ಬೀದರ್ ಜನಿವಾರ ಪ್ರಕರಣ: ಸುಚಿವ್ರತ್ ಗೆ ಬಿಕೆಐಟಿಯಲ್ಲಿ ಉಚಿತ ಸೀಟ್ : ಈಶ್ವರ ಖಂಡ್ರೆ
ಬೀದರ್, ಏ.20-ಜನಿವಾರ ತೆಗೆಯದ ಕಾರಣಕ್ಕೆ ಕೆಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್ ಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಭರವಸೆ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ರಹೀಂಖಾನ್ ಅವರ ಜೊತೆಯಲ್ಲಿ ಸುಚಿವ್ರತ್ ಕುಲಕರ್ಣಿ ಮನೆಗೆ ಭೇಟಿ ನೀಡಿ ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದ ಈಶ್ವರ ಖಂಡ್ರೆ, ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ…


















