ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ: ಆರ್.ಅಶೋಕ
ಬೆಂಗಳೂರು, ಜೂ, 19-ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಬರೆದ ಸಂವಿಧಾನ ಪ್ರಕಾರ ಧರ್ಮಾಧಾರಿತವಾದ ಮೀಸಲು ನೀಡಲು ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರು ಸಂವಿಧಾನದ ಪುಸ್ತಕ ಹಿಡಿದುಕೊಂಡು ಸಂವಿಧಾನಕ್ಕೆ ಅಪಚಾರ ಮಾಡುತ್ತಿದ್ದಾರೆ. ವಸತಿ ಯೋಜನೆಯಲ್ಲಿ ಮುಸ್ಲಿಮರಿಗೆ ಶೇ.5 ರಷ್ಟು ಮೀಸಲು ಹೆಚ್ಚಿಸಿರುವುದರಿಂದ ಹಿಂದುಳಿದ ವರ್ಗದವರಿಗೆ…