ಆಪರೇಷನ್ ಕಮಲದ ಮೂಲಕ ದುರಾಡಳಿತ ನಡೆಸಿದ ಬಿಜೆಪಿ; ಸಿದ್ದು ಟೀಕೆ
ಬೆಂಗಳೂರು,ಜು29 : ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ, ದುರಾಡಳಿತಗಳಿಂದಲೇ ಎರಡು ವರ್ಷ ಪೂರೈಸಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಎರಡರಲ್ಲೂ ಬಿಜೆಪಿ ಸರ್ಕಾರ ಇದ್ದರೆ ಸ್ವರ್ಗವನ್ನೇ ಸೃಷ್ಟಿಸುತ್ತೀವಿ ಎಂದು ಜನರನ್ನು ನಂಬಿಸಿ ರಾಜ್ಯವನ್ನು ಲೂಟಿ ಹೊಡೆದರು. ಕೊರೋನ ಸಂದರ್ಭದಲ್ಲೂ ವಿಪರೀತ ಭ್ರಷ್ಟಾಚಾರ ನಡೆಸಿದ್ದು ಮಾತ್ರವಲ್ಲದೆ ಮಕ್ಕಳ ಪೌಷ್ಠಿಕಾಂಶ ಹೆಚ್ಚಿಸಲಿಕ್ಕಾಗಿ ಮೀಸಲಿಟ್ಟ ಮೊಟ್ಟೆಯ ಹಣವನ್ನೂ ಸರ್ಕಾರ ನುಂಗಿ ನೀರು ಕುಡಿಯಿತು ಎಂದು ಅವರು…