ಬಿಜೆಪಿ ಸರ್ಕಾರದ ಡಬಲ್ ಇಂಜಿನ್ ನಿಂತುಹೋಗಿದೆ; ಡಿ.ಕೆ.ಶಿ
ಬೆಂಗಳೂರು,ಮೇ,೧೩:’ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ’ಚಾಮರಾಜನಗರದಲ್ಲಿ ೨೪ ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ಸಮಿತಿ ಈಗಾಗಲೇ…