ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಕುರಿತು ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ : ಸಿಎಂ
ನವದೆಹಲಿ, ಡಿ,೨ :ಇದೇ ೬ ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ , ಆರೋಗ್ಯ , ಕಾನೂನು ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ೨ ನೇ ನ್ಯಾಯಾಧಿಕರಣದ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ…




















