ಹಿರಿಯ ಕಲಾವಿದೆ ಭಾರ್ಗವಿ ನಾರಾಣ್ ನಿಧನ
ಬೆಂಗಳೂರು,ಫೆ,14:ಹಿರಿಯ ನಟಿ ಭಾರ್ಗವಿ ನಾರಾಯಣ್ (84)ಇಂದು ಸಂಜೆ ನಿಧನವಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ 7.30ಕ್ಕೆ ನಿಧನ ಹೊಂದಿದ್ದಾರೆ. ಎರಡು ಕನಸು, ಪಲ್ಲವಿ ಅನುಪಲ್ಲವಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಖ್ಯಾತ ರಂಗಭೂಮಿ ಹಿರಿಯ ಕಲಾವಿದೆ, ದೂರದರ್ಶನ ಧಾರವಾಹಿಗಳ ಮೌಲ್ಯಯುತ ಪಾತ್ರಗಳ ನಿರ್ವಹಣೆಯ ಅನುಭವಿಕ ಪಾತ್ರಧಾರಿ ಎಂದೇ ಪ್ರಸಿದ್ಧರಾಗಿರುವ ಭಾರ್ಗವಿ ನಾರಾಯಣ್ ಅವರು ಫೆಬ್ರುವರಿ 4, 1938ರ ವರ್ಷದಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ಡಾ. ಎಂ. ರಾಮಸ್ವಾಮಿ, ತಾಯಿ ನಾಮಗಿರಿಯಮ್ಮ. ಮಹಾರಾಣಿ ಕಾಲೇಜಿನಿಂದ ಬಿ.ಎಸ್ಸಿ.…




















