ಸ್ವಾತಂತ್ರ್ಯಹೋರಾಟಗಾರರನ್ನು ಸ್ಮರಿಸಿದ ಪ್ರಧಾನಿ ಮೋದಿ
ನವದೆಹಲಿ,ಆ,15: ಭಾರತದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ದಿನವಿದು. ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ ಪ್ರತಿಯೊಬ್ಬ ವ್ಯಕ್ತಿಯನ್ನು ದೇಶವು ಸ್ಮರಿಸುತ್ತಿದೆ, ಏಕೆಂದರೆ ದೇಶವು ಇವರೆಲ್ಲರಿಗೂ ಋಣಿಯಾಗಿದೆ ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಆಜಾದಿ ಕಾ ಅಮೃತ ಮಹೋತ್ಸವದ ಶುಭಾಶಯ ಕೋರಿದರು. 75ನೇ ಸ್ವಾತಂತ್ರ್ಯ ದಿನದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೋದಿ, ಭಾರತದ ಮೊದಲ ಪ್ರಧಾನಿ ನೆಹರೂ, ದೇಶವನ್ನು ಏಕೀಕೃತ ರಾಷ್ಟ್ರವನ್ನಾಗಿ ಮಾಡಿದ ಸರ್ದಾರ್ ವಲ್ಲಭಬಾಯಿ ಪಟೇಲ್,…