ಕಲ್ಯಾಣ ಕರ್ನಾಟಕ ಭಾಗದ 20 ಸಾವಿರ ನೇರನೇಮಕಾತಿಗೆ ಬದ್ದ; ಸಿಎಂ
ಬೆಂಗಳೂರು,ಸೆ,24: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯನ್ನು 10 ದಿನದೊಳಗೆ ರಚಿಸಿ , 20 ಸಾವಿರ ನೇರ ನೇಮಕಾತಿ ಹುದ್ದೆ ಭರ್ತಿಗೆ ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ವಿಧಾನಸಭೆಯಲ್ಲಿ ನಿಯಮ 69ರ ಅಡಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಾರ್ಚ್ ಒಳಗೆ 2000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಅಲ್ಲದೆ ಕಾಯಂ ಕಾರ್ಯದರ್ಶಿ ಯನ್ನು ನಿಯೋಜಿಸುವ ಮೂಲಕ ಎಲ್ಲಾ ಕಾರ್ಯಗಳನ್ನು ಕಾರ್ಯಗತ ಮಾಡಲಾಗುವುದು ಎಂದು ತಿಳಿಸಿದ್ದಾರೆ…