ಖಾಸಗಿ ಎಂಜಿನಿಯರಿಂಗ್ ಶುಲ್ಕ ಹೆಚ್ಚಳ ಇಲ್ಲ, ಇತರೆ ಶುಲ್ಕಕ್ಕೆ ರೂ 20,000 ಮಿತಿ
ಬೆಂಗಳೂರು,ಸೆ,29: ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೇ ಹಿಂದಿನ ದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕರ್ನಾಟಕ ಅನುದಾನ ರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ (ಕೆಯುಪಿಇಸಿಎ) ಮತ್ತು ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ವೃತ್ತಿ ಪರ ಕಾಲೇಜುಗಳ ಸಂಘದ (ಕೆಆರ್ ಎಲ್ಎಂಪಿಸಿಎ) ಪ್ರತಿನಿಧಿಗಳ ಜತೆ ಬುಧವಾರ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು ಎಂದು ಸಚಿವರು ಸುದ್ದಿಗಾರರಿಗೆ…