ಅಧಿಕಾರಿಗಳಿಗೆ ಸಿಎಂ ಖಡಕ್ ಎಚ್ಚರಿಕೆ
ಮಂಗಳೂರು, ಆ,೧೨; ಜಿಲ್ಲೆಯಲ್ಲಿ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ವಿರುದ್ಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳ ಸಭೆ ನಡೆಸುವ ವೇಳೆ ಕೊರೊನಾ ನಿರ್ಲಕ್ಷ್ಯದ ಮಾತು ಹೊರಬಂದಾಗ ಸಿಎಂ ಈ ಆಕ್ರೋಶ ವ್ಯಕ್ತಪಡಿಸಿದರು. ನನ್ನ ಪ್ರಗತಿ ಪರಿಶೀಲನೆ ಸ್ಟೈಲ್ ಸ್ವಲ್ಪ ಬೇರೆ…