Girl in a jacket

Author kendhooli_editor

ಟ್ಯಾಂಕರ್ ನೀರಿನ ಮಾಫಿಯಾ ತಡೆಯಲು, ಸಂಚಾರಿ ಕಾವೇರಿ ಯೋಜನೆ: ಡಿ.ಕೆ. ಶಿವಕುಮಾರ್

ಬೆಂಗಳೂರು, ಮೇ 09-ಬೆಂಗಳೂರಿನಲ್ಲಿ ಟ್ಯಾಂಕರ್ ನೀರು ಪೂರೈಕೆ ದೊಡ್ಡ ಮಾಫಿಯಾವಾಗಿದೆ. ಇದನ್ನು ತಪ್ಪಿಸಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ನೀರು ಪೂರೈಸಲು ದೇಶದಲ್ಲೇ ಮೊದಲ ಬಾರಿಗೆ ಸಂಚಾರಿ ಕಾವೇರಿ ಯೋಜನೆ ಜಾರಿಗೊಳಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶುಕ್ರವಾರ ನಡೆದ ‘ಸರ್ವರಿಗೂ ಸಂಚಾರಿ ಕಾವೇರಿ’, ‘ಮನೆ ಬಾಗಿಲಿಗೆ ಸರಳ ಕಾವೇರಿ’ ಯೋಜನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಚಾಲನೆ ನೀಡಿ ಮಾತನಾಡಿದರು. “ಸುಮಾರು 3 ಸಾವಿರ ಕೊಳವೆ…

ಕರಾವಳಿ ಭಾಗಕ್ಕೆ ಪಾಕಿಸ್ತಾನದ ಸಂಪರ್ಕವಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ 

ಬೆಂಗಳೂರು, ಮೇ 9-ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್‌ ಚಂದ್‌‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಕೊಲೆಯ ಬಗ್ಗೆ…

ಗಡಿಯೊಳಗೆ ನುಸುಳಲೆತ್ನಿಸಿದ 5 ಉಗ್ರರ ಹೊಡೆದುರುಳಿಸಿದ ಬಿಎಸ್ ಎಫ್ ಯೋದರು

ನವದೆಹಲಿ,ಮೇ,09- ಆಪರೇಷನ್ ಸಿಂಧೂರ ನಂತರ ಪಾಕಿಸ್ತಾನ ಭಾರತದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,ಭಾರತದ ಗಡಿ ಪ್ರವೇಶ ಮಾಡಲೆತ್ನಿಸಿದ ಪಾಕಿಸ್ತಾನ ಏಳು ಉಗ್ರರನ್ನು ಬಿಎಸ್ಎಫ್ ಯೋದರು ಹೊಡೆದುರುಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದ್ದು, ಅಂತರರಾಷ್ಟ್ರೀಯ ಗಡಿಯಲ್ಲಿ ಭಯೋತ್ಪಾದಕರ ಬಹುದೊಡ್ಡ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ. ಮೂಲಗಳ ಪ್ರಕಾರ ಮೇ 8ರ ರಾತ್ರಿ 11 ಗಂಟೆ ಸುಮಾರಿಗೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ ಎಂದು…

ಆಪರೇಷನ್ ಸಿಂಧೂರ ಬೆಂಬಲಿಸಿ ಸಿಎಂ ನೇತೃತ್ವದಲ್ಲಿ ತಿರಂಗಯಾತ್ರೆ

ಬೆಂಗಳೂರು, ಮೇ,09-ಪಹಲ್ಗಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ‘ತಿರಂಗಾ ಯಾತ್ರೆ’ ನಡೆಸಲಾಯಿತು. ಸಚಿವರಾದ ಎಚ್ ಕೆ ಪಾಟೀಲ್, ಪರಮೇಶ್ವರ್, ಕೆ ಎಚ್ ಮುನಿಯಪ್ಪ, ಮಹದೇವಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಡಾ ಎಂ ಸಿ ಸುಧಾಕರ್, ಬೋಸರಾಜು, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ…

ಪಾಕ್ ಡ್ರೋಣ್ ಗಳನ್ನು ಹೊಡೆದುರುಳಿಸಿದ ಭಾರತೀಯ ಸೈನಿಕರು

ನವದೆಹಲಿ, ಮೇ09-ಈಗ ಅಕ್ಷರಶಃ ಯುದ್ಧದ ಬೀತಿ ಆರಂಭವಾಗಿದೆ,ಪೆಹಲ್ಗಾಮ್ ಘಟನೆಯ ನಂತರ ಭಾರತ ಆರಂಭಿಸಿರುವ ಆಪರೇಷನ್ ಸಿಂಧೂರದ ಹೆಸರಿನ ದಾಳಿಗೆ ಪ್ರತಿಯಾಗಿ ದಾಳಿ ನಡೆಸಲು ಮುಂದಾದ ಪಾಕಿಸ್ತಾನದ ಡ್ರೋನ್ ಗಳನ್ನು ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಬುಧವಾರ ರಾತ್ರಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಗಳಲ್ಲಿ ದೊಡ್ಡ ಪ್ರಮಾಣದ ಡ್ರೋನ್ ನಿರೋಧಕ ಕಾರ್ಯಾಚರಣೆ ನಡೆದಿದ್ದು ಈ ವೇಳೆ ಭಾರತೀಯ ಸೇನೆಯು 50 ಕ್ಕೂ ಹೆಚ್ಚು ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಮೂಲಗಳು ದೃಢಪಡಿಸಿವೆ. ಪಾಕಿಸ್ತಾನವು ವಿವಿಧ ಸ್ಥಳಗಳಲ್ಲಿ ಭಾರತದ ಭೂಪ್ರದೇಶಕ್ಕೆ…

ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸ್ಪಂದನಶೀಲತೆ ಮುಖ್ಯ: ಎಂ ಬಿ ಪಾಟೀಲ

ಬೆಂಗಳೂರು,ಮೇ,08- ಹೂಡಿಕೆದಾರರ ನಿರೀಕ್ಷೆಗೆ ತಕ್ಕಂತೆ ಕ್ಷಿಪ್ರವಾಗಿ ಸ್ಪಂದಿಸುವ ಮೂಲಕ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹಾಗೂ ಕೆಐಎಡಿಬಿ ಅಧಿಕಾರಿಗಳು ಕರ್ನಾಟಕವನ್ನು ಕೈಗಾರಿಕಾ ಪ್ರಪಂಚದಲ್ಲಿ ಮತ್ತಷ್ಟು ಸುಭದ್ರವಾಗಿ ಮತ್ತು ಪುರೋಗಾಮಿಯಾಗಿ ಬೆಳೆಸಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸಲಹೆ ನೀಡಿದ್ದಾರೆ. ಎರಡೂ‌ ಇಲಾಖೆಗಳ ಕಿರಿಯ ಶ್ರೇಣಿ ಮತ್ತು ಉನ್ನತಾಧಿಕಾರಿಗಳಿಗೆ ವಿಕಾಸಸೌಧದಲ್ಲಿ ಗುರುವಾರ ಏರ್ಪಡಿಸಿದ್ದ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾವೀಗ ಏಕಕಾಲದಲ್ಲಿ ಜಾಗತೀಕರಣ ಮತ್ತು ನೆರೆಹೊರೆಯ ರಾಜ್ಯಗಳ ಸ್ಪರ್ಧೆ…

ಉಗ್ರರ ನೆಲೆಗಳ ಮೇಲೆ ದಾಳಿ ಹಿನ್ನೆಲೆ : ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ- ಸಿಎಂ

ಮಂಡ್ಯ, ಮೇ 8- ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮವದರೊಂದಿಗೆ ಮಾತನಾಡಿದರು. *ಎಲ್ಲೆಡೆ ಎಚ್ಚರಿಕೆ* ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.…

ಒಗ್ಗಟ್ಟು ಪ್ರದರ್ಶಿಸಲು ಪ್ರತಿಪಕ್ಷಗಳಿಗೆ ಮೋದಿ ಕರೆ

ನವದೆಹಲಿ, ಮೇ,08- ಆಪರೇಷನ್ ಸಿಂಧೂರ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ ಎಲ್ಲಾ ಪಕ್ಷಗಳು ಏಕತೆ ಹೊಂದಬೇಕು ಆ ಮೂಲಕ ನಮ್ಮ ಸೈನಿಕರಿಗೆ ನಾವು ತೋರಿಸುವ ಗೌರವ ಎಂದು ತಿಳಿಸಿದ್ದಾರೆ. ಕಾರ್ಯಾಚರಣೆಯ ಬಗ್ಗೆ ರಾಜಕೀಯ ನಾಯಕರಿಗೆ ವಿವರಿಸಲು ಕರೆಯಲಾದ ಸರ್ವಪಕ್ಷ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಈ ನಿರ್ಣಾಯಕ ಹಂತದಲ್ಲಿ “ಪ್ರತಿಯೊಬ್ಬ ಭಾರತೀಯರು ಒಗ್ಗಟ್ಟಾಗಿ ನಿಲ್ಲಬೇಕಾಗಿದೆ” ಎಂದು ಒತ್ತಿ ಹೇಳಿದರು. ಈ ಕ್ರಮವು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಮಾಪನಾಂಕಿತ, ಗುಪ್ತಚರ ಬೆಂಬಲಿತ ಪ್ರತಿಕ್ರಿಯೆಯಾಗಿದೆ ಎಂದು ಕೇಂದ್ರವು…

ಪ್ರಧಾನಿ ಮೋದಿ ಅವರನ್ನು ಭೇಟಿಯಾದ ಅಜಿತ್ ಧೋವಲ್

ನವದೆಹಲಿ, ಮೇ,08-ಆಪರೇಷನ್ ಸಿಂಧೂರ ಹೆಸರಿನಲ್ಲಿ ಪಾಕಿಸ್ತಾನದ ಒಂಬತ್ತು ಉಗ್ರನೆಲೆಗಳ ಮೇಲೆ ದಾಳಿ ನಂತರ ರಾಷ್ಟ್ರೀಯ ಭದ್ರತಾ ಸಲೆಗಾರ ಅಜಿತ್ ಧೋವಲ್ ತಂಡ ಇಂದು ಪ್ರಧಾನಿ ಮೋದಿ ಅವರನ್ನು ಬೇಟಿಯಾಗಿ ಚರ್ಚಿಸಿದರು. ಪಾಕಿಸ್ತಾನ ನಿನ್ನೆ ಶೆಲ್ ದಾಳಿ ನಡೆಸಿದ್ದು ಈ ದಾಳಿಯಲ್ಲಿ 15 ಕಾಶ್ಮೀರ ನಾಗರಿಕರು ಸಾವನ್ನಪ್ಪಿದ್ದು ಈ ಕುರಿತು ಮಾಹಿತಿ ನೀಡಿದರು. ಜಮ್ಮು ಕಾಶ್ಮೀರದ ಪರಿಸ್ಥಿತಿ ಜಮ್ಮುಕಾಶ್ಮೀರ ಗಡಿಯಲ್ಲಿ ಪಾಕ್ ಗುಂಡಿನ ದಾಳಿ 14ನೇ ದಿನವೂ ಪಾಕ್ ನಿಂದ ಕದನ ವಿರಾಮ ಉಲ್ಲಂಘನೆ ಕುರಿತು ಅಜಿತ್ ಧೋವೆಲ್…

ಉತ್ತರ ಕಾಶಿಯಲ್ಲಿ ಹೆಲಿಕಾಪ್ಟರ್ ಪತನ ಐವರು ಯಾತ್ರಿಕರು ಸಾವು

ಉತ್ತರ ಕಾಶಿ,ಮೇ,08- ಯಾತ್ರಿಕರನ್ನು ಕರೆದೊಯ್ಯುತ್ತುದ್ದ ಹೆಲಿಕಾಪ್ಟರ್ ಪತನಗೊಂಡು ಐವರು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಉತ್ತರಖಂಡದ ಉತ್ತರಕಾಶಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ಸುಮಾರು 7 ಜನ ಇದ್ದರು ಎನ್ನಲಾಗಿದೆ. ತೀರ್ಥಯಾತ್ರಿಕರನ್ನ ಕರೆದೊಯ್ಯುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಯಮುನೋತ್ರಿಯಿಂದ ಗಂಗೋತ್ರಿಗೆ ಪ್ರವಾಸಿಗರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್ ಡೆಹ್ರಾಡೂನ್‌ನಿಂದ ಹರ್ಸಿಲ್ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಪೊಲೀಸರು, ಸೇನಾ ಪಡೆ, ವಿಪತ್ತು ನಿರ್ವಹಣಾ ತಂಡ ಮತ್ತು ಆಂಬ್ಯುಲೆನ್ಸ್‌ ಗಳು ಉತ್ತರಕಾಶಿ ಬಳಿಯ ಘಟನಾ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ…

ಪಾಕಿಸ್ತಾನದ ಪ್ರತಿ ದಾಳಿಯಲ್ಲಿ 15 ಮಂದಿ ನಾಗರಿಕರು ಸಾವು,ಹಲವರಿಗೆ ಗಾಯ

ನವದೆಹಲಿ, ಮೇ, 08-ಆಪರೇಷನ್ ಸಿಂಧೂರ ಭರತೀಯ ಸೈನಿಕರ ದಾಳಿಯ ಬೆನ್ನಲ್ಲೇ ಜಮ್ಮು ಕಾಶ್ಮೀರ ದ ಗಡಿನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನದ ಸೈನಿಕರು ನಡೆಸಿದ ಗಿಂಡಿನ ಚಕಮುಕಿಯಲ್ಲಿ 15 ಮಾಗರೀಕರು ಸಾವನ್ನಪ್ಪಿದ್ದು 45 ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪಡೆಗಳು ಕದನ ವಿರಾಮ ಉಲ್ಲಂಘಿಸುತ್ತಿರುವ ಬಗ್ಗೆ ಭಾರತೀಯ ಸೇನೆಯು ಸಮಾನ ಪ್ರಮಾಣದಲ್ಲಿ ಶೆಲ್ ದಾಳಿಗೆ ಪ್ರತಿಕ್ರಿಯಿಸುತ್ತಿದೆ. ಪಾಕಿಸ್ತಾನದ ಅನಿಯಂತ್ರಿತ ಶೆಲ್ ದಾಳಿಯು…

ಒತ್ತುವರಿ ಜಾಗ ಪರಶೀಲನೆ ಮಾಡಿದ ತಹಶಿಲ್ದಾರ್

ವರದಿ :- ಆಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ,ಮೇ,07-  ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿರುವ ಖಾಸಗಿ ಲೇಔಟ್ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಕ್ಕೆ ತಾಲ್ಲೂಕು ದಂಢಾಧಿಕಾರಿ ರೆಹಾನ್ ಪಾಷ ಹಾಗೂ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಕೀಮ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಅರಬಾವಿ-ಚಳ್ಳಕೆರೆ ರಾಜ್ಯ ಹೆದ್ದಾರಿ ೪೫ರ ರಸ್ತೆಯ ಮದ್ಯದಿಂದ ೨೮.೫೦ ಮೀಟರ್‌ಗಳಷ್ಟು ಜಾಗವನ್ನು ಬಿಟ್ಟು ಖಾಸಗಿ ಲೇಔಟ್ ನಿರ್ಮಾಣ ಮಾಡಬೇಕು ಎಂಬ ನಿಯಮವಿದ್ದರೂ ಕೂಡ ಕಾನೂನು ಬಾಹಿರವಾಗಿ ಖಾಸಗಿ ಲೇಔಟ್ ನವರು ೧೪ ಮೀಟರ್‌ಗಳಷ್ಟು ಒತ್ತುವರಿ ಮಾಡಿದ್ದಾರೆ…

ಕಾರ್ಮಿಕರ ಸಮಸ್ಯೆಗಳನ್ನು ಕಾರ್ಖಾನೆಯ ಮಟ್ಟದಲ್ಲೇ ಪರಿಹರಿಸಿ- ಸಂತೋಷ್ ಲಾಡ್

ಬೆಂಗಳೂರು, ಮೇ 7- ಕಲಬುರಗಿ ಜಿಲ್ಲೆಯ ಮುಳಖೇಡದಲ್ಲಿರುವ ರಾಜಶ್ರೀ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ನೌಕರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ವಿಕಾಸಸೌಧದಲ್ಲಿ ಇಂದು ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಚಿವರು, ಕಾರ್ಖಾನೆಯ ನೌಕರರ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು. ಬೆಂಗಳೂರಿನವರೆಗೂ ಸಮಸ್ಯೆಗಳನ್ನು ತರಬಾರದು. ಒಂದೇ ಕಡೆ ಕೆಲಸ ಮಾಡುವವರು ಒಂದು ಕುಟುಂಬದಂತೆ ಇರಬೇಕು ಎಂದು ಸಲಹೆ ನೀಡಿದರು. ಮ್ಯಾನೇಜ್‌ಮೆಂಟ್‌ ಕಾರ್ಮಿಕರ ಸಮಸ್ಯೆಗಳ ಬಗ್ಗೆ ತಿಳಿಯದೇ ಇದ್ದರೆ ಕೇಳದೇ ಇದ್ದರೆ ಅವುಗಳು ಹೆಚ್ಚಾಗುತ್ತವೆ. ಸಮಸ್ಯೆಗಳನ್ನು…

ಶಾಂತಿ ಮಂತ್ರ ಜಪಿಸುತ್ತಿರುವ  ಕಾಂಗ್ರೆಸ್, ಇದು ದೇಶಕ್ಕೆ ಮಾಡಿದ ಅಪಮಾನ:  ಆರ್.ಅಶೋಕ ಟೀಕೆ

ಬೆಂಗಳೂರು, ಮೇ 7-ಶಾಂತಿ ಮಂತ್ರ ಜಪಿಸುವ ಕಾಂಗ್ರೆಸ್‌ ಪಕ್ಷ ಯಾರ ಪರ ಇದೆ? ಯುದ್ಧದ ಸಮಯದಲ್ಲಿ ಶಾಂತಿಯ ಮಂತ್ರ ಹೇಳುವ ಕರ್ನಾಟಕ ಕಾಂಗ್ರೆಸ್‌ ಸಂಪೂರ್ಣ ದಾರಿ ತಪ್ಪಿ ಹೋಗಿದೆ. ಇದು ದೇಶಕ್ಕೆ ಮಾಡಿದ ಅಪಮಾನ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂಗಳನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಯೋಧರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಪಾಕಿಸ್ತಾನದ ನೆಲದಲ್ಲೂ ದಾಳಿ ಮಾಡಬಹುದು ಎಂಬುದನ್ನು ಭಾರತ…

ಆಪರೇಷನ್ ಸಿಂಧೂರ್’ ನಮ್ಮ ಸೇನೆ ನಮ್ಮ ಹೆಮ್ಮ- ಜಮೀರ್ ಅಹಮದ್ ಖಾನ್

ಬೆಂಗಳೂರು,ಮೇ,7- ಪೆಹಲ್ಗಮ್ ದಾಳಿಯಲ್ಲಿ ಅಮಾಯಕರ ಜೀವ ಪಡೆದ ಪಾಕಿಸ್ತಾನ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್ ‘ ನಡೆಸಿ ತನ್ನ ಶಕ್ತಿ ಹಾಗೂ ಪರಾಕ್ರಮ ತೋರಿಸಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಭಾರತೀಯ ಸೇನೆಯ ಕಾರ್ಯ ಶ್ಲಾಘನೀಯ. ಉಗ್ರರಿಗೆ ಆಶ್ರಯ ನೀಡುವ ಪಾಕಿಸ್ತಾನ ಕ್ಕೆ ತಕ್ಕ ಪಾಠ. ನಮ್ಮ ತಂಟೆಗೆ ಬಂದರೆ ಉಗ್ರರಿಗೆ ಹಾಗೂ ಪಾಕಿಸ್ತಾನ ಕ್ಕೆ ಉಳಿಗಾಲ…

ಉಗ್ರಗಾಮಿಗಳ ನೆಲೆ ನಾಶಮಾಡಿದ ಭಾರತೀಯ ಸೈನಿಕರ ದಿಟ್ಟತನ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ,7-ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,- ಸೇನೆ ನಡೆಸಿರುವ ಈ ದಾಳಿ ಭಾರತದ ಮೇಲೆ ಸತತವಾಗಿ ದಾಳಿ ನಡೆಸಿ ಹತ್ಯಾಕಾಂಡ ನಡೆಸುತ್ತಿದ್ದ ಉಗ್ರಗಾಮಿಗಳಿಗೆ ಕಲಿಸಿದ ಪಾಠ ಮಾತ್ರವಲ್ಲ ಈ ಉಗ್ರರಿಗೆ ಆಶ್ರಯ ಮತ್ತು ನೆರವು ನೀಡಿ ಭಾರತದ ವಿರುದ್ದ ಅವರನ್ನು ಛೂಬಿಡುತ್ತಿದ್ದ ಪಾಕಿಸ್ಥಾನಕ್ಕೂ ನೀಡಿರುವ ಎಚ್ಚರಿಕೆ ಆಗಿದೆ…

ಹಿರಿಯ ಸಾಹಿತಿ ಪ್ರೊ.ಜಿ.ಎಸ್.ಸಿದ್ದಲಿಂಗಯ್ಯ ನಿಧನ

ಬೆಂಗಳೂರು, ಮೇ,7-ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಜಿ.ಎಸ್.ಸಿದ್ದಲಿಂಗಯ್ಯ(94) ಅವರು ಇಂದು ನಿಧನರಾದರು. ವಿಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳದರು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರೊಳೊಗೊಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಕನ್ನಡ ಸಾರಸ್ವತ ಲೋಕ ಕಂಬನಿ ಮಿಡಿದಿದೆ. .ಎಸ್.ಸಿದ್ದಲಿಂಗಯ್ಯನವರು ಹುಟ್ಟಿದ್ದು ಫೆಬ್ರವರಿ…

ಪಾಕಿಸ್ತಾನದ ಒಂಬತ್ತು ಉಗ್ರ ನೆಲೆ ಮೇಲೆ ಭಾರತ ಸೇನೆ ದಾಳಿ

ನವದೆಹಲಿ,ಮೇ,7- ಪಾಕಿಸ್ತಾನಿ ಉಗ್ರರ ಮಟ್ಟ ಹಾಕಲು ಭಾರತ ಆಪರೇಷನ್ ಸಿಂಧೂರ ಹೆಸರಲ್ಲಿ ಆರಂಭಿಸಿರುವ ದಾಳಿಯಲ್ಲಿಪಾ ಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಇಂದು ಬೆಳಗಿನ ಜಾವ ದಾಲಕಿ ನಡೆಸಿದೆ. ಕಕ್ಷಣಾ ಸಚಿವಾಲಯ ಹೊರಡಿಸಿರುವ ಪ್ರಕಟಣೆಯಲ್ಲಿ ಸ್ವಲ್ಪ ಸಮಯದ ಹಿಂದೆ, ಭಾರತೀಯ ಸಶಸ್ತ್ರ ಪಡೆಗಳು ‘ಆಪರೇಷನ್ ಸಿಂಧೂರ್’ ಪ್ರಾರಂಭಿಸಿದವು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಲಾಯಿತು ಎಂದು ತಿಳಿಸಿದೆ. ಒಟ್ಟು ಒಂಬತ್ತು ತಾಣಗಳ…

ಅಕ್ರಮ ಗಣಿಗಾರಿಕೆ ಪ್ರಕರಣ; ಜನಾರ್ದನರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ

ನವದೆಹಲಿ, ಮೇ8-ಅಕ್ರಮ ಗಣಿಗಾರಿಕೆ ಪ್ರಕರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಬಿಎಸ್ ಯಡಿಯೂರಪ್ಪ ಆಡಳಿತದಲ್ಲಿ ಈ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ಓಬಳಾಪುರಂ ಮೈನಿಂಗ್ ಕಂಪನಿ ಮುಖ್ಯಸ್ಥರಾಗಿದ್ದರು. ಶ್ರೀನಿವಾಸರೆಡ್ಡಿ ಓಎಂಸಿ ಕಂಪನಿಯ ಎಂಡಿಯಾಗಿದ್ದರು. ಈ ಕಂಪನಿಗೆ ಗಣಿಗಾರಿ ಮಂಜೂರಾತಿ ನೀಡುವಲ್ಲಿ ಅಕ್ರಮ ನಡೆದಿತ್ತು. ಅರಣ್ಯ ಇಲಾಖೆ ಗಣಿ ಇಲಾಖೆಯಿಂದಲೂ ಅಕ್ರಮ ನಡೆದಿತ್ತು. ಈ ಪ್ರಕರಣ ಸಂಬಂಧ…

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಗೆ 64,600 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿಕೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ,ಮೇ,05- ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗಾರಪ್ಪ ಅವರು, ಮೇ 5, 2025ರ ತನಕ ಕನಿಷ್ಠ 64,600 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಮೇ 26 ರಿಂದ ಜೂನ್ 2ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಗೆ ಅರ್ಜಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಪರೀಕ್ಷೆ-2 ಗೆ ಉತ್ತಮವಾಗಿ ಪ್ರತಿಕ್ರಿಯೆ ನೀಡುತ್ತಿರುವುದರಿಂದ ಸಂತೋಷ ವ್ಯಕ್ತಪಡಿಸಿದರು. “ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಗೆ ನೋಂದಣಿ ಇನ್ನೂ ಮುಂದುವರಿದಿರುವುದರಿಂದ ಈ…

1 19 20 21 22 23 126
Girl in a jacket