದಲ್ಲೇ “ವೆಲಿಸ್‌ ರೊಬೋಟ್‌” ತಂತ್ರಜ್ಞಾನ ಬಳಸುತ್ತಿರುವ ಏಕೈಕ ಆಸ್ಪತ್ರೆಯೂ ಆಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಪ್ರಧಾನ ನಿರ್ದೇಶಕರಾದ ಡಾ. ನಾರಾಯಣ್‌ ಹುಲ್ಸೆ, ಇಂದು ಸಾಕಷ್ಟು ಜನರು ಅದರಲ್ಲೂ ವಯಸ್ಸಾದವರು ಮೊಣಕಾಲು ಹಾಗೂ ಕೀಲು ನೋವಿಗೆ ತುತ್ತಾಗುತ್ತಾರೆ. ತೆರೆದ ಶಸ್ತ್ರಚಿಕಿತ್ಸೆಗೆ ಹೆದರಿ ಯಾರೂ…

ನಾಯಕನಹಟ್ಟಿ;1,45 ಲಕ್ಷ ರೂ ಕ್ರಿಯಾ ಯೋಜನೆ ಗೆ ಅನುಮೋದನೆ

ವರದಿ :- ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಏ26- :2025-26 ನೇ ಸಾಲಿನ ಸರ್ಕಾರದಿಂದ ಬಿಡುಗಡೆಯಾಗುವ 145:00 ಲಕ್ಷಗಳ ಅನುದಾನದಲ್ಲಿ ವಿವಿಧ ಯೋಜನೆಗಳ ಅನುದಾನಕ್ಕೆ ಕ್ರಿಯಾಯೋಜನೆ ತಯಾರಿಸಿ ಅನುಮೋದಿಸಲಾಯಿತು. ನಾಯಕನಹಟ್ಟಿ ಪಟ್ಟಣ ಪಂಚಾಯತಿಯ ಸಭಾಂಗಣದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಟಿ ಮಂಜುಳಾ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2025-26 ನೇ ಸಾಲಿನ ಎಸ್‌,ಎಫ್‌,ಸಿ, ಮುಕ್ತ ನಿಧಿ ಯೋಜನೆಯಲ್ಲಿ ಬಂಡವಾಳ ಆಸ್ತಿಗಳ ಸೃಜನಗಾಗಿ 6:00 ಲಕ್ಷಗಳು, ಎಸ್, ಸಿ,ಎಫ್, ಸಿ ಯೋಜನೆಗೆ 9:00 ಲಕ್ಷಗಳು ಟಿ ಎಸ್ ಪಿ ಯೋಜನೆಗೆ 4:00…

ಕಣ್ಣಿಗಳ ತೊಂದರೆ ನಿವಾರಣೆಗೆ ಮದರ್ ತೆರಿಸಾ ಸಂಸ್ಥೆ ಸದಾ ಮುಂದು

ವರದಿ :ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಏ,26- ಮಾನವನ ದೇಹದಲ್ಲಿ ಯಾವುದಾದರೂ ಒಂದು ಅಂಗ ಕಡಿಮೆಯಾದರೂ ಜೀವಿಸಬಹುದು ಆದರೆ ಮನುಷ್ಯನಿಗೆ ಕಣ್ಣುಗಳು ಇಲ್ಲ ಎಂದರೆ ಜೀವಿಸುವುದು ಕಷ್ಟ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಟಿ ಮಂಜುಳಾ ರವರು ಅಭಿಪ್ರಾಯಸಿದರು ನಾಯಕನಹಟ್ಟಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮದರ್ ತೆರೇಸಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆ (ರಿ ) ನಾಯಕನಹಟ್ಟಿ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕನ್ನಡ ಸೇನೆ, ಸಂಘಟನೆಗಳ ವತಿಯಿಂದ ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್ ಶಂಕರ್ ಕಣ್ಣಿನ ಆಸ್ಪತ್ರೆ ಶಿವಮೊಗ್ಗ…

ಸಿಎಂ ಸಿದ್ದರಾಮಯ್ಯನವರ ಮಾತು ಆಘಾತ ತಂದಿದೆ, ಕೂಡಲೇ ಕ್ಷಮೆ ಯಾಚಿಸಲಿ: ಆರ್.ಅಶೋಕ

ಬೆಂಗಳೂರು, ಏಪ್ರಿಲ್‌ 26-ದೇಶ ಸಂಕಷ್ಟದಲ್ಲಿರುವ ಸಮಯದಲ್ಲಿ ಸಿಎಂ ಸಿದ್ದರಾಮಯ್ಯ ಆಡಿರುವ ಮಾತು ಆಘಾತ ತಂದಿದೆ. ಮತ ಸಿಕ್ಕಿದರೆ ಸಾಕು ಎಂಬ ಮನಸ್ಥಿತಿ ಅವರಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ ಹಾಗೂ ಖಂಡನೀಯ. ಈ ಕುರಿತು ಸಿಎಂ ಸಿದ್ದರಾಮಯ್ಯ ಜನರ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿ ನಾಗರಿಕರು ಸಂಭ್ರಮಿಸುತ್ತಿರುವಾಗ ಅವರನ್ನು ಕೊಂದಂತೆಯೇ, ಜಮ್ಮು ಕಾಶ್ಮೀರದಲ್ಲೂ ಭಯೋತ್ಪಾದಕರು ಹಿಂದೂಗಳ ಹತ್ಯೆ ಮಾಡಿದ್ದಾರೆ. ಇದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಕ್ಷಮಿಸಬಹುದು. ದೇಶಕ್ಕೇನಾದರೂ…

1 21 22 23 24 25 126
Girl in a jacket