ಶಾಂತಿಭಂಗದ ಷಡ್ಯಂತ್ರ ಮಾಡುತ್ತಿರುವ ಅಶೋಕ್: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
ಕನಕಪುರ, ಸೆ.10-ದ್ವೇಷ ಬಿತ್ತುವ, ಸಮಾಜ ಇಬ್ಬಾಗ ಮಾಡುವುದೇ ಅವರ (ಆರ್.ಅಶೋಕ್) ಅಜೆಂಡಾ. ಅವರೇ ಶಾಂತಿಭಂಗ ಮಾಡುವ, ಅಶಾಂತಿ ಉಂಟುಮಾಡುವ ಷಡ್ಯಂತ್ರ ರೂಪಿಸುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕನಕಪುರದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು.ಧರ್ಮಸ್ಥಳ, ದಸರಾ ಉದ್ಘಾಟನೆ, ಚಾಮುಂಡಿ ಬೆಟ್ಟ ಪ್ರವೇಶದ ವಿಚಾರದಲ್ಲಿ ವಿಪಕ್ಷ ನಾಯಕ ಅಶೋಕ್ ಅವರ ಟೀಕೆಗಳ ಬಗ್ಗೆ ಕೇಳಿದಾಗ, “ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಉದ್ಯೋಗವಿಲ್ಲ. ಎಲ್ಲಾ ಷಡ್ಯಂತ್ರಗಳ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲವೂ ಶೀಘ್ರ ಆಚೆ ಬರಲಿದೆ”…



















