ಕಾಲು, ಬಾಯಿ ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಮಧು ಬಂಗಾರಪ್ಪ ಚಾಲನೆ
ಕುಬಟೂರು,ಏ,20- ಶಿವಮೊಗ್ಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಕಾಲು ಮತ್ತು ಬಾಯಿ ಹಾಗೂ ಚರ್ಮ ಗಂಟು ರೋಗದ ವಿರುದ್ಧ ಲಸಿಕೆ ಅಭಿಯಾನಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಚಾಲನೆ ನೀಡಿದರು. ಏಪ್ರಿಲ್ 21 ರಿಂದ ಜೂನ್ 4 ರವರೆಗೆ ರಾಜ್ಯಾದ್ಯಂತ 45 ದಿನಗಳ ಕಾಲ ಲಸಿಕೆ ಅಭಿಯಾನ ನಡೆಯಲಿದೆ.ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಯ ಸಹಯೋಗದೊಂದಿಗೆ ನಡೆಸಲಾಗುವ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ…