ಜನರ ವಿಭಜಿಸುವ ಪ್ರಯತ್ನಸರ್ಕಾರದ ವಿರುದ್ಧ ಸಿದ್ದು ವಾಗ್ದಾಳಿ
ಬೆಂಗಳೂರು, ಏ.೧: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಎಲ್ಲಾ ವರ್ಗದವರು ತೊಂದರೆಯಲ್ಲಿದ್ದು, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿದ್ದರೂ ಇದನ್ನು ಬಿಟ್ಟು ಜನರನ್ನು ವಿಭಜಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ನೂತನ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಮಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕೋಮುವಾದವನ್ನು ಹೆಚ್ಚು ಮಾಡುತ್ತಿಲ್ಲಾರೆ. ಬಿಜೆಪಿ, ಸಂಘ ಪರಿಹಾರ ಸಂವಿಧಾನದ ವಿರುದ್ಧವಾಗಿ ಜನರ ಮನಸ್ಸನ್ನು ಕೋಮುವಾದದ ಆಧಾರದ ಮೇಲೆ…