ಓಮೈಕ್ರಾನ್ ಭೀತಿ;ರಾಜ್ಯದಲ್ಲಿ ಡಿ ೨೮ ರಿಂದ ಹತ್ತು ದಿನ ನೈಟ್ ಕರ್ಪ್ಯೂ ಜಾರಿ
ಬೆಂಗಳೂರು, ಡಿ,೨೬; ರಾಜ್ಯದಲ್ಲಿ ಓಮೈಕ್ರಾನ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹರಡುವಿಕೆ ತಡೆಯಲು ಸರ್ಕಾರ ಹತ್ತು ದಿನಗಳ ಕಾಲ ನೈಟ್ ಕರ್ಪ್ಯೂ ಜಾರಿಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಡಿಸೆಂಬರ್ ೨೮ರಿಂದ ೧೦ ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿದೆ.…