ಅಣೆಕಟ್ಟುಗಳ ಸುರಕ್ಷತೆ ತಾಂತ್ರಿಕ ಸಮಿತಿ ವರದಿ ಬಂದ ಬಳಿಕ ಅಗತ್ಯ ಕಾಮಗಾರಿ: ಡಿಸಿಎಂ ಡಿ.ಕೆ. ಶಿವಕುಮಾರ್
ಕಬಿನಿ, ಜು.20-“ರಾಜ್ಯದ ಅಣೆಕಟ್ಟುಗಳ ಸುರಕ್ಷತೆ ಕುರಿತು ಸರ್ಕಾರ ತಾಂತ್ರಿಕ ಸಮಿತಿ ರಚಿಸಿದ್ದು, ಈ ಸಮಿತಿ ವರದಿ ಬಂದ ನಂತರ ಅಗತ್ಯ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಬಿನಿ ಅಣೆಕಟ್ಟಿನ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. “ಕೆಆರ್ ಎಸ್ ಅಣೆಕಟ್ಟಿನ ನಂತರ ಇಂದು ಕಬಿನಿಯಲ್ಲಿ ಬಾಗಿನ ಅರ್ಪಣೆ ಮಾಡಿದ್ದೇವೆ. ಈ ಮಧ್ಯೆ ಎರಡು ವರ್ಷ ಅಣೆಕಟ್ಟು ಭರ್ತಿ ಆಗಿರಲಿಲ್ಲ. ಈ…