ಸಿದ್ದರಾಮಯ್ಯ ರ ‘ಅಕ್ಕಿ ರಾಜಕೀಯ’ಕ್ಕೆ ತಿರುಗೇಟು ಕೊಟ್ಟ ಕುಮಾರಸ್ವಾಮಿ
ಬೆಂಗಳೂರು,ಸೆ,26: ಬಡವರಿಗೆ ನೀಡಲಾಗುತ್ತಿದ್ದ ಅಕ್ಕಿಯ ಪ್ರಮಾಣವನ್ನು 7 ಕೆಜಿಯಿಂದ 5 ಕೆಜಿಗೆ ಕಡಿತ ಮಾಡಿದ್ದ ಬಗ್ಗೆ ತಮ್ಮ ವಿರುದ್ಧ ಸುಳ್ಳಿನ ಆರೋಪ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ ಅವರು; “ಸಿದ್ದರಾಮಯ್ಯ ಅವರು ಸತ್ಯವನ್ನು ಮರೆಮಾಚಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ” ಎಂದು ಕಿಡಿಕಾರಿದ್ದಾರೆ. ಟ್ವೀಟ್ ಮೂಲಕ ಅವರು ಸಿದ್ದರಾಮಯ್ಯ ಅವರಿಗೆ ನೀಡಿರುವ…