ಮಡಿವಾಳ ಸಮಾಜದ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಏ.18-“ಮಡಿವಾಳ ಸಮುದಾಯ ಸದಾ ನಮ್ಮ ಬೆಂಬಲಕ್ಕೆ ನಿಂತಿದೆ. ಅವರ ಬೇಡಿಕೆಗಳಿಗೆ ಸ್ಪಂದಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಗೇರಿಯಲ್ಲಿ ಮಾಚಿದೇವ ಗುರುಪೀಠ ವಿಶ್ವಸ್ತ ಸಮಿತಿ ವತಿಯಿಂದ ಹೊಸದಾಗಿ ನಿರ್ಮಿಸಿರುವ ಕಲ್ಯಾಣ ಮಂಟಪ ‘ಕಲಿದೇವ ಕನ್ವೆನ್ಷನ್ ಹಾಲ್’ ಉದ್ಘಾಟನೆ ಸಮಾರಂಭದಲ್ಲಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಈ ಸಮಾಜದ ಜತೆಗಿನ ಒಡನಾಟದಲ್ಲಿ ನಿಮ್ಮ ಸಮಸ್ಯೆ, ಹೋರಾಟವನ್ನು ನಾನು ನೋಡಿದ್ದೇನೆ. ನಮ್ಮ ತಾಲೂಕು ಹಾಗೂ ಜಿಲ್ಲೆಯಲ್ಲಿ ಕೂಡ ಗಮನಿಸಿದ್ದೇನೆ. ಈ…