Girl in a jacket

Author kendhooli_editor

ಹುಚ್ಚವ್ವನಹಳ್ಳಿ ಸರ್ಕಾರಿ ಶಾಲೆಗೆ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ

*ವರದಿ :-ಆಂಜನೇಯ ನಾಯಕನಹಟ್ಟಿ ಜಗಳೂರು,ಆ,-ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಹುಚ್ಚವನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದ್ದು‌‌ ಶೀಘ್ರ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿಮಕ್ಕಳು ಶಾಲೆಯ ಮುಂಭಾಗದಲ್ಲಿ ಎಸ್ ಡಿ ಎಂ ಸಿ ಸಹಯೋಗದೊಂದಿಗೆ ಪ್ರತಿಭಟನೆ ನಡೆಸಿದರು. ಹುಚ್ಚನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2013 ರಿಂದಲೂ ಮೂರು ಶಿಕ್ಷಕರು ಮಾತ್ರ ಇದ್ದು. ಸದರಿ ದಿನಾಂಕದ ಶಾಲಾ ಹಾಜರಾತಿಯ ಪ್ರಕಾರ 65 ಮಕ್ಕಳಿದ್ದು ಒಂದರಿಂದ ಎಂಟನೇ ತರಗತಿವರೆಗೆ ತರಗತಿಗಳು ಇರುತ್ತವೆ ಈ ತರಗತಿಗಳಲ್ಲಿ ಕೇವಲ ಮೂರು…

ಅಮೇಜಾನ್ ಓಟಿಟಿಯಲ್ಲಿ ಈ ವಾರ ‘ತಿಮ್ಮನ ಮೊಟ್ಟೆಗಳು’ ಚಿತ್ರ

ಕಳೆದ ಜೂನ್ 27 ಕ್ಕೆ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿ ನೋಡುಗರಿಂದ ಒಳ್ಳೆಯ ಅಭಿಪ್ರಾಯ ಪಡೆದಿದ್ದ “ತಿಮ್ಮನ ಮೊಟ್ಟೆಗಳು” ಚಿತ್ರ “ಅಮೇಜಾನ್ ಪ್ರೈಮ್ ವಿಡಿಯೋ”ott ಯಲ್ಲಿ ಈ ವಾರ ಬಿಡುಗಡೆಯಾಗಿ ಜನಮನ್ನಣೆ ಪಡೆಯುತ್ತಿದೆ. ರಕ್ಷಿತ್ ತೀರ್ಥಹಳ್ಳಿ ನಿರ್ದೇಶನ ಮತ್ತು ಆದರ್ಶ್ ಅಯ್ಯಂಗಾರ್ ನಿರ್ಮಾಣ ಚಿತ್ರಕ್ಕಿದ್ದು ಕಾಳಿಂಗ ಹಾವು ಮತ್ತು ಮನುಷ್ಯನ ಸಂಭಂದವನ್ನು ಪ್ರಕೃತಿ ಜೊತೆಗೆ ಚಿತ್ರಿಸಲಾಗಿದೆ.

ಸಾರಂಗಿ ಚಿತ್ರದಲ್ಲಿ ಎರಡೇ ಪಾತ್ರಗಳು

ಹೊಸತಂಡದ ಹೊಸಪ್ರಯತ್ನಗಳು ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುತ್ತದೆ. ಅಂತಹ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ “ಸಾರಂಗಿ”. ಈ ಚಿತ್ರದಲ್ಲಿ ಕೇವಲ ಎರಡೇ ಪಾತ್ರಗಳಿರುವುದು ವಿಶೇಷ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು. ಮನುಷ್ಯ ದಿನ ಬೆಳಗ್ಗಾದರೆ ಎಲ್ಲರ ಮುಂದೆ ಒಂದೊಂದು ತರಹದ ಮುಖವಾಡ ಧರಿಸಿ ಜೀವನ ನಡೆಸುತ್ತಿರುತ್ತಾನೆ. ಆದರೆ, ಒಂದು ಅನಿರೀಕ್ಷಿತ ಸನ್ನಿವೇಶ ಎದುರಾದಾಗ ನಾವು ನಮ್ಮ ಮೌಲ್ಯಗಳನ್ನು ಉಳಸಿಕೊಳ್ಳುತ್ತೇವಾ? ಅದರಿಂದ ಹೇಗೆ ಪಾರಾಗುತ್ತೇವೆ ಎಂಬುದೆ ಚಿತ್ರದ ಕಥಾಸಾರಾಂಶ. ಜೆ.ಆಚಾರ್ ಈ ಚಿತ್ರದ ನಿರ್ದೇಶಕರು.…

ಆ.11ರಂದು ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಉದ್ಘಾಟನೆ

ಶಿವಮೊಗ್ಗ,ಆ,11-ನೂತನವಾಗಿ ನಿರ್ಮಿಸಿರುವ ಗೋoಧಿ ಚಟ್ನಹಳ್ಳಿ ನಲ್ಲಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದೇವಸ್ಥಾನ ಪ್ರವೇಶ ಹಾಗೂ ವಿಗ್ರಹ ಪ್ರತಿಷ್ಠಾಪನೆ ಕಳಸರೋಹಣ ಅಷ್ಟ ಬಂಧನ ಮಹಾ ಕುಂಭ ಅಭಿಷೇಕ ಮಹೋತ್ಸವ ಆಗಸ್ಟ್ 13 ರಂದು ನೆರವೇರಲಿದೆ. ಅಂದು ಬೆಳಗ್ಗೆ ಪೂಜೆ ಆರಂಭಗೊಂಡು ದಿ. 14 ಗುರುವಾರ ಬೆಳಿಗ್ಗೆ 9:00 ರಿಂದ 10.30 ರವರೆಗೆ ನಡೆಯುವ ನೂತನ ದೇವಸ್ಥಾನ ಪ್ರವೇಶ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ವಿಗ್ರಹ ಪ್ರತಿಷ್ಠಾಪನೆ ಅಷ್ಟ ಬಂಧನ ಮತ್ತು ಮಾಹಾ ಕುಂಭಾಭಿಷೇಕ ಕಾರ್ಯಕ್ರಮವು ಬಹು ವಿಜೃಂಭಣೆಯಿಂದ ನಡೆಯಲಿದೆ.  ಅಭಿಷೇಕವನ್ನು…

ಕಾಟಾಚಾರಕ್ಕೆ ಅಧಿವೇಶನ: ಬಿ.ವೈ.ವಿಜಯೇಂದ್ರ

ಬೆಂಗಳೂರು,ಆ,10-ನಾಳೆಯಿಂದ ಆರಂಭವಾಗುವ ಅಧಿವೇಶನದಲ್ಲಿ ಈ ಸರಕಾರಕ್ಕೆ ಚಾಟಿ ಬೀಸುವ ನಿಟ್ಟಿನಲ್ಲಿ ಯಾವ್ಯಾವ ವಿಚಾರಗಳನ್ನು ಸದನದಲ್ಲಿ ಚರ್ಚಿಸಬೇಕು ಎಂಬ ವಿಷಯವನ್ನು ಚರ್ಚಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಬಿಜೆಪಿ- ಜೆಡಿಎಸ್ ಸಮನ್ವಯ ಸಮಿತಿ ಸಭೆಯ ಬಳಿಕ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸದನ 15- 20 ದಿನ ನಡೆಯಬೇಕಿತ್ತು. 8-9 ದಿನಗಳಿಗೆ ಸೀಮಿತ ಮಾಡಿದ್ದಾರೆ. ಸರಕಾರವು ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದೆ ಎಂದು ಟೀಕಿಸಿದರು. ರೈತರ ಸಮಸ್ಯೆಯನ್ನು ವಿಶೇಷವಾಗಿ ತೆಗೆದುಕೊಳ್ಳುತ್ತೇವೆ. ಸಿದ್ದರಾಮಯ್ಯನವರ…

ಮೆಟ್ರೋ ಯೋಜನೆಗೆ ಕೇಂದ್ರಕ್ಕಿಂತ ರಾಜ್ಯ ಸರ್ಕಾರ ಹೆಚ್ಚು ಹಣ ನೀಡುತ್ತಿದೆ- ಸಿದ್ಧರಾಮಯ್ಯ

ಬೆಂಗಳೂರು ಆ10-ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದ್ದು ಕೇಂದ್ರ ಸರ್ಕಾರದ ಪಾಲು ಕೇವಲ ಶೇ12.63 ರಷ್ಟಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಮೆಟ್ರೋ ಯೋಜನೆಯ 2ನೇ ಹಂತದ ಹಳದಿ ಮಾರ್ಗದ ಉದ್ಘಾಟನೆ ಹಾಗೂ ಜೆ.ಪಿ.ನಗರ 4ನೇ ಹಂತದ ಶಂಕುಸ್ಥಾಪನೆ ನೆರವೇರಿಸಿ ಹಾಗೂ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು.ಕೇಂದ್ರ ಸರ್ಕಾರದ ಸಹಭಾಗಿತ್ವವೂ ಸಹ ಬೆಂಗಳೂರು ಮೆಟ್ರೋ ಯೋಜನೆಯ ಅನುಷ್ಠಾನಕ್ಕೆ ಕಾರಣವಾಗಿದೆ. ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ಹಣಕಾಸು…

15,611 ಕೋಟಿ ವೆಚ್ಚದ ಮೆಟ್ರೋ ಹಂತ-3 ರ ಕಾಮಗಾರಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಬೆಂಗಳೂರು,ಆ,10-ಬೆಂಗಳೂರಿನ ಜನರ ಕೌಶಲ್ಯ ಶ್ಲಾಘನೀಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ.ಇಂದು 15,611 ಕೋಟಿ ರೂ ವೆಚ್ಚದ ಬೆಂಗಳೂರು ಮೆಟ್ರೋ ಹಂತ-3 ರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಬೆಂಗಳೂರು ಯೆಲ್ಲೋ ಲೈನಿನ ಉದ್ಘಾಟನೆ ಮಾಡಲಾಗಿದೆ. ಇಂದು 3 ಹೊಸ ವಂದೇ ಭಾರತ್ ರೈಲು ಸೇವೆಯನ್ನೂ ಆರಂಭಿಸಿದ್ದೇವೆ ಎಂದು ತಿಳಿಸಿದರು. ಆಪರೇಷನ್ ಸಿಂದೂರದ ಬಳಿಕ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ. ಈ ಕಾರ್ಯಾಚರಣೆಯಲ್ಲಿ ಸೇನೆಯ ಸಫಲತೆ ಶ್ಲಾಘನೀಯ ಎಂದು ತಿಳಿಸಿದರು. ಉಗ್ರರ ವಿರುದ್ಧ ಕೈಗೊಂಡ…

ಕರ್ನಾಟಕ,ಮಹಾರಾಷ್ಟ್ರದಲ್ಲಿ ಮತಗಳ್ಳತನ ಸಂಬಂಧ ದಾಖಲೆ ಬಿಡುಗಡೆಮಾಡಿದ ರಾಹುಲ್ ಗಾಂಧಿ

ನವದೆಹಲಿ, ಆ,08-ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ 2004 ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿದ್ದ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಗುರುವಾರ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ ಇಂದು ದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ದಾಖಲೆಗಳನ್ನು ಬಹಿರಂಗಪಡಿಸಿದ ರಾಹುಲ್ ಗಾಂಧಿ ಭಾರತೀಯ ಚುನಾವಣಾ ಆಯೋಗವು ಆಡಳಿತಾರೂಢ ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದರು. ಕರ್ನಾಟಕದ ಬೆಂಗಳೂರಿನ ಮಹದೇವಪುರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿರುವ ಬಗ್ಗೆ ದಾಖಲೆಗಳನ್ನು ಬಹಿರಂಗಪಡಿಸಿದ್ದಾರೆ.…

ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ; ಯೂಟ್ಯೂಪರ್, ಚಾನೆಲ್ ವರದಿಗಾರನ ಮೇಲೆ ಹಲ್ಲೆ

ಧರ್ಮಸ್ಥಳ, ಆ,07-ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ನೇಮಿಸಿರುವ ಎಸ್ ಐಟಿ ತನಿಖೆ ನಡೆಸುತ್ತಿರುವ ವೇಳೆಯ ಇಲ್ಲಿನ ದೇವಸ್ಥಾನದ ಮುಂದೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಪೊಲೀಸರು ಚದುರಿಸಲು ಲಾಠಿಚಾರ್ಜ್ ಮಾಡಿದ ಘಟನೆ ಜರುಗಿದೆ ನಂತರ ಒಂದು ಗುಂಪು, ‘ಕ್ಷೇತ್ರಕ್ಕೆ ಕಳಂಕ ತರುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಧರ್ಮಸ್ಥಳ ಪೊಲೀಸ್‌ ಠಾಣೆಯ ಎದುರು ರಾತ್ರಿ ಧರಣಿ ನಡೆಸಿತು. ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆಯೇ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್‌ ಹಾಗೂ…

ಹುಬ್ಬಳ್ಳಿ ಇನ್ಫೋಸಿಸ್‌ ಇನ್ನೂ ಹತ್ತು ಪಟ್ಟು ಬೆಳೆಯಲಿ: ಎಂ ಬಿ ಪಾಟೀಲ ಆಶಯ

ಹುಬ್ಬಳ್ಳಿ,ಆ,06-ಕರ್ನಾಟಕ ಮೂಲದ ಇನ್ಫೋಸಿಸ್ ಸಂಸ್ಥೆಯ ಸ್ಥಳೀಯ ಘಟಕವು ಈಗಿನ ಪ್ರಮಾಣಕ್ಕಿಂತ ಇನ್ನೂ ಹತ್ತು ಪಟ್ಟು ಬೆಳೆಯಬೇಕು. ಈ ಮೂಲಕ ಕಂಪನಿಯ ಹುಬ್ಬಳ್ಳಿ ಕೇಂದ್ರವೇ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತಹ ಪ್ರಧಾನ ತಾಣವಾಗಿ ಅಭಿವೃದ್ಧಿ ಹೊಂದಬೇಕು. ಜತೆಗೆ ಕಂಪನಿಯು ಉತ್ತರ ಕರ್ನಾಟಕ ಭಾಗದ ಇತರ ಜಿಲ್ಲೆಗಳಲ್ಲೂ ನೆಲೆಯೂರಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆಶಿಸಿದ್ದಾರೆ. ಅವರು ಬುಧವಾರ ಇಲ್ಲಿನ ಇನ್ಫೋಸಿಸ್‌ ಹುಬ್ಬಳ್ಳಿ ಡೆವಲಪ್‌ಮೆಂಟ್‌ ಸೆಂಟರ್‌ನಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗವನ್ನು ಉದ್ದೇಶಿಸಿ ಮಾತನಾಡಿದರು.…

ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.06-“ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಆವರಣದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಆಗಸ್ಟ್ 8ರಂದು ನಡೆಯಲಿರುವ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಮ್ಮ ಮೈತ್ರಿ ನಾಯಕ ಶಿಬು ಸೊರೇನ್ ಅವರ ನಿಧನವಾದ ಕಾರಣಕ್ಕೆ ಆಗಸ್ಟ್ 5ರಂದು ನಡೆಸಬೇಕಾಗಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು. ಲೋಕಸಭೆ…

ವೈದ್ಯರು ಸಹನೆಯಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಆ, 8-ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೊಪ್ಪಳ ಕಾರ್ಯಕ್ರಮ ಇಂದು ಮಳೆ ಕಾರಣದಿಂದ ತೆರಳಲಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಇಂದು ಅನಿರೀಕ್ಷಿತ ಭೇಟಿ ನೀಡಲಾಗಿದೆ ಎಂದರು. ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ…

ನಾಯಕನಹಟ್ಟಿ; ಸ್ಥಳೀಯ ವ್ಯಾಪಾರಸ್ಥರಿಗೆ ಆದ್ಯತೆ ನೀಡಲು ಒತ್ತಾಯ

ವರದಿ :- ಅಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ ,ಆ,05-ಹೊರರಾಜ್ಯದ ವ್ಯಾಪಾರಸ್ಥರ ಬದಲಾಗಿ ಸ್ಥಳೀಯ ವ್ಯಾಪಾರಸ್ಥರಿಗೆ ಮೊದಲ ಆದ್ಯತೆ ನೀಡುವಂತೆ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್ಅವರಿಗೆ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು. ಪಟ್ಟಣದ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್ (ಶೆಟ್ಟಿಬಣ), ಕರ್ನಾಟಕ ರಕ್ಷಣ ವೇದಿಕೆ ಕನ್ನಡ ಸೇನೆ ಹಾಗೂ ಕರುನಾಡ ನವ ನಿರ್ಮಾಣ ವೇದಿಕೆ ನಾಯಕನಹಟ್ಟಿ ವರ್ತಕರ ಸಂಘದಿಂದ ಮಂಗಳವಾರ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್‌ರವರಿಗೆ ಮನವಿ ಸಲ್ಲಿಸಿದರು. ನಾಯಕನಹಟ್ಟಿ ಪಟ್ಟಣದಲ್ಲಿ ವಿವಿಧ…

ನವರಂಗಿ ಆಟ ಆಡಬೇಡಿ ಅಶೋಕ್ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು, ಆ,05-ಅಧಿಕಾರ ಇದ್ದಾಗ ನವರಂಗಿ ಆಟ,ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..!ಅಧಿಕಾರ ಇದ್ದಾಗ ಹಗಲುವೇಷ,ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..!ಸನ್ಮಾನ್ಯ ಆರ್ ಅಶೋಕ್ ಅವರೇ,ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ‌ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ…

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ; ಬಸ್ ಸಂಚಾರ ಆರಂಭ

ಬೆಂಗಳೂರು, ಆ-ಹೈಕೋರ್ಟ್ ಸೂಚನೆಯ ಮೇರೆಗೆ ಸಾರಿಗೆ ನೌಕರರು ಆರಂಭಿಸಿದ್ದ ಮುಷ್ಕರವನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದಿದಂದಲೇ ಬಸ್ ಸಂಚಾರ ಆರಂಭವಾಗಿದೆ.ಕರ್ನಾಟಕ ಹೈಕೋರ್ಟ್ ಸೂಚನೆಯ ಮೇರೆಗೆ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿಕೆ ಮಾಡುತ್ತಿರುವುದಾಗಿ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯ ಅಧ್ಯಕ್ಷ ಅನಂತ ಸುಬ್ಬಾರಾವ್ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯಾಧ್ಯಂತ ಈ ಕ್ಷಣದಿಂದಲೇ ಹೈಕೋರ್ಟ್ ಸೂಚನೆಯ ಮೇರೆಗೆ ನಾವು ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿಕೆ ಮಾಡುವುದಾಗಿ ಘೋಷಿಸಿದರು. ಜನರಿಗೆ ನಿಮ್ಮ ಮುಷ್ಕರದಿಂದ ಸಮಸ್ಯೆ ಆಗಬಾರದು. ಮುಷ್ಕರ ನಿಂತಿರುವ…

ಆ.10ರಂದು ಪ್ರಧಾನಿಗಳಿಂದ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು, ಆ.05-“ಮೆಟ್ರೋ ಯೋಜನೆ ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ. ಇದರಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆ ಇದೆ. ಇದರಲ್ಲಿ ಜನರ ಸೇವೆ ಮುಖ್ಯವೇ ಹೊರತು, ಕ್ರೆಡಿಟ್ ರಾಜಕಾರಣವಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು, ಮೆಟ್ರೋ ‌ಹಳದಿ ಮಾರ್ಗದಲ್ಲಿ ಮಂಗಳವಾರ ಸಂಚರಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಉದ್ಘಾಟನಾ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ನಿಗದಿ…

ಬೆಂಗಳೂರು ನಗರ ವಿಶ್ವವಿದ್ಯಾನಿಲಯ; *ಕಣ್ಮನ ಸೂರೆಗೊಂಡ ವಿನ್ಯಾಸ ವೈಭವ-2 ಫ್ಯಾಷನ್ ಶೋ

ಬೆಂಗಳೂರು,ಆ,-04-  ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಫ್ಯಾಷನ್ ಮತ್ತು ಉಡುಪು ವಿನ್ಯಾಸ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ “ವಿನ್ಯಾಸ ವೈಭವ-2” ಫ್ಯಾಷನ್ ಶೋ ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡು ಅಪಾರ ಮೆಚ್ಚುಗೆಗೆ ಪಾತ್ರವಾಯಿತು. ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಒಟ್ಟು 12 ತಂಡಗಳ 64 ವಿದ್ಯಾರ್ಥಿಗಳು ವಿವಿಧ ಪರಿಕಲ್ಪನೆಗಳನ್ನು ಆಧರಿಸಿದ ವರ್ಣರಂಜಿತ ಉಡುಪು ವಿನ್ಯಾಸ ಪ್ರದರ್ಶಿಸುತ್ತಾ ಆಕರ್ಷಕ ಹಾವಭಾವಗಳ ಬಿಂಕದ ನಡಿಗೆಯ ಮೂಲಕ ಸಭಿಕರನ್ನು ಬೆರಗುಗೊಳಿಸಿದರು. ಝಗಮಗಿಸುವ ಬೆಳಕಿನ ಚಿತ್ತಾರಗಳ ಹಿನ್ನೆಲೆಯ ವೇದಿಕೆಯ ಮೇಲೆ ಸಾಂಪ್ರದಾಯಿಕ…

KRS ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ: ಆರ್.ಅಶೋಕ್

ಮಂಡ್ಯ, ಆ, 4-ಕೆ ಆರ್ ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, ಕೆಆರ್‌ಎಸ್ ಜಲಾಶಯದ ನಿರ್ಮಾಣ 1911ರಲ್ಲಿ ಆರಂಭವಾಯಿತು. ಬರೋಬ್ಬರಿ 112 ವರ್ಷಗಳ ನಂತರ ಡ್ಯಾಂ ಕಟ್ಟಲಾಗಿದ್ದು, ಟಿಪ್ಪು ಶಂಕುಸ್ಥಾಪನೆ ಮಾಡಿದ್ದರೆ ಆಗಲೇ ಈ ಹೆಸರು ಇಡಬೇಕಿತ್ತಲ್ವ? ಎಂದು ಪ್ರಶ್ನಿಸಿದರು. ಕೃಷ್ಣರಾಜ ಸಾಗರ ಡ್ಯಾಂಗೆ ಟಿಪ್ಪು ಹೆಸರು ತಳಕು…

ಪೂಜೆಯ ಬಳಿಕ ಕಾಡಿನತ್ತ ಮೊದಲ ತಂಡದ ಗಜಪಯಣ • ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ

ವೀರನಹೊಸಹಳ್ಳಿ, (ಹುಣಸೂರು) ಆ.4- ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಕೃತಿ ಪರಿಸರದ ಸಮತೋಲನಕ್ಕೆ ವನ್ಯಜೀವಿಗಳು ಅತ್ಯವಶ್ಯಕವಾಗಿದ್ದು,…

ಬೆಂಗಳೂರು ವಿ.ವಿ.ಯಲ್ಲಿ ಆತ್ಮೀಯ ಬಿಳ್ಕೊಡಿಗೆ ಸಮಾರಂಭ

ಬೆಂಗಳೂರು ,ಆ,02- ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎಸ್.ಹರಿಪ್ರಸಾದ್ ಹಾಗೂ ಆಡಳಿತ ವಿಭಾಗದ ಅಧೀಕ್ಷಕರಾದ ಟಿ.ಪದ್ಮಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಿ ಅಭಿನಂದಿಸಲಾಯಿತು. ಸೆಂಟ್ರಲ್ ಕಾಲೇಜಿನ ಸರ್ ಸಿ.ವಿ.ರಾಮನ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಪ್ರಭಾರ ಕುಲಪತಿಗಳಾದ ಪ್ರೊ. ಕೆ.ಆರ್.ಜಲಜಾ, ನೂತನ ಕುಲಸಚಿವರಾದ ನವೀನ್ ಜೋಸೆಫ್, ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್ ಹಾಗೂ ವಿತ್ತಾಧಿಕಾರಿಗಳಾದ ಎಂ.ವಿ. ವಿಜಯಲಕ್ಷ್ಮಿ ಉಭಯತ್ರರನ್ನು ಸನ್ಮಾನಿಸಿ ಅಭಿನಂದಿಸಿದರು. ವಿಶ್ವವಿದ್ಯಾನಿಲಯದ ಪ್ರಗತಿಯ ಹಾದಿಯಲ್ಲಿ ಇದರಿಬ್ಬರ ಅತ್ಯಮೂಲ್ಯ ಕೊಡುಗೆಯನ್ನು ಕೃತಜ್ಞತೆಯಿಂದ…

1 2 3 122
Girl in a jacket