ಒಕ್ಕಲಿಗರು, ಲಿಂಗಾಯತರನ್ನು ಒಡೆದಿದ್ದಾರೆ, ಮುಸ್ಲಿಂ ವೋಟ್ ಬ್ಯಾಂಕ್ ಗಾಗಿ ಮಾಡಿದ ವರದಿ- ಅಶೋಕ್ ಆರೋಪ
ಬೆಂಗಳೂರು, ಏ, 13-ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು.…




















