Girl in a jacket

Author kendhooli_editor

ನನ್ನ ಮೊದಲ ಕನಸೊಂದು ಸಾಕಾರಗೊಂಡಿದೆ;ರಂಜನಿ ರಾಘವನ್

ಬೆಂಗಳೂರು,ಸೆ,29: ಪುಸ್ತಕ ಬರೆಯುವ ಕನಸೊಂದು ನನ್ನ ಮನಸಿನ ಮೂಲೆಯಲ್ಲಿ ಕುಳಿತಿತ್ತು. ಕತೆ ಡಬ್ಬಿ ಮೂಲಕ ಇದು ಸಾಕಾರಗೊಂಡಿದೆ. ಮೊದಲ ಪುಸ್ತಕವಾಗಿದ್ದರಿಂದ ತುಂಬಾ ಸಂಭ್ರಮದಲ್ಲಿರುವೆ ಎಂದು ʻಕನ್ನಡತಿʼ ಖ್ಯಾತಿಯ ನಟಿ ರಂಜನಿ ರಾಘವನ್‌ ತಿಳಿಸಿದರು. ಬಹುರೂಪಿ ಹಮ್ಮಿಕೊಂಡಿದ್ದ ರಂಜನಿ ರಾಘವನ್ ಅವರ ಕಥಾ ಸಂಕಲನ ʻಕತೆ ಡಬ್ಬಿʼ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು. ʻಅವಧಿʼ ವೆಬ್‌ ಪತ್ರಿಕೆಯಲ್ಲಿ ವಾರಕ್ಕೊಮ್ಮೆ ಕತೆಗಳನ್ನು ಬರೆದೆ. ಅದಕ್ಕೆ ಬಂದ ಪ್ರತಿಕ್ರಿಯೆಗಳು ನನಗೆ ಉತ್ಸಾಹ ತುಂಬಿತು ಅದೇ ಕಾರಣವಾಗಿ ಕತೆ ಡಬ್ಬಿ ರೂಪುಗೊಂಡಿತು. ಮುಂದೆ ಕಾದಂಬರಿಯನ್ನು…

ಖಾಸಗಿ ಎಂಜಿನಿಯರಿಂಗ್ ಶುಲ್ಕ ಹೆಚ್ಚಳ ಇಲ್ಲ, ಇತರೆ ಶುಲ್ಕಕ್ಕೆ ರೂ 20,000 ಮಿತಿ

ಬೆಂಗಳೂರು,ಸೆ,29: ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೇ ಹಿಂದಿನ ದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕರ್ನಾಟಕ ಅನುದಾನ ರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ (ಕೆಯುಪಿಇಸಿಎ) ಮತ್ತು ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ವೃತ್ತಿ ಪರ ಕಾಲೇಜುಗಳ ಸಂಘದ (ಕೆಆರ್ ಎಲ್ಎಂಪಿಸಿಎ) ಪ್ರತಿನಿಧಿಗಳ ಜತೆ ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು ಎಂದು ಸಚಿವರು ಸುದ್ದಿಗಾರರಿಗೆ…

ಮೀರಾಬಾಯಿಕೊಪ್ಪಿಕರ್ ,ಸಿದ್ದಂಗಂಗಾ ಮಠಕ್ಕೆ ಗಾಂಧಿ ಸೇವಾ ಪ್ರಶಸ್ತಿಗೆ ಆಯ್ಕೆ

ಬೆಂಗಳೂರು, ಸೆ, 29 :ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ” 2020 ಮತ್ತು 2021 ನೇ ಸಾಲಿಗೆ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಶ್ರೀಮತಿ ಮೀರಾಬಾಯಿ ಕೊಪ್ಪಿಕರ್ ಅವರಿಗೆ ಹಾಗೂ ಸಿದ್ದಗಂಗಾ ಮಠಕ್ಕೆ ಪ್ರಶ್ರಸ್ತಿಗೆ ಆಯ್ಕೆ ಮಾಡಲಾಗಿದೆ. ಕೋವಿಡ್- 19ರ ಹಿನ್ನಲೆಯಲ್ಲಿ…

ಆರ್ ಎಸ್ ಎಸ್ ನ ತಾಲಿಬಾನಿಗೆ ಹೋಲಿಸಿದ ಸಿದ್ದುಗೆ ತಿರುಗೇಟು ನೀಡಿದ ಸಿ.ಟಿ ರವಿ

ಬೆಂಗಳೂರು,ಸೆ,29: ಆರ್ ಎಸ್ ಎಸ್ ನವರದ್ಧು ತಾಲಿಬಾನ್ ಸಂಸ್ಕೃತಿ ಎಂದಿದ್ದ ಮಾಜಿ ಸಿಎಂ ಸಿದ್ಧರಾಮಯ್ಯಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಚಿವ ಸಿ.ಟಿ ರವಿ, ‘ಇತ್ತೀಚೆಗೆ ಯಾಕೋ ನಿಮ್ಮ ನಾಲಗೆಯ ಮೇಲೆ ತಾಲಿಬಾನಿ ಪದ ಹೆಚ್ಚು ಬಳಕೆಯಾಗುತ್ತಿದೆ. ನೀವೇನಾದರೂ ಅಲ್ಲಿಗೆ ಹೋಗುವ ಮನಸ್ಸು ಮಾಡಿದ್ದರೆ ಹೇಳಿ ಬಿಡಿ. ನಿಮ್ಮ ಮನೆಗೆ ನಾವು ಬಂದು ಅಲ್ಲಿಯ ಬಿಕ್ಕಟ್ಟು ಸಂಘದ ಸ್ವಾತಂತ್ರ್ಯದ ಬಗ್ಗೆ ಎಳೆ ಎಳೆಯಾಗಿ ವಿವರಿಸುತ್ತೇವೆ.…

ಬಿಜೆಪಿ ಸರಕಾರ ಅನೈತಿಕ, ಕಾರಜೋಳ ಪಾಪದ ಮಂತ್ರಿ- ಎಂ. ಬಿ. ಪಾಟೀಲ ವಾಗ್ದಾಳಿ

ವಿಜಯಪುರ, ಸೆ,29: ಹಾಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿರುದ್ಧ ಮಾಜಿ ಜಲಸಂಫನ್ಮೂಲ ಸಚಿವ ಎಂ. ಬಿ. ಪಾಟೀಲ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುಕೆಪಿ ಕಾಂಗ್ರೆಸ್ಸಿನ ಪಾಪದ ಕೂಸು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಆದರೆ, ಬಿಜೆಪಿ ಸರಕಾರ ಪಾಪದ ಕೂಸು. ಅನೈತಿಕ ಸರಕಾರದಲ್ಲಿ ಗೋವಿಂದ ಕಾರಜೋಳ ಪಾಪದ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಎಂ. ಬಿ. ಪಾಟೀಲ ಹರಿಹಾಯ್ದರು. ಕಾರಜೋಳ ಅವರಿಗೆ ಈ ವಯಸ್ಸಿನಲ್ಲಿ ಈ ರೀತಿ ಹೇಳಿಕೆ ನೀಡುವುದು…

ಬಿರುಸಿನ ನಡಿಗೆ ಅತ್ತ್ಯುತ್ತಮ ವ್ಯಾಯಾಮ;ಸಿಎಂ ಬೊಮ್ಮಾಯಿ

ಬೆಂಗಳೂರು, ಸೆ, 29:ಶಕ್ತಿಯುತ ದೇಹ ಹಾಗೂ ಮನಸ್ಸು ಆರೋಗ್ಯಕರ ಜೀವನಕ್ಕೆ ಸಹಕಾರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ವಿಶ್ವ ಹೃದಯ ದಿನಾಚರಣೆ ಅಂಗವಾಗಿ ವಿಧಾನಸೌಧದಿಂದ ಕಂಠೀರವ ಕ್ರೀಡಾಂಗಣದವರೆಗೆ ಇಂದು ಆಯೋಜಿಸಿದ್ದ ಹೃದಯದಿಂದ ಬಾಂಧವ್ಯ ಬೆಳೆಸೋಣ ವಾಕಥಾನ್ ಗೆ ಅವರು ಚಾಲನೆ ನೀಡಿ ಮಾತನಾಡಿದರು. ವಿಶ್ವ ಹೃದಯ ದಿನಾಚರಣೆ ಅಂಗವಾಗಿ ಹೃದಯ ಸ್ನೇಹಿ ಚಟುವಟಿಕೆಯಾದ ಬಿರುಸಿನ ನಡಿಗೆಗೆ ಚಾಲನೆ ನೀಡಲಾಗಿದೆ. ಆರೋಗ್ಯ ಕಾಪಾಡಿಕೊಳ್ಳಲು ಬಿರುಸಿನ ನಡಿಗೆ ಸಹಾಯಕ. ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೃದಯ…

ಗುರು

      ಸಿದ್ಧಸೂಕ್ತಿ :                                                                                    ಗುರು. ಜ್ಞಾನದಾತಾ.ವೀರಶೈವ ಲಿಂಗಾಯತರ ಅಷ್ಟಾವರಣಗಳಲ್ಲಿ ಒಂದು. ಅರಿವೇ ಗುರು. ಒಂದಕ್ಷರ ಕಲಿಸಿದಾತ, ಒಂದಿನಿತು ಜ್ಞಾನ ನೀಡಿದಾತ. ಗುರುತರ ಹೊಣೆಗಾರ. ಎಲ್ಲರಿಗೂ ಶ್ರೇಷ್ಠ, ಎಲ್ಲರಿಗೂ ಬೇಕು! ಗುರುವಿದ್ದರೆ ಗುರಿ, ಇಲ್ಲದಿದ್ದರೆ ಕುರಿ! ಗುರುಗಳನೇಕರು. ನಿಜಗುಣ ಶಿವಯೋಗಿಗಳ ಪ್ರಕಾರ ಆರು ವಿಧ. ಹಣ ಕೀಳುವ ಗುರುಗಳು ಬಹಳ. ಹೃದಯ-ಭವತಾಪ ಕಳೆಯುವ ಗುರು ವಿರಳ. ಕಳ್ಳತನ ಕಲಿಸಿದರೆ ಕಳ್ಳ ಗುರು. ಒಳಿತನ್ನು ಕಲಿಸಿದರೆ ಉತ್ತಮ ಗುರು. ಆತ್ಮ ವಿದ್ಯೆಯನ್ನು ಧಾರೆಯೆರೆದು ಮುಕ್ತಿಸುಖವನ್ನು ಉಣಿಸಿ ಜನ್ಮ…

ಸಿಂದಗಿ,ಹಾನಗಲ್ ಕ್ಷೇತ್ರದ ಉಪಚುನಾವಣೆ ಘೋಷಣೆ

ಬೆಂಗಳೂರು,ಸೆ,28: ಸಿಂದಗಿ ಮತ್ತು ಹಾನಗಲ್ ಕ್ಷೇತ್ರದ ಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ರಂದು ಎರಡು ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನವಂಬರ್ 2 ರಂದು ಮತ ಎಣಿಕೆ ನಡೆಯಲಿದೆ. ಹಾನಗಲ್ ಕ್ಷೇತ್ರವನ್ನು ಬಿಜೆಪಿ ಶಾಸಕ ಸಿ.ಎಂ. ಉದಾಸಿ ಪ್ರತಿನಿಧಿಸುತ್ತಿದ್ದರು. ಸಿಂದಗಿ ಕ್ಷೇತ್ರವನ್ನು ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ಪ್ರತಿನಿಧಿಸುತ್ತಿದ್ದರು. ಅವರ ನಿಧನದಿಂದ ತೆರವಾದ ಸ್ಥಾನಗಳಿಗೆ ಉಪಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಹಾನಗಲ್ ಕ್ಷೇತ್ರವನ್ನು ಉಳಿಸಿಕೊಳ್ಳಲು ಆಡಳಿತ ಪಕ್ಷ ಬಿಜೆಪಿ ಕಾರ್ಯತಂತ್ರ ರೂಪಿಸಿದ್ದು, ಉದಾಸಿ ಅವರ ಪುತ್ರ ಸಂಸದರಾದ…

ಹಾನಗಲ್, ಸಿಂಧಗಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ: ಹೆಚ್.ಡಿ.ಕುಮಾರಸ್ವಾಮಿ 

ಬೆಂಗಳೂರು,ಸೆ,28: ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಕಟಿಸಿದರು. ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದ ಮಾಧ್ಯಮಗಳ ಜತೆ ಮಾತನಾಡಿದರು. ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.…

ಪ್ರಸಾದ

ಸಿದ್ಧಸೂಕ್ತಿ : ಪ್ರಸಾದ. ದೇವರಿಗೆ ನೈವೇದ್ಯ ಮಾಡಿ ಸ್ವೀಕರಿಸುವ, ಗುರು ಹಿರಿಯ ಅರ್ಚಕ ನೀಡುವ, ಹೂ ಹಣ್ಣು ಕಾಯಿ ಅನ್ನ ಪ್ರಸಾದ. ದೇವಸ್ಥಾನ ಮಠ ಮಂದಿರಾದಿಗಳಲ್ಲಿನ ಶುದ್ಧ ತ್ಯಾಗ ಭಾವದಿಂದ ಮಾಡುವ, ಭಿಕ್ಷಾಟಣೆಯಿಂದ ಸಂಗ್ರಹಿಸಿದ ದಾಸೋಹ ಭೋಜನ.ಭಗವಂತನ, ಗುರು ಹಿರಿಯರ ಅನುಗ್ರಹದಿಂದ ಪ್ರಾಪ್ತವಾದುದನ್ನು ಅವರಿಗರ್ಪಿಸಿ ಅವರ ಸ್ಮರಣೆಯೊಂದಿಗೆ ಸೇವಿಸುವ ಪ್ರಸಾದದಿಂದ ಶರೀರ ಪವಿತ್ರ! ಮನಸ್ಸು ಪ್ರಸನ್ನ! ಇದು ಸರ್ವದುಃಖಗಳನ್ನೂ ನಾಶಗೊಳಿಸುವುದು. “ನೈವೇದ್ಯ ಮಾಡದೇ, ಪರರಿಗೆ ಅರ್ಪಿಸದೇ ತನಗಾಗಿ ಬೇಯಿಸಿಕೊಂಡು ಉಣ್ಣುವವ ಪಾಪ ಉಂಡಂತೆ, ಅವನು ಕಳ್ಳ!”…

ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವವರಿಗೆ ಮುಂದಿನ ಚುನಾವಣೆಯಲ್ಲಿ ಉತ್ತರ; ಎಚ್ ಡಿಕೆ

ರಾಮನಗರ,ಸೆ,27: ಕೆಲವರು ಜೆಡಿಎಸ್ ಪಕ್ಷವನ್ನು 30 ಸೀಟುಗಳ ಪಕ್ಷ ಎಂದು ಲಘುವಾಗಿ ಮಾತನಾಡುತ್ತಿದ್ದಾರೆ. ಅಂಥವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದರು. ಬಿಡದಿಯ ತೋಟದ ಮನೆಯಲ್ಲಿ ಆಯೋಜಿಸಲಾಗಿದ್ದ ‘ಜನತಾ ಪರ್ವ 1.O’ ಹಾಗೂ, ‘ಮಿಷನ್ -123’ ಕಾರ್ಯಗಾರದಲ್ಲಿ ಪ್ರಚಲಿತ ರಾಜಕೀಯ ಸನ್ನಿವೇಶದ ಕುರಿತು ಮಾತನಾಡಿದರು ಅವರು. ಜೆಡಿಎಸ್ ಪಕ್ಷದಿಂದ ರಾಜಕೀಯವಾಗಿ ಬೆಳೆದವರು ಕೊನೆಗೆ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೇ ಮುಗಿಸಲು…

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತ

ಬೆಂಗಳೂರು,ಸೆ,೨೭: ನಗರದಲ್ಲಿ ಮತ್ತೊಂದು ಕಟ್ಟಡ ಕುಸಿದು ಬಿದ್ದಿದೆ ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಿಲ್ಸನ್ ಗಾರ್ಡನ್‌ನಲ್ಲಿರುವ ಲಕ್ಕಸಂದ್ರದಲ್ಲಿ ಮೂರು ಅಂತಸ್ತಿನ ಕಟ್ಟಡ ನೋಡು ನೋಡುತ್ತಿದ್ದಂತೆ ಕುಸಿದು ಬಿದ್ದಿದೆ ಆದರೆ ಮುಂಚೆಯೇ ಇದರ ಸೂಚನೆ ಇದ್ದ ಕಾರಣ ಮನೆಯಿಂದ ಎಲ್ಲರೂ ಹೊರ ಬಂದಿದ್ದರು ಹೀಗಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಳೆದ ಎರಡು ವರ್ಷಗಳ ಹಿಂದೆಯೇ ಈ ಮನೆ ಕೊಂಚ ವಾಲಿತ್ತು. ಇಂದು ಬೆಳಗ್ಗೆ ಮನೆ ನಿಧಾನವಾಗಿ ಮತ್ತಷ್ಟು ವಾಲಲು ಮುಂದಾಗಿದೆ. ಈ ಘಟನೆ ಅರಿವಿಗೆ ಬರುತ್ತಿದ್ದಂತೆ ತಕ್ಷಣಕ್ಕೆ ಮನೆಯಲ್ಲಿದ್ದವರೆಲ್ಲಾ…

ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ-ಎಚ್‌ಡಿಡಿ

ರಾಮನಗರ,ಸೆ,೨೭: ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಸೋಮವಾರ ಹೇಳಿದ್ದಾರೆ. ೨೦೨೩ಕ್ಕೆ ಜಾತ್ಯತೀತ ಜನತಾದಳದ ಹಾಗೂ ಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾಗಿರುವ ೪ ದಿನಗಳ ’ಜನತಾ ಪರ್ವ ೧.ಔ’ಕಾರ್ಯಗಾರವನ್ನು ಜೆಡಿಎಸ್ ವರಿಷ್ಠ ದೇವೇಗೌಡ ಅವರು ಉದ್ಘಾಟಿಸಿದರು. ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ.…

ಆರ್ ಆ್ಯಂಡ್ ಡಿ ಹೊಸನೀತಿ ರೂಪಿಸಲು ಕಾರ್ಯಪಡೆ ರಚನೆ

ಹುಬ್ಬಳ್ಳಿ, ಸೆ.27:ಕೃಷಿ,ತೈಲ,ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಇಂದು ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆ್ಯಂಡ್ ಡಿ) ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿವೆ.ಅವುಗಳಿಗೆ ಹೆಚ್ಚು ಮಹತ್ವ ನೀಡಿ,ಕೈಗಾರಿಕೆ,ಕೃಷಿ,ಆಹಾರ ರಂಗದಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿದೆ. ಹೊಸ ಆರ್ ಆ್ಯಂಡ್ ಡಿ ನೀತಿ ರಚನೆಗೆ ಕಾರ್ಯಪಡೆ ಅಧ್ಯಕ್ಷರನ್ನಾಗಿ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಅವರನ್ನು ನೇಮಿಸಲು ಚಿಂತನೆ ನಡೆದಿದೆ.ಬಿವಿಬಿ…

ಪಕ್ಷ ಸಂಘಟನೆಗೆ ಜೆಡಿಎಸ್ ಶಾಸಕರ ಕಾರ್ಯಾಗಾರ

ರಾಮನಗರ,ಸೆ,೨೭: ಜೆಡಿಎಸ್ ಪಕ್ಷದ ಸಂಗಟನೆ ದೃಷ್ಟಿಯಿಂದ ಇಂದಿನಿಂದ ನಾಲ್ಕು ದಿನಗಳ ಕಾಲ ಶಾಸಕರಿಗೆ ಕಾರ್ಯಾಗಾ? ಏರ್ಪಡಿಸಲಾಗಿದೆ. ರಾಮನಗರ ತಾಲೂಕಿನ ಕೇತಗಾನಹಳ್ಳಿ ಗ್ರಾಮದ ಬಳಿ ಇರುವ ತೋಟದಲ್ಲಿ ಕಾರ್ಯಾಗಾರ ನಡೆಯಲಿದ್ದು ಈ ಕಾರ್ಯಕ್ರಮವನ್ನು ಜೆಡಿಎಸ್ ವರಿಷ್ಠ ದೇವೇಗೌಡ ಚಾಲನೆ ನೀಡಲಿದ್ದಾರೆ ಮೊದಲ ಎರಡು ದಿನ ಶಾಸಕ ಸ್ಥಾನದ ಆಕಾಂಕ್ಷಿಗಳು ಮತ್ತು ಶಾಸಕರಿಗೆ ಕಾರ್ಯಾಗಾರ ನಡೆಯಲಿದ್ದು ಮೂರನೇ ದಿನ ಮಹಿಳೆಯರಿಗೆ ತರಬೇತಿ ನೀಡಲಾಗುತ್ತದೆ. ಬೂತ್ ಮಟ್ಟದಲ್ಲಿ ಮಹಿಳಾ ಸಂಘಟನೆ ಮಾಡುವ ಬಗ್ಗೆ ತರಬೇತಿ ನೀಡಲಾಗುತ್ತದೆ ಈ ವೇಳೆ ದೇವೇಗೌಡರು ತಮ್ಮ…

ಈಸೂರು ಇತಿಹಾಸ ಮುಂದಿನ ಯುವ ಪೀಳಿಗೆಗೂ ಪ್ರೇರಣೆಯಾಗಬೇಕು-ಬಿಎಸ್‌ವೈ

ಶಿಕಾರಿಪುರ,ಸೆ,೨೭: ಸ್ವಾತಂತ್ರ್ಯದ ಹೋರಾಟದ ಇತಿಹಾಸದಲ್ಲಿ ರೋಮಾಂಚನ ಉಂಟು ಮಾಡುವ ಘಟನೆ ಈಸೂರಿನಲ್ಲಿ ನಡೆದಿದ್ದು ಅದು ಮುಂದಿನ ಯುವ ಪೀಳಿಗೆಗೂ ಪ್ರೇರಣಾದಾಯಕ ಆಗುವಂತದ್ದು ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಾಲೂಕಿನ ಈಸೂರು ಗ್ರಾಮದಲ್ಲಿ ಭಾನುವಾರ ನಡೆದ ಸ್ವಾತಂತ್ರ್ಯ ಹೋರಾಟದ ಅಮೃತ ಮಹೋತ್ಸವ ಕಾರ‍್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಮಹಾತ್ಮಾ ಗಾಂಧೀಜಿ ಅವರು ನೀಡಿದ ಬ್ರಿಟೀಷರೆ ಭಾರತ ಬಿಟ್ಟು ತೊಲಗಿ ಎನ್ನುವ ಘೋಷಣೆಗೆ ಓಗೊಟ್ಟ ಈಸೂರಿನ ಗ್ರಾಮಸ್ಥರು ತಮ್ಮದು ಸ್ವತಂತ್ರ್ಯ ಗ್ರಾಮ ಎಂದು ಘೋಷಣೆ ಮಾಡಿಕೊಂಡರು, ಕಂದಾಯ…

ಭಾರತ್ ಬದ್‌ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ

ಬೆಂಗಳೂರು,ಸೆ,೨೭: ಕೇಂದ್ರಸರ್ಕಾರದ ಮೂರು ಕೃಷಿ ಕಾಯ್ದೆಗಳು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‌ಗೆ ರಾಜ್ಯದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಿಗ್ಗೆಯೇ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಆದರೆ ಬೆಂಗಳೂರಿನಲ್ಲಿ ಎಂದಿನಂತೆ ಕೆ.ಆರ್ ಮಾರುಕಟ್ಟೆಯಲ್ಲಿ ಇತ್ತು ಮಾರುಕಟ್ಟೆಯ ವ್ಯವಹಾರದಲ್ಲಿಯಾವುದೇ ಏರು ಪೇರು ಆಗಲಿಲ್ಲ ಅಗತ್ಯ ವಸ್ತುಗಳ ಖರೀದಿ ಜೋರಾಗಿಯೇ ನಡೆದಿತ್ತು. ಬಿಎಂಟಿಸಿ ಚಾಲಕರು ನೈತಿಕ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರಿಂದ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ…

ತೀರ್ಥದ ಪ್ರಯೋಜನ

‌‌‌                   ಸಿದ್ಧಸೂಕ್ತಿ :                        ತೀರ್ಥದ ಪ್ರಯೋಜನ ತೀರ್ಥ =ಪವಿತ್ರ, ಪುಣ್ಯಕ್ಷೇತ್ರ, ನದೀ ಕೆರೆ ಕಲ್ಯಾಣಿ, ದೇವರ ತೀರ್ಥ, ಪಾದೋದಕ ಇತ್ಯಾದಿ.ತಾಪ ದುಃಖ ಕಷ್ಟಗಳನ್ನು ದಾಟಿಸುವುದು ತೀರ್ಥ. ಸಂಸಾರ ಸಾಗರ ಮುಳುಗಿಸುವುದು. ಪುಣ್ಯ ಕ್ಷೇತ್ರಗಳ ಕೆರೆ ಕಲ್ಯಾಣಿಗಳ ಸ್ನಾನ ದೇಹ ಕೊಳೆ ತೊಳೆಯುವುದು, ಮನ ಮಾಲಿನ್ಯ ತೆಗೆದು ಭಾವ ಶುದ್ಧಗೊಳಿಪುವುದು. ಕಷ್ಟ…

ಹರ್ಷಲ್ ಹ್ಯಾಟ್ರಿಕ್ ಕಮಾಲ್, ರೋಹಿತ್ ಪಡೆಗೆ ಸೋಲು..!

Reported By: H.D.Savita ಮುಂಬೈ ಇಂಡಿಯನ್ಸ್ ವಿರುದ್ಧ 17 ರನ್ ನೀಡಿ ನಾಲ್ಕು ವಿಕೆಟ್ ಪಡೆದ ಹರ್ಷಲ್ ಪಟೇಲ್ ಆರ್ಸಿಬಿಗೆ ಗೆಲುವಿಗೆ ಕಾರಣರಾದರು. ಹರ್ಷಲ್ ಮಾರಕ ಬೌಲಿಂಗ್ ಗೆ ತತ್ತರಿಸಿದ ರೋಹಿತ್ ಶರ್ಮಾ ಪಡೆ ಕೇವಲ 111 ರನ್ ಗಳಿಗೆ ಆಲ್​ಔಟ್ ಆಯ್ತು. ಅಲ್ದೇ ಮೊದಲು ಹ್ಯಾಟ್ರಿಕ್ ಸಾಧನೆ ಮಾಡಿದರು. ನಂತರ ಅವರ ಕೊನೆಯ ಓವರ್‌ನಲ್ಲಿ ಆಡಮ್ ಮಿಲ್ನೆ ಅವರನ್ನು ಔಟ್ ಮಾಡುವ ಮೂಲಕ ನಾಲ್ಕನೇ ವಿಕೆಟ್ ಪಡೆದರು. ಹರ್ಷಲ್ ಅವರ ಅದ್ಭುತ ಆಟದಿಂದಾಗಿ, ಮುಂಬೈ ತಂಡವು…

ಸೂರ್ಯ ಎಲಿಗೆನ್ಸ್ ಬಹು ಮಹಡಿ ಕಟ್ಟಡ ಲೋಕಾರ್ಪಣೆ

ಬೆಂಗಳೂರು ಸೆ. 26: ಪ್ರಧಾನಮಂತ್ರಿಗಳ ಅವಾಸ್ ಯೋಜನೆಯಡಿ ಎಲ್ಲರಿಗೂ ಸೂರು ಕಲ್ಪಿಸುವಲ್ಲಿ ಬೆಂಗಳೂರು ನಗರ ಜಿಲ್ಲೆ ಮೊದಲು ಸ್ಥಾನದಲ್ಲಿದೆ ಎಂದು ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ವಿ . ಸೋಮಣ್ಣ ಹೇಳಿದರು. ಕರ್ನಾಟಕ ಗೃಹ ಮಂಡಳಿಯಿಂದ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಪುರ ಸೂರ್ಯನಗರದಲ್ಲಿ 1ನೇ ಹಂತದ ನೂತನವಾಗಿ ನಿರ್ಮಿಸಿಲಾಗಿರುವ ಸೂರ್ಯ ಎಲಿಗೆನ್ಸ್ ಬಹುಮಹಡಿ ವಸತಿ ಸಮುಚ್ಚಯವನ್ನು ಲೋಕಾರ್ಪಣೆ ಮಾಡಿ ಹತ್ತು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು‌.…

1 47 48 49 50 51 102
Girl in a jacket