ದಸರಾ;ಮಾರ್ಗಸೂಚಿ ಬಿಡುಗಡೆ,ಮೈಸೂರಿಗೆ ಪ್ರತ್ಯೇಕ ಮಾರ್ಗಸೂಚಿ
ಬೆಂಗಳೂರು,ಅ,06; ವಿಶ್ವವಿಖ್ಯಾತ ದಸರಾ ಆಚರಣೆಗೆ ರಾಜ್ಯ ಸರ್ಕಾರ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಸರಳವಾಗಿ ದಸರಾ ಆಚರಣೆ ಮಾಡಲು ಸರ್ಕಾರ ಅನುಮತಿ ನೀಡಿದೆ. ಮೈಸೂರು ದಸರಾ ಮತ್ತು ರಾಜ್ಯದ ಇತರ ಜಿಲ್ಲೆಗಳಲ್ಲಿ ದಸರಾ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 400ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ. ದೈಹಿಕ ಅಂತರ ಇಲ್ಲದ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗುವುದು. ಈ ಮಾರ್ಗಸೂಚಿಗಳನ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಇತರೆ ಇಲಾಖೆ…