ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ
ದೆಹಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ by-ಕೆಂಧೂಳಿ ನವದೆಹಲಿ, ಫೆ,19-ಮೊದಲಬಾರಿ ಗೆದ್ದ ರೇಖಾ ಗುಪ್ತ ಅವರನ್ನು ದೆಹಲಿ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಹಾಗೂ ಶಾಲಿಮಾರ್ ಬಾಗ್ (ವಾಯುವ್ಯ) ಕ್ಷೇತ್ರದ ಶಾಸಕಿ ರೇಖಾ ಗುಪ್ತಾ ಅವರನ್ನು ಭಾರತೀಯ ಜನತಾ ಪಕ್ಷವು ಕೇಂದ್ರಾಡಳಿತ ಪ್ರದೇಶವಾದ ದೆಹಲಿಯ ಮುಖ್ಯಮಂತ್ರಿಯಾಗಿ ಘೊಷಿಸಿದೆ. ಇದರೊಂದಿಗೆ ನಾಲ್ಕನೇ ಬಾರಿಗೆ ರಾಷ್ಟ್ರ ರಾಜಧಾನಿಗೆ ಮಹಿಳಾ ಮುಖ್ಯಮಂತ್ರಿ ಸಿಕ್ಕಾಂತಾಗಿದೆ. ಮಾತ್ರವಲ್ಲ ಈ ಮಹಿಳೆ ಇದೇ ಮೊದಲ ಬಾರಿಗೆ ಶಾಸಕಿಯಾಗಿ…