ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಮೊದಲು ಕಡಿಮೆ ಮಾಡಿಕೊಳ್ಳಬೇಕು: ಸಚಿವೆ ಶಶಿಕಲಾ ಜೊಲ್ಲೆ
ಬೆಂಗಳೂರು ಮಾ, 9: ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಅ ಜೊಲ್ಲೆ ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್ ಆಸ್ಪತ್ರೆಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊರತಂದಿರುವ ಕೇವಲ 390 ರೂಪಾಯಿಗಳಲ್ಲಿ ಮಹಿಳಾ ಸಮಗ್ರ ಆರೋಗ್ಯ ಪರೀಕ್ಷೆಯನ್ನು ಮಾಡುವಂತಹ ವಿಶೇಷ ಪ್ಯಾಕೇಜ್‌ಗೆ ಚಾಲನೆ ನೀಡಿ ಮಾತನಾಡಿದರು. ಸೊಸೆ ಅಥವಾ ಮಗಳು ಹೆರಿಗೆ ಆದಾಗ ಮೊದಲು ಕೇಳುವ ಪ್ರಶ್ನೆ ಗಂಡೋ,…