ಚಿತ್ರ ಡಾನ್ ಬೋಸ್ಕೋದಲ್ಲಿ ಮಹಿಳಾ ದಿನಾಚರಣೆ
ಚಿತ್ರದುರ್ಗ,ಮಾ,10:ಇಲ್ಲಿನ ಚಿತ್ರ ಡಾನ್ ಬೋಸ್ಕೋ ಸಂಸ್ಥೆಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ಸುಧಾ ಅವರು ಮಹಿಳೆಯರು ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಆಗ ಮಾತ್ರ ಸುಸ್ಥಿರ ಸಮಾಜ ಕಟ್ಟಬಹುದೆಂದು ಹೇಳಿದರು. ಅಭಿವೃದ್ಧಿಯ ಕಾಲಘಟ್ಟದಲ್ಲಿ ಮಹಿಳೆಯರು ಶಿಕ್ಷಣ ಮತ್ತು ಸಾಮಾಜಿಕವಾಗಿ ಚಲನಶೀಲರಾಗಬೇಕು ಆಗ ಮಾತ್ರ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕರಾದ ಫಾದರ್…