ಕಚ್ಚಾತೈಲ ಬೆಲೆ ಕುಸಿದರೂ ಪರಿಷ್ಕರಣೆಯಾಗದ ಇಂಧನ ಬೆಲೆ..!
ನವದೆಹಲಿ, ಆ, 09: ಜಾಗತಿಕವಾಗಿ ಕಚ್ಚಾತೈಲ ಬೆಲೆ ಈ ವಾರದಲ್ಲಿ ತೀವ್ರ ಕುಸಿತವಾದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 23 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಆಗಸ್ಟ್ 9ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿತ್ತು.…