ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಎರಡು ಪ್ರಶಸ್ತಿ ಘೋಷಿಸಿದ ಸಿಎಂ
ಬೆಂಗಳೂರು, ಮಾ, 14: ಜನ್ಮಶತಮಾನೋತ್ಸವವನ್ನು ಇಡೀ ವರ್ಷ ಆಚರಣೆ ಮಾಡುವ ತೀರ್ಮಾನ ಸರ್ಕಾರ ಮಾಡಿದೆ. ಹಾಗೂ ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಶಾಸಕ ಪ್ರಶಸ್ತಿಗಳನ್ನು ಪ್ರತಿ ವರ್ಷ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಪ್ರತಿಷ್ಠಾನ ಹಾಗೂ ಜನ್ಮ ಶತಮಾನೋತ್ಸವ ಆಚಾರಣೆ ಸಮಿತಿ ಆಯೋಜಿಸಿದ್ದ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಗೋಪಾಲಗೌಡರ ಕುರಿತ ಕೃತಿಗಳನ್ನು ಮುದ್ರಿಸಿ, ನಾಡಿನಾದ್ಯಂತ ಎಲ್ಲಾ ಗ್ರಂಥಾಲಯಗಳಿಗೆ…