23ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ: ಡಾ. ಅಶ್ವತ್ಥನಾರಾಯಣ
ಬೆಳಗಾವಿ,ಡಿ,16: ಇಲ್ಲಿನ ಉದ್ಯಮ್ ಬಾಗ್ ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜತೆ ಶುಕ್ರವಾರ ಇಲ್ಲಿನ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದರು. ಓಲಾ, ಎಚ್ಪಿ ಸೇರಿದಂತೆ 34 ಕಂಪನಿಗಳು…