ಭಾಷೆ ಸದೃವಾದರೆ ರಾಜ್ಯ ಶಕ್ತಿಶಾಲಿ-ಸಿಎಂ ಬೊಮ್ಮಾಯಿ
ಬೆಂಗಳೂರು,ನ೦೧: ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ ಮತ್ತು ಕನ್ನಡ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿರುವ ಅವರು, ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ…