ಬಿಜೆಪಿ ಸುಳ್ಳಿನ ಕಾರ್ಖಾನೆ;ಸಿದ್ದರಾಮಯ್ಯ ಲೇವಡಿ
ಬೆಂಗಳೂರು,ಸೆ,26: ಬಿಜೆಪಿ ಸುಳ್ಳಿನ ಕಾರ್ಖಾನೆ ಇದ್ದಂತೆ. ಸುಳ್ಳಿನ ಕಂತೆಗಳನ್ನು ಅಲ್ಲಿ ತಯಾರು ಮಾಡಿ ಮಾರ್ಕೆಂಟಿಂಗ್ ಮಾಡುವವರು ಆ ಪಕ್ಷದ ನಾಯಕರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಟೀಕಿಸಿದ್ದಾರೆ. ಮಾಜಿ ಮುಖ್ಯಮಂತ್ರಿ, ದಿವಂಗತ ಅರ್. ಗುಂಡೂರಾವ್ ಅವರ ಜನ್ಮದಿನದ ಅಂಗವಾಗಿ ಗಾಂಧಿನಗರ ವಿಧಾನಸಭೆ ಕ್ಷೇತ್ರದ ಆಟದ ಮೈದಾನದಲ್ಲಿ ಇಂದು ಆಯೋಜಿಸಿದ್ದ ದಿನಸಿ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಿದ್ದರಾಮಯ್ಯ ಅವರು ಮಾತನಾಡಿದರು. ಬಡವರ ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎಂಬ ಕಾರಣಕ್ಕೆ…