ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು, ಏ, 14: ಸಚಿವ ಕೆ.ಎಸ್.ಈಶ್ವರಪ್ಪ ಅವರು ನೈತಿಕ ಹೊಣೆ ಹೊತ್ತು, ಸ್ವಪ್ರೇರಣೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.ಕೆ.ಎಸ್.ಈಶ್ವರಪ್ಪ ಅವರು ನನ್ನ ಬಳಿ ಮಾತನಾಡಿದರು. ಪ್ರಕರಣದಲ್ಲಿ ನನ್ನ ಪಾತ್ರವಿಲ್ಲ ಹಾಗೂ ತಪ್ಪಿಲ್ಲ ಎನ್ನುವ ಸಂಪೂರ್ಣ ವಿಶ್ವಾಸವಿದೆ. ಹೀಗಾಗಿ ನನಗೆ ನೈತಿಕತೆ ಇದೆ. ಈಗ ಅದನ್ನಿಟ್ಟು ಕೊಂಡು ಮಾತನಾಡಿದರೆ ಬಹಳಷ್ಟು ಜನರಿಗೆ ಇರಿಸುಮುರುಸಾಗುತ್ತದೆ. ಅದಾಗುವುದು ಬೇಡ. ಇದರ ತನಿಖೆ ಮುಗಿಸಿ, ಸತ್ಯ ಹೊರಬಂದು, ನನ್ನ ಮೇಲೆ…