ಉತ್ಪಾದನಾ ತಾಣವಾಗಿ ರಾಜ್ಯ: ಏಪ್ರಿಲ್‌ನಲ್ಲಿ ಉದ್ಯಮ ಮಂಥನ
ಉತ್ಪಾದನಾ ತಾಣವಾಗಿ ರಾಜ್ಯ: ಏಪ್ರಿಲ್‌ನಲ್ಲಿ ಉದ್ಯಮ ಮಂಥನ by-ಕೆಂಧೂಳಿ ಬೆಂಗಳೂರು,ಮಾ,19-ರಾಜ್ಯವನ್ನು ಜಾಗತಿಕ ಮಟ್ಟದ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ಏಪ್ರಿಲ್ ಕೊನೆ ವಾರದಲ್ಲಿ ಎರಡು ದಿನಗಳ ʻಉದ್ಯಮ ಮಂಥನʼ ಕಾರ್ಯಕ್ರಮ ನಡೆಸಲಾಗುವುದು. ಇದರಲ್ಲಿ ಉತ್ಪಾದನಾ ವಲಯದಲ್ಲಿ ಮುಂಚೂಣಿಯಲ್ಲಿರುವ ಉದ್ದಿಮೆಗಳ ಮುಖ್ಯಸ್ಥರನ್ನು ಕರೆದು, ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ವಿಧಾನಸೌದದ ತಮ್ಮ ಕಚೇರಿಯಲ್ಲಿ ಈ ಕುರಿತು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಪ್ರಾಥಮಿಕ…