ನ 1ರಿಂದ ಟಾಟಾ ಸಹಯೋಗದಲ್ಲಿ ಆಧುನಿಕ ಕೋರ್ಸ್ ಗಳ ತರಬೇತಿ ಆರಂಭ: ಅಶ್ವತ್ಥ ನಾರಾಯಣ
ಬೆಂಗಳೂರು,ಅ,21: ‘ಉದ್ಯೋಗ’ ಕಾರ್ಯಕ್ರಮದಡಿ ಟಾಟಾ ಕಂಪನಿಯ ಸಹಯೋಗದಲ್ಲಿ ರೂ 4,636 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗಿರುವ 150 ಕೈಗಾರಿಕಾ ತರಬೇತಿ ಸಂಸ್ಥೆಗಳು (ಐಟಿಟಿ) ಇನ್ನೆರಡು ವಾರದಲ್ಲಿ ಉದ್ಘಾಟನೆಯಾಗಲಿದ್ದು, ಆಧುನಿಕ ಕೋರ್ಸ್ ಗಳನ್ನು ಒಳಗೊಂಡ ತರಬೇತಿಯು ಈ ಕೇಂದ್ರಗಳಲ್ಲಿ ನ.1ರಿಂದ ಆರಂಭವಾಗಲಿದೆ ಎಂದು ಕೌಶಾಲಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಗುರುವಾರ ಹೇಳಿದರು. ಇಲ್ಲಿನ ಪೀಣ್ಯದಲ್ಲಿ ಮೇಲ್ದರ್ಜೆಗೇರಿಸಿರುವ ಸರ್ಕಾರಿ ಐಟಿಐ ಕೇಂದ್ರವನ್ನು ಪರಿಶೀಲಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹೊಸ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು…