ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಆರ್.ಎಸ್.ಎಸ್. ಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಜೂ, 28- ಆರ್.ಎಸ್.ಎಸ್. ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನೆಡೆದ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ಆರ್.ಎಸ್.ಎಸ್ ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ ಎಂಬ ಹೇಳಿಕೆಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಆರ್.ಎಸ್.ಎಸ್ ಅವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಸಂವಿಧಾನ…