“ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್ ಬಿಡುಗಡೆ
ಮೇಘಶ್ರೀ ರಾಜೇಶ್ ನಿರ್ಮಾಣದ, ಜೆ.ವಿ.ಆರ್ ದೀಪು ನಿರ್ದೇಶನದ ಹಾಗೂ “ಫ್ರೆಂಚ್ ಬಿರಿಯಾನಿ” ಖ್ಯಾತಿಯ ಮಹಾಂತೇಶ್ ಹಿರೇಮಠ ನಾಯಕನಾಗಿ ನಟಿಸಿರುವ ಗ್ವರಯಕಥಾಹಂದರ ಹೊಂದಿರುವ “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಯುವ ರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಮಸಾಲ ಜಯರಾಮ್, ಸುಬ್ರಹ್ಮಣ್ಯ, ರೂಪಾಲಿ,ನಿರ್ಮಾಪಕರಾದ ನವರಸನ್, ರಮೇಶ್, ಸುರೇಶ್, ನಟಿ ಕಾರುಣ್ಯ ರಾಮ್ ಹಾಗೂ ನಿರ್ದೇಶಕರಾದ ಗುರು ದೇಶಪಾಂಡೆ, ಜಡೇಶ್ ಕೆ ಹಂಪಿ, ಎಸ್ ಗೋವಿಂದ್,ಸುಕೇಶ್ ಶೆಟ್ಟಿ, ದೇವನೂರು ಚಂದ್ರು,…




















