Girl in a jacket

Author kendhooli_editor

ಬೆಳ್ಳಿಮೋಡದ ಆಚೆಯಿಂದ ಓಡಿಬಂದ ಮಿನುಗುತಾರೆ

ಆ ಮೊಗವು ಎಂಥಾ ಚಲುವು ಮನವ ಸೆಳೆವ ಬಂಗಾರದ ಹೂವು        ಚಿ.ಉದಯ ಶಂಕರ್‌ ಅವರು  ಬರೆದ ಈ ಗೀತೆಯೇ ಕಲ್ಪನ ಅವರ ಚಲುವಿಗೆ ಸಂಕೇತದಂತಿದೆ. ಕನ್ನಡ ಬೆಳ್ಳಿತೆರೆಯ ಮಿನುಗುತಾರೆ ಕಲ್ಪನಾ ಅವರು ಇಂದು ಬದುಕಿದ್ದರೆ ಎಂಭತ್ತು ವಸಂತಗಳ ವರ್ಷಾಚರಣೆಯನ್ನು ಇದೇ ಜೂಲೈ ೧೮ಕ್ಕೆ ಆಚರಿಸಿಕೊಳ್ಳುತ್ತಿದ್ದರು. ಕಲ್ಪನಾ ಮೂಲತಹ ಮಂಗಳೂರು ಮೂಲದವರು.ಇವರ ತಂದೆ ಕೃಷ್ಣಮೂರ್ತಿ ಮತ್ತು ತಾಯಿ ಜಾನಕಮ್ಮ.    ತನ್ನ ದುರಂತದ ಗಾಥೆಗಳಲ್ಲಿ ಉತ್ತರದ ಮೀನಾಕುಮಾರಿಗೆ ಹೋಲಿಸಬಹುದಾದ ಈ ಮಹಾನಟಿ ಒಬ್ಬ ನಟಿಯಾಗಬೇಕು ಎಂದು ಕನಸು ಕಂಡಿದ್ದು ತೆಲುಗಿನ…

ಬೆಂಗಳೂರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್‌ನಲ್ಲಿ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ

ಬೆಂಗಳೂರು, ಜೂ,23-ಮಾನವ ಆರೋಗ್ಯದ ಪುನರುತ್ಥಾನ ಮತ್ತು ಶಾಶ್ವತ ಜೀವನ ಶೈಲಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಭಾರತ ಸರ್ಕಾರದ ಆಯುಷ್ ಸಚಿವಾಲಯದ ಅಧೀನದಲ್ಲಿರುವ ಅತ್ಯಂತ ಗೌರವಾನ್ವಿತ ಸ್ವಾಯತ್ತ ಸಂಸ್ಥೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್ “ಯೋಗ ಸಂಗಮ 2025”  ಆಯೋಜಿಸಿತ್ತು. ಈ  ಕಾರ್ಯಕ್ರಮವು 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಯ ಸಂದರ್ಭದಲ್ಲಿ “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬ ಕೇಂದ್ರ ಕಲ್ಪನೆಯಡಿ ಆಯೋಜಿಸಲಾಯಿತು. ಪ್ರೊ. ಸಯ್ಯದ್ ಶಾಹ್ ಆಲಂ ಅವರ ಪೂರ್ಣದೃಷ್ಟಿಯ ನಾಯಕತ್ವದಲ್ಲಿ ಈ ಕಾರ್ಯಕ್ರಮವು…

ಬಯೋ ಸಿಎನ್‌ಜಿ ಪ್ಲಾಂಟ್‌ಗೆ ಕಾರ್ಬನ್‌ ಕ್ರೆಡಿಟ್ಸ್‌ ಬಳಕೆ * ಕೃಷಿ ಮಾರುಕಟ್ಟೆ ಸಚಿವರೊಂದಿಗೆ ಕೊಸ್ಯಾಂಬೊ ಅಧಿಕಾರಿ ಚರ್ಚೆ

ಬೆಂಗಳೂರು, ಜೂ,23- ತರಕಾರಿ ಮತ್ತು ಇತರ ತ್ಯಾಜ್ಯ ಬಳಕೆ ಮಾಡಿ ಬಯೋ ಸಿಎನ್‌ಜಿ ಪ್ಲಾಂಟ್‌ಗಳ ಸ್ಥಾಪನೆಗೆ ಕೇಂದ್ರ ಸರ್ಕಾರದ ಕಾರ್ಬನ್‌ ಕ್ರೆಡಿಟ್ಸ್‌ ಅನುದಾನ ಬಳಕೆ ಬಗ್ಗೆ ದೆಹಲಿಯ ಕೊಸ್ಯಾಂಬೋ ( ಕೌನ್ಸಿಲ್‌ ಆಫ್‌ ಸ್ಟೇಟ್‌ ಅಗ್ರಿಕಲ್ಟರ್‌ ಮಾರ್ಕೆಟಿಂಗ್‌ ಡಿಪಾರ್ಟ್‌ಮೆಂಟ್‌) ವ್ಯವಸ್ಥಾಪಕ ನಿರ್ದೇಶಕ ಡಾ. ಜೆ.ಎಸ್‌. ಯಾದವ್‌ ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸೋಮವಾರ ಭೇಟಿ ಮಾಡಿ ಚರ್ಚಿಸಿದರು. ರಾಜ್ಯದಲ್ಲಿ ಬೆಂಗಳೂರಿನ ದಾಸನಪುರ, ಮೈಸೂರು ಮತ್ತು ಕೋಲಾರಗಳಲ್ಲಿ ಈಗಾಗಲೇ ಬಯೋ…

ರಾಜ್ಯ ಸರ್ಕಾರದ ವಿರುದ್ದ ಜನಾಂದೋಲನಕ್ಕೆ ಬಿಜೆಪಿ ತೀರ್ಮಾನ : ಬಸವರಾಜ ಬೊಮ್ಮಾಯಿ

ಹಾವೇರಿ,ಜೂ,23-ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಜನಾಂದೋಲನ ಮಾಡಬೇಕೆಂದು ಬಿಜೆಪಿ ತೀರ್ಮಾನ ಮಾಡಿದೆ. ಜನರ ವಿಶ್ವಾಸದೊಂದಿಗೆ ಯಾವ ಪ್ರದೇಶದಲ್ಲಿ ಯಾವ ವಿಷಯ ತೆಗೆದುಕೊಂಡು ಜನಾಂದೋಲನ ರೂಪಿಸಬೇಕು ಎಂದು ಪಕ್ಷದ ಪ್ರಮುಖರ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿ ಶೂನ್ಯವಾಗಿದೆ. ಅಧಿಕಾರಿಗಳ ವರ್ಗಾವಣೆಯಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ಸ್ಥಳೀಯ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದ ವರಗೆ ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ. ಪ್ರಾಮಾಣಿಕ…

ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟಿಸಿದ ಸಿಎಂ

ರಾಯಚೂರು ಜೂ 23- ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ ದಶಮಾನೋತ್ಸವ ಮತ್ತು 936 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ…

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.23-“ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು.ಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸುರೇಶ್ ಅವರನ್ನು ಇಡಿ ವಿಚಾರಣೆ ಕರೆದಿರುವ ಬಗ್ಗೆ ಕೇಳಿದಾಗ, “ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು…

ವಸತಿ ಇಲಾಖೆ ಅಕ್ರಮ ಮರೆಮಾಚಲು ಹೆಚ್.ಕೆ. ಪಾಟೀಲ್ ಪತ್ರ ತೇಲಿ ಬಿಡಲಾಗಿದೆ!- ಹೆಚ್ ಡಿಕೆ ಆರೋಪ

ಬೆಂಗಳೂರು,ಜೂ,22-ವಸತಿ ಇಲಾಖೆಯಲ್ಲಿ ಕೇಳಿ ಬರುತ್ತಿರುವ ಆಕ್ರಮಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಸಚಿವ ಹೆಚ್.ಕೆ. ಪಾಟೀಲ್ ಬರೆದಿರುವ ಪತ್ರವನ್ನು ತೇಲಿ ಬಿಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಮಂಡ್ಯದಲ್ಲಿ ಸುಸಜ್ಜಿತ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.ವಸತಿ ಇಲಾಖೆಯಲ್ಲಿ ಏನೆಲ್ಲಾ ಅಕ್ರಮಗಳು ನಡೆದಿವೆ ಎಂಬುದನ್ನು ಜನರು ಹಾದಿಬೀದಿಗಳಲ್ಲಿ ಮಾತನಾಡುತ್ತಿದ್ದಾರೆ. ಹಣ ಕೊಟ್ಟವರಿಗೆ ಮನೆ ಹಂಚಿಕೆ ಮಾಡಲಾಗಿದೆ ಎಂದು ಸ್ವತಃ ಕಾಂಗ್ರೆಸ್ ಪಕ್ಷದ ಶಾಸಕರು,…

ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ವೀರಶೈವ ಲಿಂಗಾಯತರ ಕೊಡುಗೆ ಅಪಾರ:ಖಂಡ್ರೆ

ಬೆಂಗಳೂರು, ಜೂ.22- ಆಧುನಿಕ ಕರ್ನಾಟಕ, ಆ ಮೂಲಕ ಆಧುನಿಕ ಭಾರತ ನಿರ್ಮಾಣಕ್ಕೆ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಅಪಾರವಾದ್ದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಕರ್ನಾಟಕ ವೀರಶೈವ ಲಿಂಗಾಯಿತ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಜಾತಿ, ಧರ್ಮದವರಿಗೂ ಆಶ್ರಯ, ಅನ್ನ, ಅಕ್ಷರದ ಜೊತೆಗೆ ಉತ್ತಮ ಸಂಸ್ಕಾರ ನೀಡಿ ಸಮಾಜದ ಮುಖ್ಯವಾಹಿನಿಗೆ ತಂದ ಕೀರ್ತಿ ವೀರಶೈವ ಲಿಂಗಾಯತ ಮಠ ಮಾನ್ಯಗಳಿಗೆ ಸಲ್ಲುತ್ತದೆ…

ಸತ್ಯ ಹೇಳಿದ ನಾಯಕರನ್ನು ಕಾಂಗ್ರೆಸ್ ಬೆದರಿಸುತ್ತಿದೆ- ವಿಜಯೇಂದ್ರ

ನೆಲಮಂಗಲ, ಜೂ,22-ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರು ಬಿ.ಆರ್.ಪಾಟೀಲ್ ಗಂಭೀರವಾದ ರಾಜ್ಯದ ಪರಿಸ್ಥಿತಿ ಬಗ್ಗೆ ಬೆಳಕು ಚಲ್ಲಿದ್ದಾರೆ . ಬಡವರಿಗೆ ಮನೆಗಳನ್ನು ಕೊಡಬೇಕಿತ್ತು ಅಲ್ಲಿಯೂ ಸಹ ಭ್ರಷ್ಟಾಚಾರ ರಾಜ್ಯದ ಜನತೆ ಮುಂದೆ ಬಿಚ್ಚಿಟ್ಟಿದ್ದಾರೆ . ಹಿರಿಯ ನಾಯಕರಾದ ಬಿ.ಆರ್ ಪಾಟೀಲ್ ರವರನ್ನ ಆಡಳಿತ ಪಕ್ಷದ ನಾಯಕರು ಬೆದರಿಸುವ ಕೆಲಸ ಮಾಡುತ್ತಿದ್ದಾರೆ .ಕರ್ನಾಟಕ ರಾಜ್ಯದಲ್ಲಿ ಈ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಬಡವರಿಗೆ ರೈತರಿಗೆ ಶಾಪವಾಗಿ ಪರಿಣಮಿಸಿದೆ. ಕಾಂಗ್ರೆಸ್ ಸರ್ಕಾರ ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ ಯಾವುದೇ ಅನುಕೂಲ ಇಲ್ಲ. ಹಿಂದೆ ಯಡಿಯೂರಪ್ಪನವರ…

ಮುಂಬೈನಲ್ಲಿ ಕ್ಯಾಬ್‌ನಲ್ಲಿ ಸಂಚರಿಸುತ್ತಿದ್ದ ಪೈಲಟ್‌ಗೆ ಕಿರುಕುಳ-ಮೂವರ ವಿರುದ್ಧ ದೂರು ದಾಖಲು

ಮುಂಬೈ,ಜೂ.೨೨- ಕೆಲಸ ಮುಗಿಸಿ ತೆರಳೂತ್ತಿದ್ದ ಮಹಿಳಾ ವಿಮಾನಯಾನ ಪೈಲಟ್‌ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಉಬರ್ ಕ್ಯಾಬ್ ಚಾಲಕ ಮತ್ತು ಇತರ ಇಬ್ಬರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಕಳೆದ ಗುರುವಾರ ರಾತ್ರಿ ೧೧.೧೫ ರ ಸುಮಾರಿಗೆ ಮಹಿಳೆ ದಕ್ಷಿಣ ಮುಂಬೈನಿಂದ ಘಾಟ್ರೋಪರ್‌ನಲ್ಲಿರುವತನ್ನ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಿಳೆಯ ಪತಿ ನೌಕಾಪಡೆಯ ಅಧಿಕಾರಿ, ಆದರೆ ಅವರಿಗೆ ಇನ್ನೂ ಸರ್ಕಾರಿ ವಸತಿ ಸಿಗದ ಕಾರಣ, ಮಹಿಳೆ ಘಾಟ್ರೋಪರ್‌ನಲ್ಲಿ ವಾಸಿಸುತ್ತಿರು.ಗುರುವಾರ…

ಎಚ್.ಕೆ. ಪಾಟೀಲರ ಪತ್ರಕ್ಕೆ ಸಿಎಂ ಸ್ಪಂದನೆ ಏನು:ಬಸವರಾಜ ಬೊಮ್ಮಾಯಿ

ಗದಗ,ಜೂ,22-ಅಕ್ರಮ ಗಣಿ ಪ್ರಕರಣಗಳ ಕುರಿತು ಸರ್ಕಾರದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕಾನೂನು ಸಚಿವ ಎಚ್.ಕೆ. ಪಾಟೀಲ ಅವರು ಬರೆದಿರುವ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಗೆ ಸ್ಪಂದಿಸುತ್ತಾರೆ ಎನ್ನುವುದು ರಾಜ್ಯದ ಜನರ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗ ಶಹರದಲ್ಲಿ ಎಚ್.ಎಸ್.ಎಲ್. ಟೈಲ್ ಮತ್ತು ಗ್ರಾನೈಟ್ ಶೋ ರೂಮ್ ಉದ್ಘಾಟಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್. ಕೆ. ಪಾಟೀಲರು ಗಣಿಯಲ್ಲಿ ನೋಂದಾಗಿರುವ ಕೇಸ್‌ಗಳ ಬಗ್ಗೆ ಶೇ 90 ಕೇಸ್‌ಗಳು…

ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ

ಬೆಂಗಳೂರು, ಜೂ 21-ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ದಾವಿಸಿದೆ.ರಾಜ್ಯದಲ್ಲಿ ಮಾವಿನ‌ ಬೆಲೆ ಕುಸಿತದ ಹಿನ್ನಲೆ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ ಗಳಂತೆ ಒಟ್ಟು‌ 4 ರೂ ವೆತ್ಯಾಸ ಪಾವತಿಸಿ ಮಾರುಕಟ್ಟೆ ಚೈತನ್ಯಕ್ಕೆ ಕ್ರಮಕೈಗೊಳ್ಳಲು ಸಿದ್ದತೆ ನಡೆಸಿವೆ. ಇಂದು ರಾಜ್ಯ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ವಿಡಿಯೋ‌ ಸಂವಾದದ ಮೂಲಕ…

ಮನೆ ಹಂಚಿಕೆಯಲ್ಲಿ ಲಂಚ, ಬಿ,ಆರ್.ಪಾಟೀಲ್‌ಹೇಳಿಕೆ ಖಂಡಿಸಿದ ಡಿಕೆಶಿ

ಬೆಂಗಳೂರು,ಜೂ,೨೧-ವಸತಿಇಲಾಖೆಯಲ್ಲಿ ಮನೆ ಹಂಚಿಕೆ ಮಾಡಲು ಲಂಚ ನೀಡಿದವರಿಗೆ ಮಾತ್ರ ನೀಡಲಾಗುತ್ತದೆ ಎಂಬ ಶಾಸಕ ಬಿ.ಆರ್.ಪಾಟೀಲ್ ಅವರ ಹೇಳಿಕೆಯನ್ನುಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಖಂಡಿಸಿದ್ದಾರೆ. ರಾಜ್ಯ ನೀತಿಆಯೋಗದ ಉಪಧ್ಯಕ್ಚರಾದ ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಸಚಿವ ಜಮೀರ್ ಅಹಮದ್ ಕಾರ್ಯದರ್ಶಿ ಸರ್ಪರಾಜ್‌ಖಾನ್ ಅವರೊಡನೆ ನಡೆಸಿದ ಸಂಭಾಷಣೆ ಆಡಿಯೋ ಕ್ಲಿಪನಲ್ಲಿ ತಮ್ಮ ಕ್ಷೇತ್ರದ ಹಳ್ಳಿಗಳಲ್ಲಿ ಮನೆ ಹಂಚಿಕೆನಡೆದಿದೆಎನ್ನಲಾಗಿದೆ ಲಂಚದ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ್ದ ಕಾರ್ಯದರ್ಶಿಯನ್ನುಪ್ರಶ್ನಿಸಿದ್ದಾರೆಮನೆ ಹಂಚಿಕೆಯ ಲಂಚದ ಆರೋಪ ಮಾಡಿ ತಮ್ಮದೆಪಕ್ಷದ ಸರ್ಕಾರಕ್ಕೆ ಮುಜುಗರ ಉಂಟು ಮಾಡಿದ್ದರು. ಈ ಕುರಿತು ಇಂದು ಸುದ್ದಿಗಾರರೊಂದಿಗೆ…

ಪರೀಕ್ಷಾ ಫಲಿತಾಂಶದ ಜೊತೆ ಸಾಮಾಜಿಕ ಜೀವನದ ಫಲಿತಾಂಶವೂ ಅಷ್ಟೇ ಮುಖ್ಯವಾಗಲಿ: ಕೆ.ವಿ.ಪ್ರಭಾಕರ್ ಕರೆ

ಮಲೆಮಹದೇಶ್ವರ ಬೆಟ್ಟೆ ಜೂ 21-ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು. ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ ಮತ್ತು ನೀವು ಪಟ್ಟ ಪರಿಶ್ರಮ ಮೂರೂ ಬೆರೆತ ಮಿಶ್ರಣ. ಇಂದು ಪ್ರತಿಭಾ ಪುರಸ್ಕಾರ ಸ್ವೀಕರಿಸುತ್ತಿರುವ ಎಲ್ಲಾ ಮಕ್ಕಳಿಗೂ ಎಲ್ಲಾ ಪೋಷಕರ ಪರವಾಗಿ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇವತ್ತು ಶಿಕ್ಷಣ ವ್ಯವಸ್ಥೆ ಹೇಗಾಗಿದೆ, ಎಷ್ಟು ದುಬಾರಿ ಆಗಿದೆ‌ ಎಂದರೆ, ಪೋಷಕರು ಸದಾ ಮಕ್ಕಳ ಶಿಕ್ಷಣದ ಬಗ್ಗೆಯೇ…

2027ಕ್ಕೆ ಕೋಲಾರಕ್ಕೆ ಎತ್ತಿನಹೊಳೆ ನೀರು ಹರಿಸುವುದು ಸರ್ಕಾರದ ಗುರಿ: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.21-“2027ರ ಒಳಗಾಗಿ ಕೋಲಾರ ಭಾಗಕ್ಕೆ ಎತ್ತಿನ ಹೊಳೆ ನೀರನ್ನು ಹರಿಸಬೇಕು ಎಂಬುದು ನಮ್ಮ ಸರ್ಕಾರದ ಸಂಕಲ್ಪ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.”ಈ ಯೋಜನೆಗೆ ಅರಣ್ಯ ಇಲಾಖೆಗೆ ಸಂಬಂಧಿತ ಸಮಸ್ಯೆಗಳು, ಭೂ ಸ್ವಾಧೀನ ಪ್ರಕ್ರಿಯೆ, ಬೈರಗೊಂಡಲು, ಲಕ್ಕೇನಹಳ್ಳಿಯಲ್ಲಿ ಸಮತೋಲಿತ ಜಲಾಶಯ ನಿರ್ಮಾಣಕ್ಕೆ ಸಂಬಂಧಿಸಿದ ಭೂ ಸ್ವಾಧೀನ ಹಾಗೂ ಆರ್ಥಿಕ ವಿಚಾರವಾಗಿ ನಾವು ಈಗಾಗಲೇ ಚರ್ಚೆ ಮಾಡಿದ್ದೇವೆ. ಹೀಗಾಗಿ ಈ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ…

ಸಿಡಿ ಬಂಡಿ

ಡಾ.ಶಿವಕುಮಾರ್ ಕಂಪ್ಲಿ ಸಾಹಿತ್ಯ ವಲಯದಲ್ಲಿ ಚಿರಪರಿಚಿತ ಹೆಸರು,ಮೂಲತಃ ಕಂಪ್ಲಿಯವರಾದರೂ ಅವರು ಬೆಳದದ್ದು ಓದಿದ್ದು ಚಿತ್ರದುರ್ಗ,ಬಳ್ಳಾರಿಯಲ್ಲಿ ಕುವೆಂಪು ವಿ.ವಿ.ಯಲ್ಲಿ ಕನ್ನಡ ಸ್ನಾತಕೋತ್ತರ ಪದವಿ ಪಡೆದ ನಂತರ,ಹಂಪಿ. ಕನ್ನಡ ವಿ.ವಿಯಲ್ಲಿ  ಶ್ರೀ ಶ್ರೀ ಮತ್ತು ಸಿದ್ದಲಿಂಗಯ್ಯ ಕುರಿತು ಸಂಶೋಧನೆಗೆ ಪಿ.ಎಚ್.ಡಿ.ಪದವಿ ಪಡೆದಿರುವ ಅವರು ಪ್ರದ್ಯಾಪಕರಾಗಿ ಈಗ ದಾವಣಗೆರೆ ವಿ.ವಿ.ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಅನುವಾದದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಅವರು ಹಲವಾರು ತೆಲುಗು ಕತೆಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ, ಸೂರ್ಯನಿಗೆ ಗೆಜ್ಜೆಯ ಕಟ್ಟಿ ( ಆಶಾರಾಜು ಕವಿತೆಗಳು)ಸ್ತ್ರೀ ಪರ್ವ(ಸಿಂಹ ಪ್ರಸಾದ್ ಕಾದಂಬರಿ) ಅನುವಾದಿಸಿದ್ದಾರೆ.ಅಗ್ನಿಕಿರೀಟ(ಕವನಸಂಕಲನ),ನವಿಲಗನ್ನಡಿ, ಕಾಲುಜಾಡು.…

ಉಡುಪಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಮಾಷ್‌ ಮೇಕ್ಸ್‌ನ ಬಯೊಚಾರ್‌ ತಯಾರಿಕಾ ಘಟಕ ಸ್ಥಾಪನೆ

ಬೆಂಗಳೂರು,ಜೂ,20-ಸುಸ್ಥಿರ ಇಂಧನ ಪರಿಹಾರಗಳಲ್ಲಿ ಮುಂಚೂಣಿಯಲ್ಲಿ ಇರುವ ಡೆನ್ಮಾರ್ಕ್‌ನ ಮಾಷ್ ಮೇಕ್ಸ್ ಕಂಪನಿಯು ಉಡುಪಿಯಲ್ಲಿ ಅಂದಾಜು ₹100 ಕೋಟಿ ವೆಚ್ಚದಲ್ಲಿ ಮಣ್ಣಿನ ಫಲವತ್ತತೆ ಸುಧಾರಿಸುವ ಗೋಡಂಬಿ ಸಂಸ್ಕರಣೆಯ ತ್ಯಾಜ್ಯ ಬಳಸಿ ಸಮೃದ್ಧ ಇಂಗಾಲ ಹೊಂದಿರುವ ಬಯೊಚಾರ್ ತಯಾರಿಸುವ ಘಟಕ ಸ್ಥಾಪಿಸಲಿದೆʼ ಎಂದು ಬೃಹತ್ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ಇದು ಭಾರತದಲ್ಲಿನ ಮೊದಲ ಅತ್ಯಾಧುನಿಕ ತಂತ್ರಜ್ಞಾನದ ಬಯೊಚಾರ್‌ ತಯಾರಿಕಾ ಘಟಕವಾಗಿರಲಿದೆ. ಇಂತಹ ಪರಿಸರ ಸ್ನೇಹಿ ಪರಿಹಾರಗಳನ್ನು ಅಭಿವೃದ್ಧಿಪಡಿಸುತ್ತಿರುವ ಕಂಪನಿಯ ಪ್ರಯತ್ನಗಳನ್ನು ಸಚಿವರು ಶ್ಲಾಘಿಸಿದ್ದಾರೆ. ಈ…

ವಸತಿ ಯೋಜನೆಗಳಲ್ಲಿ ಶೇ. 15 ಮೀಸಲಾತಿ- ಕೇಂದ್ರದ ಮಾದರಿ ಅನುಸರಿಸಿದ್ದೇವೆ – ಜಮೀರ್

ಬೆಂಗಳೂರು,ಜೂ,20- ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇ. 15 ರಷ್ಟು ಮೀಸಲು ನಿರ್ಧಾರ ಈಗ ಕೈಗೊಂಡ ತೀರ್ಮಾನ ವಲ್ಲ. 2019 ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗಿದ್ದಾಗ ರಚಿಸಿದ್ದ ಸಂಪುಟ ಉಪ ಸಮಿತಿ ಶಿಫಾರಸ್ಸು ಮಾಡಿತ್ತು ಎಂದು ವಸತಿ ಹಾಗೂ ಅಲ್ಪಸಂಖ್ಯಾತ ರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ ಈ ಕುರಿತು ಹೇಳಿಕೆ ನೀಡಿರುವ ಅವರು, ಸಾಚಾರ್ ಸಮಿತಿ ವರದಿ ಪ್ರಕಾರ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ವಸತಿ ಯೋಜನೆಗಳಲ್ಲಿ ಶೇ.…

ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದಿದೆ “ಮತ್ತೆ ಮೊದಲಿಂದ” ಗೀತಗುಚ್ಛ

ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ ನಿರ್ಮಿಸಿರುವ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಕರಾವಳಿ ಮೂಲದ ನೂತನ ಪ್ರತಿಭೆ ಸಂಜನ್ ಕಜೆ ನಾಯಕನಾಗಿ ನಿಧಿ ಸುಬ್ಬಯ್ಯ, ಅಮೀತ ಎಸ್ ಕುಲಾಲ್, ದೇವಿಕಾ ಶಿಂಧೆ ಹಾಗೂ ಅಂಜಲಿ ಗೌಡ ನಾಯಕಿಯರಾಗಿ ನಟಿಸಿರುವ ಗೀತಗುಚ್ಛ (ಆಲ್ಬಂ) “ಮತ್ತೆ ಮೊದಲಿಂದ”. ಈ ಆಲ್ಬಂ ನಲ್ಲಿ ನಾಲ್ಕು ಹಾಡುಗಳಿದೆ. ನಾಡಿನ ಜನಪ್ರಿಯ ಗಾಯಕ – ಗಾಯಕಿಯರು ಈ ಹಾಡುಗಳನ್ನು ಹಾಡಿದ್ದಾರೆ. ನಾಲ್ಕು ಬಣ್ಣಗಳ ಅಚ್ಚ ಕನ್ನಡ ಹಾಡುಗಳ ʼಮತ್ತೆ ಮೊದಲಿಂದʼ ಆಲ್ಬಂನ ಮೊದಲ ಹಾಡು…

ಸರಕಾರದ ನಿರ್ಧಾರದಿಂದ ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ – ಪ್ರಲ್ಹಾದ್ ಜೋಶಿ

ಬೆಂಗಳೂರು,ಜೂ,19-ವಸತಿ ಇಲಾಖೆಯ ವಿವಿಧ ಮನೆ ಹಂಚಿಕೆ ಯೋಜನೆಗಳಲ್ಲಿ ಶೇ 15ರಷ್ಟು ಮುಸಲ್ಮಾನರಿಗೆ ಹಂಚಿಕೆ ಮಾಡಲು ಮುಂದಾಗಿದೆ. ರಾಜ್ಯ ಸರಕಾರದ ಈ ನಿರ್ಧಾರದಿಂದ ಸಾಮಾನ್ಯ ಜನರು, ಎಸ್‍ಸಿ, ಎಸ್‍ಟಿ, ಒಬಿಸಿ ಜನರ ಮೀಸಲಾತಿಗೆ ಧಕ್ಕೆ ಆಗಲಿದೆ; ಇದು ಖಂಡನೀಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರವು ವಸತಿ ಯೋಜನೆಗಳಡಿ ಮುಸ್ಲಿಮರಿಗೆ ಶೇ 15 ಮೀಸಲಾತಿ ನೀಡಿದೆ. ಯಾವುದೇ ಮಾದರಿಯ…

1 4 5 6 7 8 120
Girl in a jacket