ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ; ಯುವಿಸಿಇ, ವಿಟಿಯು ಐಐಟಿ ಮಟ್ಟಕ್ಕೆ:ಅಶ್ವತ್ಥನಾರಾಯಣ
ಬೆಳಗಾವಿ,ಡಿ,14: ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣದಲ್ಲಿ ಬುಧವಾರ ನಡೆದ `ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣ ಪತ್ರಗಳ ಸೇವಾ ವ್ಯವಸ್ಥೆ’ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆಯ ಉದ್ಘಾಟನೆ ನೆರವೇರಿಸಿ ಅವರು…