ಆನ್ ಲೈನ್ ಶಿಕ್ಷಣಕ್ಕೆ ಅನುಮತಿ; ನಿಯಮಾವಳಿ ಸುಧಾರಣೆಗೆ ಸಲಹೆ
ಬೆಂಗಳೂರು,ಫೆ,21: ಮುಕ್ತ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಿದವರಿಗೆ ಉದ್ಯೋಗ ನೇಮಕಾತಿಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡದಂತೆ ನಿಗಾ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಪಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಸೋಮವಾರ ಇಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ಮುಕ್ತ ವಿಶ್ವವಿದ್ಯಾಲಯಗಳ ಕುಲಪತಿಗಳ ಸಮಾವೇಶದಲ್ಲಿ ‘ಕೋವಿಡ್ ಹಾಗೂ ಎನ್.ಇ.ಪಿ-2020 ಹಿನ್ನೆಲೆಯಲ್ಲಿ ಆನ್ ಲೈನ್ ಡಿಜಿಟಲ್ ಕಲಿಕೆ (ಒ.ಡಿ.ಎಲ್.) ಮತ್ತು ಆನ್ ಲೈನ್ ಕಲಿಕೆ (ಆನ್ ಲೈನ್ ಲರ್ನಿಂಗ್) ಉತ್ತೇಜಿಸಲು ನಿಯಮಾವಳಿಗಳಲ್ಲಿ ಗುಣಾತ್ಮಕ ಸುಧಾರಣೆ’ ಕುರಿತ ವಿಚಾರ ಸಂಕಿರಣವನ್ನು…