Girl in a jacket

Author kendhooli_editor

ಆರ್ಥಿಕ ದುರ್ಬಲರ ಸಬಲೀಕರಣದಲ್ಲಿ ಸಹಕಾರ ಕ್ಷೇತ್ರದ ಪಾತ್ರ ಮಹತ್ವದ್ದು

ಬೆಂಗಳೂರು,ಜ,07: ಸಹಕಾರ ಕ್ಷೇತ್ರವನ್ನು ಕೇಂದ್ರ ಸರಕಾರವು ಪ್ರಮುಖವೆಂದು ಪರಿಗಣಿಸಿದ್ದು, ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವವರ ಸಬಲೀಕರಣಕ್ಕೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಮಲ್ಲೇಶ್ವರದಲ್ಲಿ ಪ್ರಧಾನ ಕಚೇರಿ ಹೊಂದಿದ್ದು ಅಲ್ಲಿ ನಿರ್ಮಿಸಿರುವ ‘ಸೌರ್ಹಾದ ಸಹಕಾರಿ ಸೌಧ’ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, `ಬ್ಯಾಂಕುಗಳೇ ಸಮಾಜದಲ್ಲಿ ಎಲ್ಲರಿಗೂ ಆರ್ಥಿಕ ನೆರವನ್ನು ನೀಡುವುದು ಸಾಧ್ಯವಿಲ್ಲ. ಅಂತಹ ಕಡೆಗಳಲ್ಲಿ ಸಹಕಾರ ಸಂಘಗಳು ಸಾಲದ ಅಗತ್ಯವಿರುವವರ ನೆರವಿಗೆ ಧಾವಿಸುತ್ತಿದ್ದು, ಅಂಥವರನ್ನು…

ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ: ಸಿ.ಎಂ. ಬೊಮ್ಮಾಯಿ

ಬೆಂಗಳೂರು, ಜ, 07 :ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ಮುಟ್ಟಿದಾಗ ಸರ್ಕಾರದ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೆಎಎಸ್ ಅಧಿಕಾರಿಗಳ ಸಂಘದ ಹೊಸ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ 2022ರ ದಿನಚರಿ ಮತ್ತು ಕ್ಯಾಲೆಂಡರ್ ನ್ನು ಬಿಡುಗಡೆ ಮಾಡಿ ಮಾತನಾಡಿದರು. ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸಲು ಸರ್ವಪ್ರಯತ್ನಗಳನ್ನು ಮಾಡುವ ಕರೆ ನೀಡಿದರು. ಕೋವಿಡ್ ಒಡ್ಡಿರುವ ಸವಾಲುಗಳನ್ನು ಮೆಟ್ಟಿನಿಂತು ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಂತಾಗಬೇಕು. ಗ್ರಾಮ ಮಟ್ಟದಲ್ಲಿ ಸರ್ಕಾರದ…

ಬಿಜೆಪಿ ಉದ್ದೇಶಪೂರ್ವಕವಾಗಿ ಲಾಕ್ ಡೌನ್ ಮಾಡಿದೆ ಡಿಕೆಶಿ ಆರೋಪ

ಬೆಂಗಳೂರು, ಜ.7: ರಾಜ್ಯದಲ್ಲಿ ಲಾಕ್ ಡೌನ್ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿಲ್ಲ ಆದರೂ ಬಿಜೆಪಿ ಉದ್ದೇಶಪೂರ್ವಕವಾಗಿ ವೀಕ್ ಎಂಡ್ ಲಾಕ್ ಡೌನ್ ಜಾರಿ ಮಾಡುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು. ಕೋವಿಡ್ ಹೆಸರಿನಲ್ಲಿ ಸರ್ಕಾರದ ನಿರ್ಬಂಧದ ವಿಚಾರವಾಗಿ ನಮಗೆ ಸಾವಿರಾರು ಕರೆಗಳು ಬರುತ್ತಿದ್ದು, ವೀಕೆಂಡ್ ಕರ್ಫ್ಯೂ ಬಗ್ಗೆ ತಮ್ಮ ನೋವು ಹೇಳಿಕೊಂಡು, ವಿರೋಧ ಪಕ್ಷವಾಗಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳುತ್ತಿದ್ದಾರೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. ರಾಜ್ಯದಲ್ಲಿನ ಪಾಸಿಟಿವಿಟಿ…

ಜೆಡಿಎಸ್ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ದೇವೇಗೌಡರಿಂದ ಚಾಲನೆ

ಬೆಂಗಳೂರು,ಜ,07: ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಹಮ್ಮಿಕೊಂಡಿರುವ’ ಜನತಾ ಜಲಧಾರೆ ‘ ಎಂಬ ವಿಶೇಷ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಚಾಲನೆ ನೀಡಿದರು ಬಳಿಕ ಹೆಚ್.ಡಿ.ಕುಮಾರಸ್ವಾಮಿ ಅವರು ಜನತಾ ಜಲಧಾರೆಯ ಪೂರ್ಣ ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಜನತಾ ಜಲಧಾರೆಯ ಲಾಂಛನ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು,ಕರ್ನಾಟಕ ಅತಿವೃಷ್ಟಿ- ಅನಾವೃಷ್ಟಿಗೆ…

ವಿವಾಹ ವಯಸ್ಸನ್ನು 18 ರಿಂದ 21 ಕ್ಕೆ ಹೆಚ್ಚಿಸುವುದರ ಹಿಂದಿನ ತಾರ್ಕಿಕತೆ

ವಿವಾಹ ವಯಸ್ಸನ್ನು 18 ರಿಂದ 21 ಕ್ಕೆ ಹೆಚ್ಚಿಸುವುದರ ಹಿಂದಿನ ತಾರ್ಕಿಕತೆ ಮಾನಸ,ಬೆಂಗಳೂರು ಐತಿಹಾಸಿಕ ನಿರ್ಧಾರವೊಂದರಲ್ಲಿ, ಮಹಿಳೆಯರ ವಿವಾಹದ ಕಾನೂನುಬದ್ಧ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಮೂಲಕ ಅವರನ್ನು ಪುರುಷರಿಗೆ ಸರಿಸಮಾನವಾಗಿ ತರುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅಂಗೀಕರಿಸಿದೆ. ನೀತಿ ಆಯೋಗದ ಡಾ ವಿಕೆ ಪಾಲ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಆರೋಗ್ಯ ಮತ್ತು ಶಿಕ್ಷಣ ಸಚಿವಾಲಯಗಳ ಕಾರ್ಯದರ್ಶಿಗಳೊಂದಿಗೆ ಜಯಾ ಜೇಟ್ಲಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರವು ರಚಿಸಿದ್ದ…

ಅರಗಜ್ಞಾನೇಂದ್ರ ಹೇಳಿಕೆಗೆ ಸಿದ್ದು ತಿರುಗೇಟು

ಬೆಂಗಳೂರು,ಜ,06: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೋವಿಡ್ ಹಿನ್ನೆಲೆ ಇದಕ್ಕೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು ಈ ಬೆನ್ನಲ್ಲೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಗೃಹ ಸಚಿವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾವು ನಿಯಮಬದ್ಧವಾಗೇ ಪಾದಯಾತ್ರೆ ಮಾಡುತ್ತೇವೆ. ಅವರು ಬೇಕಾದ್ರೆ ಕ್ರಮಕೈಗೊಳ್ಳಲಿ. ಲೆಟ್ ದೆಮ್ ಟೇಕ್ ಆಕ್ಷನ್. ಇದಕ್ಕೆ ನಾವು ಹೆದರುವುದಿಲ್ಲ ಎಂದು…

ಕಾಂಗ್ರೆಸ್ ಪಾದಾಯಾತ್ರೆಗೆ ಅನುಮತಿ ಇಲ್ಲ; ಅರಗ ಜ್ಞಾನೇಂದ್ರ

ಬೆಂಗಳೂರು,ಜ,06: ಯಾವದೇ ಕಾರಣಕ್ಕೂ ಕಾಂಗ್ರೆಸ್ ಪಾದಯಾತ್ರಗೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಒಂದು ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಕ್ರಮ ತಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ಧರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಡಿಕೆ ಶಿವಕುಮಾರ್ ಮಂತ್ರಿಯಾಗಿ ಸರ್ಕಾರ ನಡೆಸಿದವರು. ಅವರೇ ಈಗ ಕೋವಿಡ ನಿಯಮ ಉಲ್ಲಂಘಿಸಿದರೆ ಹೇಗೆ. ಅವರೇ ಹೀಗೆ ಮಾತನಾಡಿದರೇ ಹೇಗೆ. ಕಾಂಗ್ರೆಸ್ ವಿವೇಚನೆ ಮಾಡಬೇಕು. ಕಾಂಗ್ರೆಸ್ ಪಕ್ಷದವರಿಗೆ ಒಂದು ನಿಯಮ ಬೇರೆಯವರಿಗೆ ಒಂದು ನಿಯಮ…

ರಾಮಮಂದಿರದ ಸುತ್ತ ರಿಯಲ್ ಎಸ್ಟೇಟ್ ದಂಧೆ

ರಾಮಮಂದಿರದ ಸುತ್ತ ರಿಯಲ್ ಎಸ್ಟೇಟ್ ದಂಧೆ ಅಯೋಧ್ಯೆಯ ಬಾಬರಿ ಮಸೀದಿ-ರಾಮಜನ್ಮಭೂಮಿಯ ೨.೭೭ ಎಕರೆಗಳಷ್ಟು ವಿವಾದಿತ ಜಮೀನನ್ನು ರಾಮಮಂದಿರ ಕಟ್ಟಿಕೊಳ್ಳಲು ಸುಪ್ರೀಮ್ ಕೋರ್ಟು ಹಿಂದೂಗಳಿಗೆ ಒಪ್ಪಿಸಿತ್ತು. ಸುಪ್ರೀಮ್ ತೀರ್ಪಿನ ಅನ್ವಯ ರಚಿಸಲಾದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ೨.೭೭ ಎಕರೆಗಳ ಸುತ್ತಮುತ್ತ ಈವರೆಗೆ ೭೦ ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡಿದೆ .ಈ ಎರಡು ವರ್ಷಗಳಲ್ಲಿ ಅಯೋಧ್ಯೆಯ ರಿಯಲ್ ಎಸ್ಟೇಟ್ ದಂಧೆ ಅತಿಶಯವಾಗಿ ಗರಿಗೆದರಿದೆ. ಭವ್ಯ ರಾಮಮಂದಿರದ ಸುತ್ತಮುತ್ತಲ ಜಮೀನಿನ ಖರೀದಿ ದರ ಆಕಾಶಕ್ಕೇರುವ ನಿರೀಕ್ಷೆ ಹೊಂದಿರುವ ಖಾಸಗಿ ಖರೀದಿದಾರರೂ ಈ…

ವಿಜಯನಗರ ಕಾಲದ ಶೌಚಾಲಯಗಳು

ವಿಜಯನಗರ ಕಾಲದ ಶೌಚಾಲಯಗಳು ಆಧುನಿಕ ಯುಗದಲ್ಲಿ ನೈರ್ಮಲ್ಯ ಮತ್ತು ಶುಚಿತ್ವಕ್ಕೆ ವಿಶೇಷ ಆದ್ಯತೆಯನ್ನು ನೀಡುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಅದರಲ್ಲೂ ಬಯಲು ಬಹಿರ್ದೆಸೆಯನ್ನು ನಿರ್ಮೂಲ ಮಾಡಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ಮಾಡುತ್ತಿವೆ. ಸ್ವಚ್ಚ ಭಾರತ ನಿರ್ಮಾಣಕ್ಕೆ ಸುಸ್ಥಿರ ಆರೋಗ್ಯ ಮುಖ್ಯ, ಇದಕ್ಕೆ ಸ್ವಚ್ಚ ಪರಿಸರ ಅತ್ಯಗತ್ಯವೆಂಬುದನ್ನು ನಿತ್ಯವೂ ಬಿತ್ತರಿಸುತ್ತಿದೆ. ಈ ಪರಿಪಾಠ ಇಂದು ನಿನ್ನೆಯದಲ್ಲ. ಶೌಚಾಲಯದ್ದೂ ಒಂದು ಇತಿಹಾಸವೇ. ಭಾರತದ ಮಟ್ಟಿಗೆ ನಗರೀಕರಣವೆಂಬುದು ಸಿಂಧೂ ನಾಗರೀಕತೆಯಷ್ಟೇ ಪ್ರಾಚೀನ. ಅಂದಿನ ಜನರು ನೈರ್ಮಲ್ಯಕ್ಕೆ ನೀಡಿದ ಮಹತ್ವ ಅನನ್ಯವಾದದ್ದು. ಅಂತೆಯೇ…

ಆಂಧ್ರ ಬಿಜೆಪಿಯಲ್ಲೀಗ ಹೆಂಡದ್ದೆ ಮಾತು

ಕುಡಿತದ ವಿರುದ್ಧ ಮಹಾತ್ಮ ಗಾಂಧೀಜಿ ಸಮರವನ್ನೇ ಸಾರಿದ್ದರು. ಸ್ವಾತಂತ್ರ್ಯಾನಂತರ ಭಾರತವನ್ನು ಆಳಿದ ಯಾವ ಪಕ್ಷವೂ ಗಾಂಧಿ ಶುರುಮಾಡಿದ್ದ ಸಮರವನ್ನು ಮುಂದುವರಿಸಲಿಲ್ಲ. ಈಗ ಆಡಳಿತದ ಭಾರ ಹೊತ್ತಿರುವ ಬಿಜೆಪಿಯೂ ಈ ವಿಚಾರದಲ್ಲಿ ಸಂಬಂಧವೇ ಇಲ್ಲ ಎಂಬಂತೆ ಕೂತಿದೆ. ಏತನ್ಮಧ್ಯೆ ಆಂಧ್ರ ಪ್ರದೇಶ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು, ಪಕ್ಷ ಅಧಿಕಾರಕ್ಕೆ ಬಂದರೆ ಮದ್ಯದ ದರವನ್ನು ಗಣನೀಯವಾಗಿ ಇಳಿಸುವ ಮಾತಾಡಿದ್ದಾರೆ. ಖಾದ್ಯತೈಲ, ಪೆಟ್ರೋಲು ದರ ಅವರ ನಜರಿನಲ್ಲಿ ಇಲ್ಲ. ಆಂಧ್ರ ಬಿಜೆಪಿಯಲ್ಲೀಗ ಹೆಂಡದ್ದೆ ಮಾತು ಭಾರತೀಯ ಜನತಾ ಪಕ್ಷದ…

ಆರ್.ಎನ್.ಸುದರ್ಶನ್‌ಚಿತ್ರರಂಗ ಪ್ರವೇಶಿಸಿದ ‘ವಿಜಯನಗರದ ವೀರಪುತ್ರ‘

ಆರ್.ಎನ್.ಸುದರ್ಶನ್‌ಚಿತ್ರರಂಗ ಪ್ರವೇಶಿಸಿದ ‘ವಿಜಯನಗರದ ವೀರಪುತ್ರ‘ ಆರ್.ನಾಗೇಂದ್ರರಾಯರು ತಮ್ಮ ಸ್ವಂತ ನಿರ್ಮಾಣ ಸಂಸ್ಥೆ ‘ಆರ್.ಎನ್.ಆರ್.ಪಿಕ್ಚರ‍್ಸ್‘ ಲಾಂಛನದಲ್ಲಿ ತೆರೆಗೆ ತಂದ ಕಪ್ಪು ಬಿಳುಪು ಚಿತ್ರ ‘ವಿಜಯನಗರದ ವೀರಪುತ್ರ‘ ೧೯೬೧ರಲ್ಲಿ ತೆರೆಕಂಡಿತು. ನಾಗೇಂದ್ರರಾಯರ ಪುತ್ರ ಆರ್.ಎನ್.ಸುದರ್ಶನ್ ಚಿತ್ರರಂಗಕ್ಕೆ ಪದರ್ಪಿಸಿದ ಚಿತ್ರವೆಂಬ ಹೆಗ್ಗಳಿಕೆಗೆ ಚಿತ್ರ ಪಾತ್ರವಾಗಿದೆ. ಸ್ವತಃಆರ್.ನಾಗೇಂದ್ರರಾಯರೇ ನಿರ್ದೇಶಿಸಿದ ಈ ಚಿತ್ರಕೆ ಅವರ ಮತ್ತೊಬ್ಬ ಪುತ್ರ ಆರ್.ಎನ್.ಕೃಷ್ಣಪ್ರಸಾದರು ವಿ.ಮನೋಹರ್‌ಅವರೊಂದಿಗೆ ಸೇರಿ ಛಾಯಾಗ್ರಹಣ ನೀಡಿದ್ದಾರೆ. ಎನ್.ಲಕ್ಷ್ಮಿನಾರಾಯಣ್ ಹಾಗೂ ವಿ.ಸೋಮಶೇಖರ್ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜಗುರುವರಾಯನ ಪಾತ್ರದಲ್ಲಿ ಆರ್.ನಾಗೇಂದ್ರರಾವ್, ಆತನ ಪುತ್ರ…

ಓಮಿಕ್ರಾನ್ ಸೋಂಕು: ಅಂತರರಾಜ್ಯ ಗಡಿ ಬಂದ್ ಇಲ್ಲ

ಬೆಳಗಾವಿ,ಜ,05: ಕೊರೋನಾ ಮತ್ತು ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಇಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಂದಿಳಿದಾಗ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ…

ರಾಜ್ಯಾದ್ಯಂತ ವಾರಾಂತ್ಯ ಕರ್ಪ್ಯೂ ಜಾರಿ

ಬೆಂಗಳೂರು, ಜ,4: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಅನ್ನು ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಮೊದಲಿನಂತೆಯೇ ಮುಂದುವರಿಯುತ್ತದೆ ಎಂದಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ…

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ

*36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ ಕಲಬುರಗಿ, ಜ.04:ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ,ಲೇಖನ,ಅಂಕಣಗಳ ಮೌಲ್ಯ ದೊಡ್ಡದು.ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದ ಅವಧಿಯೊಳಗೆ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ಕಾರ್ಯನಿರತ…

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ: ಸಿಎಂ

ಕಲ್ಬುರ್ಗಿ, ಜ, 04 :ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ಕೆಕೆಆರ್ ಡಿಬಿ ಬೋರ್ಡ್ ರಚನೆಯಾಗದಿರುವ ಬಗ್ಗೆ ಪ್ರತಿಕ್ರಯಿಸಿ…

ಕಲೆಗಳಲ್ಲಿ ವಿಶೇಷವಾದ ಕಲೆ ನಾಟಕ ಕಲೆ: ಕವಿ ಬಿ.ಆರ್‌ ಲಕ್ಷ್ಮಣ್‌ರಾವ್‌

ಬೆಂಗಳೂರು ಜ, 04: ಎಲ್ಲಾ ಕಲೆಗಳ ಸಮ್ಮಿಲನವನ್ನು ಹೊಂದಿರುವ ವಿಶೇಷವಾದ ಕಲೆ ನಾಟಕ ಕಲೆ. ಗ್ರಾಮಾಂತರ ಪ್ರದೇಶಗಳಿಗೂ ಹವ್ಯಾಸಿ ನಾಟಕ ಕಲೆಯನ್ನು ಪಸರಿಸುವ ನಿಟ್ಟಿನಲ್ಲಿ ಇತ್ತೀಚಿನ ಬೆಳವಣಿಗೆಗಳು ಸ್ವಾಗತಾರ್ಹ ಎಂದು ಖ್ಯಾತ ಕವಿ ಲಕ್ಷ್ಮಣ್‌ ರಾವ್‌ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಐಶ್ವರ್ಯ ಕಲಾನಿಕೇತನ ಸಂಸ್ಥೆ ಆಯೋಜಿಸಿದ್ದ ಆಷಾಢದ ಒಂದು ದಿನ ನಾಟಕ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲಾ ಕಲೆಗಳನ್ನು ಮಿಳಿತಗೊಂಡಂತಹ ನಾಟಕ ಕಲೆ ಬಹಳ ಪ್ರಮುಖವಾದದ್ದು. ಕವಿಯಾಗಿ ನಾನು ಪ್ರಸಿದ್ದಿಯಾಗಿದ್ದರೂ ಒಂದೆರಡು…

ಸಿಎಂ ಸಮ್ಮುಖದಲ್ಲೇ ಸಚಿವ ಸಂಸದರ ಗಲಾಟೆ

ರಾಮನಗರ, ಜನವರಿ 3: ರಾಮನಗರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇಳೆ ಸಿಎಂ ಬಸವರಾಜ ಬೊಮ್ಮಯಿ ಸಮ್ಮುಖದಲ್ಲಿ ಸಚಿವ, ಸಂಸದರ ನಡುವೆ ಗಲಾಟೆ ನಡೆದಿದೆ. ರಾಮನಗರದಲ್ಲಿ ಕಾರ್ಯಕ್ರಮ ವೇಳೆ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮತ್ತು ಸಂಸದ ಡಿ.ಕೆ.ಸುರೇಶ್ ಮಧ್ಯೆ ವಾಕ್ಸಮರ ಉಂಟಾಗಿದ್ದು, ಸಚಿವ ಡಾ.ಅಶ್ವತ್ಥ್ ನಾರಾಯಣ ಭಾಷಣಕ್ಕೆ ಡಿ.ಕೆ. ಸುರೇಶ್ ತೀವ್ರ ವಿರೋಧ ವ್ಯಕ್ತ ನಮ್ಮ ಕಾಲದಲ್ಲೇ ಅಡಿಗಲ್ಲು, ನಮ್ಮ ಕಾಲದಲ್ಲೇ ಉದ್ಘಾಟನೆ’ ‘ನಮ್ಮ ಸರ್ಕಾರದಲ್ಲಿ ಬೇರೆ ಸರ್ಕಾರದ ರೀತಿ ಅಲ್ಲ’…

ಸಿದ್ದರಾಮಯ್ಯ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ!

ಬೆಂಗಳೂರು,ಜ,03: ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಸೋಮವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಿಸ್ಟರ್ ಸುಳ್ಳಯ್ಯ ಎಂದು ಕರೆದಿದಿದ್ದಾರೆ. ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುತ್ತಿರುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ…

ಕೋವಿಡ್ ತೊಲಗಿಸಲು ಪಣ ತೋಡೋಣ: ಸಿಎಂ

ಬೆಂಗಳೂರು, ಜ, 03: 2022ನ್ನು ಆರೋಗ್ಯಭರಿತ ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ತೋಡೋಣ. ಕೋವಿಡ್ ವಿರುದ್ದ ಒಟ್ಟಾಗಿ ಸಮರವನ್ನು ಸಾರಿ ತೊಲಗಿಸಲು ಪಣ ತೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಅವರು ಇಂದು ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ 15-18 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಕೋವಿಡ್…

1 53 54 55 56 57 122
Girl in a jacket