ಸಣ್ಣ ಉಕ್ಕು ಕ್ಷೇತ್ರದ ಕ್ಷಮತೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ
ನವದೆಹಲಿ,ಆ,13-ಸಣ್ಣ ಪ್ರಮಾಣದ ಉಕ್ಕು ಉತ್ಪಾದಿತ ಕ್ಷೇತ್ರವು ರಾಷ್ಟ್ರದ ಅಭಿವೃದ್ಧಿಯ ಬೆನ್ನೆಲುಬಿನಂತೆ ಕೆಲಸ ಮಾಡುತ್ತಿದ್ದು; 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಮತ್ತು 2047ರ ವೇಳೆಗೆ 500 ದಶಲಕ್ಷ ಟನ್ ಉಕ್ಕು ಉತ್ಪಾದಿಸುವ ಕಾರ್ಯಸೂಚಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ನವದೆಹಲಿಯ ವಿಜ್ಞಾನ ಭವನದಲ್ಲಿ ಸಣ್ಣ ಪ್ರಮಾಣದ ಉಕ್ಕು ಕೈಗಾರಿಕೆಗಳ ಸವಾಲುಗಳ ಕುರಿತು ಉಕ್ಕು ಸಚಿವಾಲಯ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು…