ನಟ ಪುನೀತ್ ರಾಜ್‌ಕುಮಾರ್‌ಗೆ ಶೀಘ್ರದಲ್ಲೇ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು : ಸಿಎಂ
ಬೆಳಗಾವಿ,ಡಿ,೧೩: ಅಗಲಿದ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದೇವೆ. ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮದ ದಿನಾಂಕ ಶೀಘ್ರ ಪ್ರಕಟ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಸಂತಾಪ ಸೂಚಕದ ನಿರ್ಣಯದ ಮೇಲೆ ಮಾತನಾಡಿದ ಸಿಎಂ, ಅದೇ ರೀತಿ ಶೀಘ್ರದಲ್ಲೇ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುತ್ತೇವೆ. ವಿಪಕ್ಷದ ನಾಯಕರು ಸಹ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುವಂತೆ ಪತ್ರ ಬರೆದಿದ್ದರು ಎಂದು ಹೇಳಿದರು. ಪ್ರತಿಭೆ ಮತ್ತು ಸಾಧಕರು ಅಲ್ಪಾಯುಷಿಗಳು…